Homeಮುಖಪುಟಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

- Advertisement -
- Advertisement -

ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ತಾರತಮ್ಯ ನೀತಿ ಖಂಡಿಸಿ ಕರ್ನಾಟಕ ಸರ್ಕಾರದಿಂದ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ನಾಳೆ ಇದೇ ಜಾಗದಲ್ಲಿ ಕೇರಳ ಸರ್ಕಾರ ಪ್ರತಿಭಟಿಸಲಿದೆ.

ಕೇಂದ್ರದ ಆರ್ಥಿಕ ತಾರತಮ್ಯ ಖಂಡಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್)ದ ಶಾಸಕರು ಮತ್ತು ಸಂಸದರೊಂದಿಗೆ ಗುರುವಾರ (ಫೆ 8) ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಕೇರಳವನ್ನು ನಿರ್ಲಕ್ಷಿಸಿರುವ ಕೇಂದ್ರದ ಧೋರಣೆಯ ವಿರುದ್ಧ ಫೆ.8ರಂದು ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ತಮಿಳುನಾಡು, ದೆಹಲಿ ಮತ್ತು ಪಂಜಾಬ್ ಸರ್ಕಾರಗಳು ಬೆಂಬಲ ಘೋಷಿಸಿವೆ ಎಂದು ಎಲ್‌ಡಿಎಫ್ ಸರ್ಕಾರದ ಕೆವಿ ಥಾಮಸ್ ಹೇಳಿದ್ದಾರೆ.

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರಿಗೆ ಸಿಎಂ ಪಿಣರಾಯಿ ವಿಜಯನ್ ಧನ್ಯವಾದ ತಿಳಿಸಿದ್ದಾರೆ. “ಸ್ಟಾಲಿನ್ ಅವರ ಈ ನಡೆ ಹೋರಾಟಕ್ಕೆ ಪ್ರೋತ್ಸಾಹ ನೀಡಲಿದೆ ಮತ್ತು ಒಕ್ಕೂಟ ತತ್ವಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಹಿಮ್ಮೆಟ್ಟಿಸಲಿದೆ ಎಂದಿದ್ದಾರೆ.

ಫೆ.1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಆ ಬಳಿಕ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ಸಿಡಿದ್ದೆದ್ದಿದ್ದು ‘ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದೆ. ನಮಗೆ ಬರಬೇಕಿದ್ದ ತೆರಿಗೆ ಪಾಲನ್ನು ಕೊಟ್ಟಿಲ್ಲ’ ಎಂದು ಹೋರಾಟಕ್ಕೆ ಇಳಿದಿದೆ.

ಕೇಂದ್ರದ ತಾರತಮ್ಯ ನೀತಿಯಿಂದ 2017-18ನೇ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 1 ಲಕ್ಷದ 87 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ರಾಜ್ಯದಿಂದ ಕೇಂದ್ರಕ್ಕೆ 100 ರೂಪಾಯಿ ಹೋದರೆ ವಾಪಸ್‌ ಬರುತ್ತಿರುವುದು ಕೇವಲ 12-13 ರೂ.ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರದಿಗಳ ಪ್ರಕಾರ, ಕೇಂದ್ರದಿಂದ ಕೇರಳ ಸರ್ಕಾರಕ್ಕೆ 780 ಕೋಟಿ ರೂಪಾಯಿ ಜಿಎಸ್‌ಟಿ ಪಾಲು ಬರಲು ಬಾಕಿಯಿದೆ. ಇತರ ಅನುದಾನಗಳ ಹಂಚಿಕೆಯಲ್ಲೂ ಕೊರತೆಯಾಗಿದೆ ಎಂದು ಸರ್ಕಾರ ಆರೋಪಿಸಿದೆ.

ಜಿಎಸ್‌ಟಿ ಪರಿಹಾರದ ಬಾಕಿ ಉಳಿದಿರುವ 16,982 ಕೋಟಿ ರೂ.ಗಳನ್ನು ರಾಜ್ಯಗಳಿಗೆ ನೀಡಲಾಗುವುದು. ಕೇಂದ್ರವು ತನ್ನ ಸ್ವಂತ ಸಂಪನ್ಮೂಲಗಳಿಂದ ಮೊತ್ತವನ್ನು ಬಿಡುಗಡೆ ಮಾಡಲಿದೆ ಮತ್ತು ಭವಿಷ್ಯದ ಸೆಸ್ ಸಂಗ್ರಹದಿಂದ ಅದನ್ನು ಮರುಪಾವತಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್ ಭಾಷಣದ ಬಳಿಕ ಹೇಳಿದ್ದರು.

ಇದನ್ನೂ ಓದಿ : ಕೇಂದ್ರದ ವಿರುದ್ದ ‘ದೆಹಲಿ ಚಲೋ’ : ರಾಜ್ಯ ಸರ್ಕಾರದಿಂದ ‘ನನ್ನ ತೆರಿಗೆ ನನ್ನ ಹಕ್ಕು’ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...