Homeಮುಖಪುಟ'ಎಂಪುರಾನ್‌' ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮಲಯಾಳಂ ಚಿತ್ರ ‘ಎಲ್2 : ಎಂಪುರಾನ್’ ಅನ್ನು ತಕ್ಷಣ ನಿಷೇಧಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ವಿವಿ ವಿಜೀಶ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ನೀಡಲು ಕೇರಳ ಹೈಕೋರ್ಟ್ ಮಂಗಳವಾರ (ಏ.1) ನಿರಾಕರಿಸಿದೆ ಎಂದು barandbench.com ವರದಿ ಮಾಡಿದೆ.

ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯನ್ನು ಅನುಮಾನಿಸಿದ್ದು, ಈ ಅರ್ಜಿ ಪ್ರಚಾರಕ್ಕಾಗಿ ಸಲ್ಲಿಸಿದಂತೆ ತೋರುತ್ತಿದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

“ನೀವು ಈ ಎಂಪುರಾನ್ ಚಿತ್ರವನ್ನು ನೋಡಿದ್ದೀರಾ? ನಿಮ್ಮ ಆಕ್ಷೇಪಣೆ ಏನು? ಇದನ್ನು ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದೆಯಲ್ವಾ? ನಿಮ್ಮ ಪ್ರಾಮಾಣಿಕತೆಯ ಬಗ್ಗೆ ನನಗೆ ಅನುಮಾನವಿದೆ. ಈ ಚಲನಚಿತ್ರದಿಂದಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗಿದೆ ಎಂಬ ಒಂದು ದೂರನ್ನು ನನಗೆ ತೋರಿಸಿ. ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ನನಗೆ ತೋರಿಸಿ. ಇವೆಲ್ಲವೂ ಪ್ರಚಾರ ಆಧಾರಿತ ಅರ್ಜಿಗಳು, ಅಲ್ಲದೆ ಬೇರೇನೂ ಅಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಈಗಾಗಲೇ ಚಿತ್ರವನ್ನು ಪ್ರದರ್ಶನಕ್ಕೆ ಅನುಮತಿಸಿದೆ ಎಂಬ ರಾಜ್ಯ ಸರ್ಕಾರದ ಪರ ವಕೀಲರ ವಾದವನ್ನು ನ್ಯಾಯಾಲಯ ಗಮನಿಸಿದೆ.

ಮೇಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯ ಈ ವಿಷಯವನ್ನು ಆದ್ಯತೆಯ ಮೇರೆಗೆ ವಿಚಾರಣೆಗೆ ಪಟ್ಟಿ ಮಾಡಲು ಮತ್ತು ಯಾವುದೇ ಮಧ್ಯಂತರ ಪರಿಹಾರ ಅಥವಾ ಆದೇಶ ನೀಡಲು ನಿರಾಕರಿಸಿದೆ. ನ್ಯಾಯಾಲಯದ ಬೇಸಿಗೆ ರಜೆಯ ನಂತರ ಈ ಪ್ರಕರಣದ ವಿಚಾರಣೆ ಮುಂದುವರೆಸಲಿದೆ.

ಭಾರತದ ಉಪ ಸಾಲಿಸಿಟರ್ ಜನರಲ್ (ಡಿಎಸ್‌ಜಿಐ) ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಪೊಲೀಸ್ ಮಹಾನಿರ್ದೇಶಕರ ರಾಜ್ಯ ಅಟಾರ್ನಿ ಪರವಾಗಿ ವಿಚಾರಣೆಗೆ ಹಾಜರಾಗಿದ್ದರು.

ನ್ಯಾಯಾಲಯ ನಟ ಮೋಹನ್ ಲಾಲ್, ಪೃಥ್ವಿರಾಜ್ ಮತ್ತು ಚಿತ್ರದ ನಿರ್ಮಾಪಕರು ಸೇರಿದಂತೆ ಪ್ರಕರಣದ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಎಂಪುರಾನ್ ಚಿತ್ರದಲ್ಲಿ 2002ರ ಗೋಧ್ರಾ ಗಲಭೆಯನ್ನು ಉಲ್ಲೇಖಿಸುವ ದೃಶ್ಯಗಳು ಇವೆ. ಭಾರತದ ರಕ್ಷಣಾ ಸಚಿವಾಲಯದ ಬಗ್ಗೆ ಅನಗತ್ಯ ಹೇಳಿಕೆಗಳು ನೀಡಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುವ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಅರ್ಜಿದಾರ ವಿಜೀಶ್ ಆರೋಪಿಸಿದ್ದರು.

ಈ ಚಿತ್ರ ಕೋಮು ಅಶಾಂತಿಗೆ ಕಾರಣವಾಗಬಹುದು. ಮತ್ತಷ್ಟು ವಿವಾದಗಳನ್ನು ತಡೆಗಟ್ಟಲು ಮತ್ತು ಯಾವುದೇ ಸಂಭಾವ್ಯ ಕೋಮು ಅಶಾಂತಿಯನ್ನು ತಪ್ಪಿಸಲು ಚಿತ್ರದ ಮುಂದಿನ ಪ್ರದರ್ಶನವನ್ನು ತಕ್ಷಣವೇ ಸ್ಥಗಿತಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿದ್ದರು

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಚಿತ್ರದಲ್ಲಿ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬದಲಾವಣೆಗಳೊಂದಿಗೆ ಈ ವಾರ ಚಿತ್ರ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದಾರೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...