Homeಮುಖಪುಟ'ಎಲ್ಲಾ ಮುಸ್ಲಿಮರು ಭಯೋತ್ಪಾದಕರು' ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು...

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

- Advertisement -
- Advertisement -

ಟಿವಿ ವಾಹಿನಿಯಲ್ಲಿ ಚರ್ಚೆಯ ಸಂದರ್ಭ ನೀಡಿದ ದ್ವೇಷದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ (ಫೆ.21) ತಿರಸ್ಕರಿಸಿದ್ದು, “ಜಾಮೀನು ಕೊಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ” ಎಂದು ಹೇಳಿದೆ.

ಜನವರಿ 5, 2025ರಂದು ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಪಿ.ಸಿ ಜಾರ್ಜ್, “ಭಾರತದಲ್ಲಿರುವ ಎಲ್ಲಾ ಮುಸ್ಲಿಮರು ಭಯೋತ್ಪಾದಕರು ಮತ್ತು ಕೋಮುವಾದಿಗಳು. ಭಾರತದಲ್ಲಿ ಭಯೋತ್ಪಾದಕರಲ್ಲದ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ. ಮುಸ್ಲಿಮರು ದೇಶದ ಸಂಪತ್ತನ್ನು ಲೂಟಿ ಮಾಡುವ ಲೂಟಿಕೋರರು. ಮುಸ್ಲಿಂ ರಾಷ್ಟ್ರವನ್ನು ರಚಿಸಲು ಮುಸ್ಲಿಮರು ಲಕ್ಷಾಂತರ ಹಿಂದೂಗಳು ಮತ್ತು ಕ್ರಿಶ್ಚಿಯನ್ನರನ್ನು ಹತ್ಯೆ ಮಾಡಿದ್ದಾರೆ. ಎಲ್ಲಾ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು. ಎಲ್ಲಾ ಮುಸ್ಲಿಮರು ಕೋಮು ರಾಕ್ಷಸರು ಮತ್ತು ದುಷ್ಟರು” ಎಂದು ಹೇಳಿದ್ದರು.

“ರಾಜಕಾರಣಿಗಳು ಸಮಾಜಕ್ಕೆ ಮಾದರಿಯಾಗಿರಬೇಕು. ಧರ್ಮ, ಜಾತಿ ಇತ್ಯಾದಿಗಳನ್ನು ಆಧರಿಸಿ ಹೇಳಿಕೆಗಳನ್ನು ನೀಡುವ ಇಂದಿನ ಪ್ರವೃತ್ತಿಯನ್ನು ಚಿಗುರಿನಲ್ಲೇ ಕಿತ್ತೊಗೆಯಬೇಕು. ಏಕೆಂದರೆ ಅವು ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ” ಎಂದು ಜಾಮೀನು ನಿರಾಕರಿಸುವ ವೇಳೆ ನ್ಯಾಯಾಲಯ ಹೇಳಿದೆ.

“ಇಂತಹ (ದ್ವೇಷದ) ಹೇಳಿಕೆಗಳನ್ನು ನೀಡುವ ಅಪರಾಧಿಗೆ ಕೇವಲ ದಂಡ ವಿಧಿಸುವ ಮೂಲಕ ತಪ್ಪಿಸಿಕೊಳ್ಳಲು ಅವಕಾಶ ನೀಡಬೇಕೇ ಎಂಬುದರ ಬಗ್ಗೆ ಸಂಸತ್ತು ಮತ್ತು ಕಾನೂನು ಆಯೋಗ ತೀರ್ಮಾನಿಸಬೇಕು” ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಜಾರ್ಜ್ ಅವರಂತೆ ದ್ವೇಷದ ಹೇಳಿಕೆಗಳನ್ನು ನೀಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಜೈಲು ಶಿಕ್ಷೆ ವಿಧಿಸುವ ಅಗತ್ಯತೆಯ ಬಗ್ಗೆ ಹೈಕೋರ್ಟ್ ಸಂಸತ್ ಮತ್ತು ಕಾನೂನು ಆಯೋಗದ ಗಮನ ಸೆಳೆದಿದೆ.

