Homeಮುಖಪುಟಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

- Advertisement -
- Advertisement -

ಗಣರಾಜ್ಯೋತ್ಸವದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶಿಸಿದ ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಕೇರಳ ಹೈಕೋರ್ಟ್ ಅಮಾನತು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಶಿಶ್ ಜಿತೇಂದ್ರ ದೇಸಾಯಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ರಿಜಿಸ್ಟ್ರಾರ್ (ವಿಜಿಲೆನ್ಸ್) ಗೆ ನಿರ್ದೇಶನ ನೀಡಿದ್ದಾರೆ ಮತ್ತು ಹೈಕೋರ್ಟ್ ಸಭಾಂಗಣದಲ್ಲಿ ವಿವಾದಾತ್ಮಕ ಕಿರುನಾಟಕ ಪ್ರದರ್ಶನವನ್ನು ಯಾವ ಸಂದರ್ಭಗಳಲ್ಲಿ ನಡೆಸಲಾಯಿತು ಎಂಬುದರ ಕುರಿತು ಆಡಳಿತ ವಿಭಾಗದ ರಿಜಿಸ್ಟ್ರಾರ್  ಅವರಿಂದ ವಿವರಣೆಯನ್ನು ಕೇಳಿದ್ದಾರೆ.

ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ನಿರ್ದೇಶನದ ಮೇರೆಗೆ ಸಹಾಯಕ ರಿಜಿಸ್ಟ್ರಾರ್ ಸುಧೀಶ್ ಟಿ ಎ ಮತ್ತು ಕೋರ್ಟ್ ಕೀಪರ್ ಸುಧೀಶ್ ಪಿ ಎಂ ಅವರನ್ನು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಪಿ ಕೃಷ್ಣ ಕುಮಾರ್ ಅವರು ಅಮಾನತುಗೊಳಿಸಿದ್ದಾರೆ.

‘ಯಾವುದೋ ಒಂದು ವಸ್ತುವಿಗೆ ಔಷಧೀಯ ಗುಣವಿದೆ ಎಂದು ನಾನು ಹೇಳಿದರೆ, ಈ ಮೂರ್ಖರು ಗೋವಿನ ಸಗಣಿ ತಿನ್ನಲು ಸಹ ಹಿಂಜರಿಯುವುದಿಲ್ಲ ಎಂದು ಕಿರುನಾಟಕದಲ್ಲಿ ಒಂದು ಡೈಲಾಗ್ ಹೇಳುತ್ತದೆ. ‘ಅದು ನನ್ನ ಶಕ್ತಿ’ ಎಂದು ಪ್ರಧಾನಿ ಮೋದಿಯ ಪಾತ್ರದಲ್ಲಿ ನಟಿಸಿರುವ ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೂಡ ನಾಟಕದಲ್ಲಿದೆ.

ಹೈಕೋರ್ಟ್ ನೌಕರರ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರದರ್ಶಿಸಲಾದ ನಾಟಕದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಅವಹೇಳನಕಾರಿ ಸಂಗತಿಗಳಿವೆ ಎಂದು ಆರೋಪಿಸಿ ಬಿಜೆಪಿ ಕಾನೂನು ಘಟಕವು ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಿತ್ತು. ಈ ಕಿರುನಾಟಕದಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಜಲ ಜೀವನ್ ಮಿಷನ್ ಮತ್ತು ಭಾರತ್ ಕಿ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ.

ನಾಟಕವನ್ನು ಸ್ಪಷ್ಟ ರಾಜಕೀಯ ಅಜೆಂಡಾದೊಂದಿಗೆ ಪ್ರದರ್ಶನ ಮಾಡಲಾಗಿದೆ ಮತ್ತು ವಿಷಯಗಳು, ಚಿತ್ರಕಥೆ, ಸಂಭಾಷಣೆಗಳು ಮತ್ತು ಪಾತ್ರಗಳು ಕೇಂದ್ರ ಸರ್ಕಾರ ಮತ್ತು ನಿರ್ದಿಷ್ಟವಾಗಿ ಪ್ರಧಾನ ಮಂತ್ರಿಯ ನೀತಿಗಳನ್ನು ಟೀಕಿಸುತ್ತಿವೆ ಎಂದು ಹೈಕೋರ್ಟ್‌ಗೆ ದೂರು ನೀಡಲಾಗಿತ್ತು. ಹೈಕೋರ್ಟ್ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದ ನಂತರ ಕಿರುನಾಟಕವನ್ನು ಪ್ರದರ್ಶಿಸಲಾಗಿದೆ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮಲಯಾಳಂ ಭಾಷೆಯ ನಾಟಕದಲ್ಲಿ ಚಿತ್ರಕಥೆಗಾರ ಮತ್ತು ಪ್ರದರ್ಶಕರು ಪ್ರಧಾನ ಮಂತ್ರಿಯನ್ನು ಲೇವಡಿ ಮಾಡಿದರು ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಸೂಕ್ಷ್ಮವಾಗಿ ಅಪಹಾಸ್ಯ ಮಾಡಲಾಗಿದೆ. ಕಿರುನಾಟಕದಲ್ಲಿ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹೇಳಲಾಗಿತ್ತು. ‘ಆಜಾದಿ ಕಾ ಅಮೃತ್ ಮಹೋತ್ಸವ”ದ ಅಂಗವಾಗಿ ಕೇರಳದ ಹೈಕೋರ್ಟ್ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬಡತನ ನಿರ್ಮೂಲನೆಯಲ್ಲಿ ವಿಫಲತೆ, ಜಲ್ ಜೀವನ್ ಮಿಷನ್ ಮತ್ತು ಇತರ ಯೋಜನೆಗಳ ವೈಫಲ್ಯಕ್ಕಾಗಿ ಕೇಂದ್ರ ಸರ್ಕಾರವನ್ನು  ಕಿರುನಾಟಕದಲ್ಲಿ ಲೇವಡಿ ಮಾಡಲಾಗಿತ್ತು. ರಾಜಕೀಯ ಉದ್ದೇಶದಿಂದ ದೇಶಕ್ಕೆ ಮಾನಹಾನಿ ಮಾಡುವ ಉದ್ದೇಶದಿಂದ ಈ ಕಿರುನಾಟಕ ಪ್ರದರ್ಶಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...