Homeಮುಖಪುಟಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

- Advertisement -
- Advertisement -

ಪೋಕ್ಸೋ ಪ್ರಕರಣದ ಆರೋಪಿಗಳಾದ ಪ್ರಮುಖ ಮಲಯಾಳಂ ಸುದ್ದಿವಾಹಿನಿಯ ಮೂವರು ಪತ್ರಕರ್ತರಿಗೆ ಕೇರಳ ಹೈಕೋರ್ಟ್ ಸೋಮವಾರ (ಜ.20) ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

‘ರಿಪೋರ್ಟರ್ ಲೈವ್‌’ ಸುದ್ದಿ ವಾಹಿನಿಯ ಸಲಹಾ ಸಂಪಾದಕ ಅರುಣ್ ಕುಮಾರ್ ಕೆ, ವರದಿಗಾರ ಶಹಬಾಝ್ ಅಹ್ಮದ್ ಮತ್ತು ಇನ್ನೋರ್ವ ಪತ್ರಕರ್ತನಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪಿ.ವಿ. ಕುಂಞಿಕೃಷ್ಣನ್ ಅವರು ಪ್ರಕರಣದ ಆಧಾರವನ್ನು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ. ಲೈವ್‌ಲಾ ವರದಿಯ ಪ್ರಕಾರ, “ಅವರು ಪತ್ರಕರ್ತರು..ಪ್ರಕರಣದ ಸಂತ್ರಸ್ತೆಯೇ ದೂರು ನೀಡದಿರುವಾಗ, ನೀವು ಏಕೆ ದೂರು ದಾಖಲಿಸಿದ್ದೀರಿ?” ಎಂದು ನ್ಯಾಯಾಧೀಶರು ರಾಜ್ಯ ಸರ್ಕಾರವನ್ನು ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಮೂವರು ಪತ್ರಕರ್ತರ ವಿರುದ್ದ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಮನೋಭಾವದೊಂದಿಗೆ ಸನ್ನೆಗಳನ್ನು ಮಾಡಿದ ಅಪರಾಧಕ್ಕೆ ದಾಖಲಿಸುವ ಪೋಕ್ಸೋ ಕಾಯ್ದೆಯ ಸೆಕ್ಷನ್ 11(1) ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಜನವರಿ 4 ರಿಂದ 8ವರೆಗೆ ತಿರುವನಂತಪುರದಲ್ಲಿ ನಡೆದ ಕೇರಳ ರಾಜ್ಯ ಶಾಲಾ ಮಕ್ಕಳ ಕಲಾ ಸ್ಪರ್ಧೆಯ (ಕಲೋತ್ಸವಂ) ಸುದ್ದಿ ಪ್ರಸಾರದ ವೇಳೆ ರಿಪೋರ್ಟರ್ ಲೈವ್ ವಾಹಿನಿಯ ಪತ್ರಕರ್ತರು ಸ್ವರ್ಧಿಯೊಬ್ಬರ ಕುರಿತು ದ್ವಂದ್ವಾರ್ಥ ನೀಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಲೋತ್ಸವದಲ್ಲಿ ಸಾಂಪ್ರಾದಾಯಿಕ ‘ಒಪ್ಪನ ಪಾಟ್’ ಕಾರ್ಯಕ್ರಮದ ಸ್ಪರ್ಧಿಯಾಗಿದ್ದ ಬಾಲಕಿಯೊಬ್ಬರ ಕುರಿತು ಪತ್ರಕರ್ತರಾದ ಅರುಣ್ ಮತ್ತು ಶಹಬಾಸ್ 2012ರ ‘ಉಸ್ತಾದ್ ಹೋಟೆಲ್’ ಸಿನಿಮಾ ಉಲ್ಲೇಖಿಸಿ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ವಿ. ಮನೋಜ್ ಕುಮಾರ್ ಅವರು ದೂರು ದಾಖಲಿಸಿದ್ದರು. ಇದಕ್ಕೂ ಮೊದಲು, ಜನವರಿ 10ರಂದು, ಆಯೋಗವು ವಿಡಿಯೋಗೆ ಸಂಬಂಧಿಸಿದಂತೆ ಚಾನೆಲ್‌ನಿಂದ ವಿವರಣೆಯನ್ನು ಕೇಳಿತ್ತು.

ಆರೋಪಿ ಪತ್ರಕರ್ತರು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ, ವಿವಾದಕ್ಕೆ ಕಾರಣವಾದ ವಿಡಿಯೋವನ್ನು ಬಾಲಕಿಯ ಪೋಷಕರು ಮತ್ತು ಆಕೆಯ ಶಿಕ್ಷಕರ ಒಪ್ಪಿಗೆಯೊಂದಿಗೆ ರೆಕಾರ್ಡ್ ಮಾಡಿದ ಟೆಲಿ-ಸ್ಕಿಟ್ ಎಂದು ವಾದಿಸಿದ್ದಾಗಿ ವರದಿಗಳು ಹೇಳಿವೆ.

‘ರಿಪೋರ್ಟರ್ ಲೈವ್’ ಇತ್ತೀಚೆಗೆ ರಾಜಕೀಯ ಪಕ್ಷಗಳನ್ನು ಟೀಕಿಸುವ ವರದಿಗಳನ್ನು ಪ್ರಕಟಿಸಿದೆ ಎಂದು ಗಮನಸೆಳೆದ ಪತ್ರಕರ್ತರು, ತಮ್ಮ ವಿರುದ್ದದ ಪ್ರಕರಣವು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...