ಐಪಿಸಿ ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) ಮತ್ತು 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಅಪರಾಧಗಳಿಗೆ ಕಾರಣವಾಗುವ ಯಾವುದೇ ಹೇಳಿಕೆಯನ್ನು ನೀಡಬಾರದು ಎಂಬ ಷರತ್ತಿನ ಮೇಲೆ 2022ರಲ್ಲಿ ಪಿ.ಸಿ ಜಾರ್ಜ್ ಅವರಿಗೆ ಎರಡು ಪ್ರಕರಣಗಳಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು ಎಂದು ನ್ಯಾಯಮೂರ್ತಿ ಪಿ.ವಿ ಕುನ್ಹಿಕೃಷ್ಣನ್ ಹೇಳಿದ್ದಾರೆ.

ಐಪಿಸಿ ಸೆಕ್ಷನ್‌ಗಳಾದ 153 ಎ ಮತ್ತು 295ಎ ಹೊಸ ಕ್ರಿಮಿನಲ್ ಕಾನೂನು ಬಿಎನ್‌ಎಸ್ ಅಡಿ ಕ್ರಮವಾಗಿ ಸೆಕ್ಷನ್ 196 ಮತ್ತು 299 ಆಗಿದೆ. ಇದರಡಿ ಪಿ.ಸಿ ಜಾರ್ಜ್ ವಿರುದ್ದದ ಇತ್ತೀಚಿನ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಜಾರ್ಜ್ ಅವರು 2022ರಲ್ಲಿ ನೀಡಲಾದ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ, ಈಗ ಜಾಮೀನು ಕೊಟ್ಟರೆ ‘ಸಮಾಜಕ್ಕೆ ತಪ್ಪು ಸಂದೇಶ’ ನೀಡಿದಂತಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

“ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದರೂ, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಸಿಗುತ್ತದೆ ಎಂದು ಜನರು ಭಾವಿಸಬಹುದು. ಅಂತಹ ಸಂದೇಶ ಸಮಾಜಕ್ಕೆ ಹೋಗಬಾರದು. ಆದ್ದರಿಂದ, ಅರ್ಜಿದಾರರು (ಜಾರ್ಜ್) ನಿರೀಕ್ಷಣಾ ಜಾಮೀನಿಗೆ ಅರ್ಹರಲ್ಲ ಎಂದು ನಾನು ಪರಿಗಣಿಸುತ್ತೇನೆ. ಈ ಜಾಮೀನು ಅರ್ಜಿ ಸಲ್ಲಿಸಲು ಯಾವುದೇ ಅರ್ಹತೆ ಅವರಿಗೆ ಇಲ್ಲ. ಹಾಗಾಗಿ, ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಮೂರ್ತಿ ಕುನ್ಹಿಕೃಷ್ಣನ್ ತಿಳಿಸಿದ್ದಾರೆ.

“ಕೋಮು ಸೌಹಾರ್ದತೆಗೆ ದಕ್ಕೆ ತರುವಂತಹ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ ನಂತರ ಜಾರ್ಜ್ ಅವರು ಕ್ಷಮೆಯಾಚಿಸಿದರೆ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ಒಂದು ಚಾನೆಲ್‌ನ ನೇರ ಪ್ರಸಾರದ ಚರ್ಚೆಯಲ್ಲಿ ಭಾಗವಹಿಸಿದ್ದೇನೆ, ಲಕ್ಷಾಂತರ ಜನರು ಇದನ್ನು ವೀಕ್ಷಿಸುತ್ತಿದ್ದಾರೆ ಎಂಬ ಪರಿಜ್ಞಾನ ಅರ್ಜಿದಾರರಿಗೆ (ಜಾರ್ಜ್) ಇರಬೇಕಿತ್ತು. ಅಲ್ಲದೆ, ಮರುದಿನ ಫೇಸ್‌ಬುಕ್‌ನಲ್ಲಿ ಕ್ಷಮೆಯಾಚಿಸಿ ಪೋಸ್ಟ್ ಹಾಕುವುದು ಅಲ್ಲ. ಆದ್ದರಿಂದ, ಅರ್ಜಿದಾರರು ಕ್ಷಮೆಯಾಚಿಸಿದ ಮಾತ್ರಕ್ಕೆ ಅಪರಾಧ ಅಳಿಸಿಹೋಗುತ್ತದೆ ಎಂಬುದನ್ನು ನಾನು ಒಪ್ಪಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಕುನ್ಹಿಕೃಷ್ಣನ್ ಹೇಳಿದ್ದಾರೆ.

