Homeಮುಖಪುಟವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

ವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

- Advertisement -
- Advertisement -

ಕೊಚ್ಚಿ ಸ್ಪೋಟಕ್ಕೆ ಸಂಬಂಧಿಸಿದ ಪೋಸ್ಟ್‌ ಕುರಿತು ದಾಖಲಾದ ಎರಡು ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಡಿ.14 ರವರೆಗೆ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಕ್ರಿಶ್ಚಿಯನ್ ಧಾರ್ಮಿಕ ಗುಂಪು ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿ ಸಚಿವ ರಾಜೀವ್ ಚಂದ್ರಶೇಖರ್ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕಿದ್ದರು. ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ನ್ಯಾಯಮೂರ್ತಿ ಸಿ ಎಸ್ ಡಯಾಸ್ ಅವರು ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಚಂದ್ರಶೇಖರ್ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿದ್ದಾರೆ.  ಎರಡೂ ಪ್ರಕರಣಗಳ ಬಗ್ಗೆ ತನ್ನ ನಿಲುವನ್ನು ಕೋರಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಡಿ.14 ರಂದು ಎರಡು ಪ್ರಕರಣಗಳನ್ನು ಹೆಚ್ಚಿನ ವಿಚಾರಣೆಗೆ ದಿನ ನಿಗದಿಗೊಳಿಸಿದ್ದು, ಅಲ್ಲಿಯವರೆಗೆ ಚಂದ್ರಶೇಖರ್ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಪೋಟಕ್ಕೆ ಸಂಬಂಧಿಸಿ ಸಚಿವ ರಾಜೀವ್ ಚಂದ್ರಶೇಖರ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪೋಸ್ಟ್‌ನ್ನು ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರು ಮೊದಲು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿದ್ದರು. ಆ ಬಳಿಕ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ಅವರ ದೂರಿನ ಮೇರೆಗೆ ರಾಜೀವ್ ಚಂದ್ರಶೇಖರ್ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು. ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿತ್ತು.

ರಾಜೀವ್ ಚಂದ್ರಶೇಖರ್ ಪೋಸ್ಟ್‌ನಲ್ಲಿ ಏನಿತ್ತು?

ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌  ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಏನಿದು ಘಟನೆ?

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ  ಯೆಹೋವನ ಸಾಕ್ಷಿಗಳ ಸಮಾವೇಶ ನಡೆಯುತ್ತಿದ್ದ ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಅ.29ರಂದು ಪ್ರಾರ್ಥನಾ ಅಧಿವೇಶನಕ್ಕಾಗಿ  ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು. ಈ ವೇಳೆ ಕನ್ವೆನ್ಷನ್ ಸೆಂಟರ್‌ನಲ್ಲಿ ಸರಣಿ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ 6 ಮಂದಿ ಮೃತಪಟ್ಟು 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಘಟನೆಯ ಬೆನ್ನಲ್ಲೇ  ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು. ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಇದ್ದೆ. ಅವರ ಸಿದ್ದಾಂತಗಳ ಕುರಿತ ಅಭಿಪ್ರಾಯಗಳ ವ್ಯತ್ಯಾಸದಿಂದ ಕೃತ್ಯ ಎಸಗಿರುವುದಾಗಿ ಆತ ಬಂಧನಕ್ಕೆ ಮೊದಲು ತಾನು ಮಾಡಿದ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read