Homeಮುಖಪುಟಕೇರಳದಲ್ಲಿ 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಅಸಂವಿಧಾನಿಕ ಸಿಎಎ ಕಾಯ್ದೆ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಬೆನ್ನಲ್ಲಿ ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವುದಿಲ್ಲ ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದು,  ತಮ್ಮ ಸರ್ಕಾರ ಸಿಎಎ ವಿಚಾರದಲ್ಲಿ ಈ ಮೊದಲು ತೆಗೆದುಕೊಂಡ ನಿರ್ಣಯಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ದೇಶಾಭಿಮಾನಿ ಸಾಹಿತ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಪಿಣರಾಯ್ ವಿಜಯನ್, ಸಿಎಎ ಕಾಯ್ದೆಯು ಒಂದು ವರ್ಗದ ಜನರಿಗೆ ಅನೀತಿಯನ್ನುಂಟುಮಾಡುವ ಗುರಿಯನ್ನು ಹೊಂದಿದೆ. ಸಿಎಎ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಹೇಳುವುದನ್ನು ನಾವು ಕೇಳಿದ್ದೇವೆ. ಕೇರಳದಲ್ಲಿ ಇದನ್ನು ಜಾರಿಗೆ ತರುವುದಿಲ್ಲ ಎಂದು ನಾವು ಈಗಾಗಲೇ ಹೇಳಿದ್ದೇವೆ ಮತ್ತು ಇನ್ನು ಮುಂದಕ್ಕೂ ಅದು ಎಲ್‌ಡಿಎಫ್‌ ಸರ್ಕಾರದ ಅಚಲ ನಿಲುವಾಗಿದೆ ಎಂದು ಹೇಳಿದ್ದಾರೆ.

ಭಾರತವನ್ನು ಜಾತ್ಯತೀತ ರಾಷ್ಟ್ರದಿಂದ ಧಾರ್ಮಿಕ ರಾಷ್ಟ್ರವಾಗಿ ಪರಿವರ್ತಿಸಲು ದೇಶದಲ್ಲಿ ತ್ವರಿತ ಪ್ರಯತ್ನಗಳು ನಡೆಯುತ್ತಿವೆ. ಈ ಎಲ್ಲಾ ಅಪಾಯಕಾರಿ ಪ್ರವೃತ್ತಿಗಳು ಮತ್ತು ನಡೆಗಳನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದಾರೆ.

ಎಂ ಕೆ ಸ್ಟಾಲಿನ್ ಹೇಳಿಕೆ:

ಈ ಮೊದಲು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡಿಗೆ ಕಾಲಿಡಲು ನಾವು ಬಿಡುವುದಿಲ್ಲ ಎಂದು ನಾನು ಜನರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದರು. ತಮಿಳುನಾಡಿನಲ್ಲಿ ಡಿಎಂಕೆ ವಿರೋಧ ಪಕ್ಷದಲ್ಲಿದ್ದಾಗ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಿತ್ತು. ಡಿಎಂಕೆ ಸಿಎಎ ಅನುಷ್ಠಾನದ ವಿರುದ್ಧ 20 ಮಿಲಿಯನ್ ಸಹಿಗಳನ್ನು ಸಂಗ್ರಹಿಸಿತ್ತು ಮತ್ತು ಅದನ್ನು ಅಂದಿನ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿತ್ತು. ನಾವು 2021ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ, ಸಿಎಎ ಹಿಂಪಡೆಯಲು ಒತ್ತಾಯಿಸಿ  ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಡಿಎಂಕೆ ಸರ್ಕಾರವು ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದ್ದರು.

ಕೇಂದ್ರ ಸಚಿವರ ಹೇಳಿಕೆ;

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಏಕೆಂದರೆ ಇದು ಈ ನೆಲದ ಕಾನೂನು ಎಂದು ಪ್ರತಿಪಾದಿಸಿದ್ದರು.

ಏನಿದು ಸಿಎಎ?

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಭಾರತದ ಸಂವಿಧಾನದಲ್ಲಿ ಅವಕಾಶ ಇಲ್ಲ, ಆದ್ದರಿಂದ ಈ ಅಸಂವಿಧಾನಿಕ ಕಾಯ್ದೆ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...