ಜಾರ್ಜ್ ಪರ ವಕೀಲರು ವಾದ ಮಂಡಿಸಿ, ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿಲ್ಲ ಮತ್ತು ಅವರ ಮೇಲೆ ದಾಖಲಾಗಿರುವ ಅಪರಾಧಗಳಿಗೆ ಏಳು ವರ್ಷಗಳಿಗಿಂತ ಕಡಿಮೆ ಜೈಲು ಶಿಕ್ಷೆ ಇದೆ. ಆದ್ದರಿಂದ ಅವರಿಗೆ ನಿರೀಕ್ಷಣಾ ಜಾಮೀನು ನೀಡಬಹುದು” ಎಂದಿದ್ದಾರೆ.

ಆದರೆ, ಹೈಕೋರ್ಟ್ ಈ ವಾದವನ್ನು ತಿರಸ್ಕರಿಸಿದೆ. “ಏಳು ವರ್ಷಗಳಿಗಿಂತ ಕಡಿಮೆ ಜೈಲು ಶಿಕ್ಷೆ ಇರುವ ಪ್ರಕರಣದಲ್ಲಿ ಕಸ್ಟಡಿ ವಿಚಾರಣೆ ಅಥವಾ ಗರಿಷ್ಠ ಜೈಲು ಶಿಕ್ಷೆಯ ಅಗತ್ಯವಿಲ್ಲದಿದ್ದರೆ ನಿಯಮಿತ ರೀತಿಯಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ” ಎಂದಿದೆ.

“ಆರೋಪಿಯ ಪೂರ್ವಾಪರ ಮತ್ತು ಆರೋಪದ ಗಂಭೀರತೆ ಕೂಡ ನ್ಯಾಯಾಲಯ ಪರಿಗಣಿಸಬೇಕಾದ ಪ್ರಮುಖ ಅಂಶಗಳಾಗಿವೆ” ಎಂದು ಹೇಳಿದೆ.

ಅರ್ಜಿದಾರ ( ಜಾರ್ಜ್) ನೀಡಿದ ಹೇಳಿಕೆಗಳ ವಿಡಿಯೋ ನೋಡಿದರೆ, ಪ್ರಾಥಮಿಕವಾಗಿ ಬಿಎನ್‌ಎಸ್‌ನ ಸೆಕ್ಷನ್ 196 ಮತ್ತು 299 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ” ಹೈಕೋರ್ಟ್ ತಿಳಿಸಿದೆ.

ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪಿಸಿ ಜಾರ್ಜ್ ವಿರುದ್ದ ಮುಸ್ಲಿಂ ಯೂತ್ ಲೀಗ್ ನಾಯಕ ಮುಹಮ್ಮದ್ ಶಿಹಾಬ್ ಅವರು ಎರಟ್ಟುಪೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಕೊಟ್ಟಾಯಂ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಅರ್ಜಿಯನ್ನು ತಿರಸ್ಕರಿಸಿದ ನಂತರ ಪಿ.ಸಿ ಜಾರ್ಜ್ ಹೈಕೋರ್ಟ್‌ ಮೊರೆ ಹೋಗಿದ್ದರು.

ಜಾರ್ಜ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 196(1)(ಎ) ಮತ್ತು 299 ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120(ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...