Homeಮುಖಪುಟಕೇರಳ: ರಾಜ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಕೇರಳ: ರಾಜ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಹೆಣ್ಣುಮಕ್ಕಳು ತಮ್ಮ ಋತುಚಕ್ರದ ಕಷ್ಟದ ದಿನಗಳಲ್ಲಿ ವಿಶ್ರಾಂತಿ ಪಡೆಯಲಿ ಎಂದು ಉನ್ನತ ಶಿಕ್ಷಣ ಸಚಿವೆ ಆರ್‌. ಬಿಂದು ಹೇಳಿದ್ದಾರೆ

- Advertisement -
- Advertisement -

ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಯನ್ನು ನೀಡುವ ಮಹತ್ವದ ನಿರ್ಧಾರವನ್ನು ಕೇರಳ ಸರ್ಕಾರ ಸೋಮವಾರ ಪ್ರಕಟಿಸಿದೆ. ಇಂತಹ ನಿರ್ಧಾರವನ್ನು ಪ್ರಕಟಿಸಿದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ.

ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ(CUSAT)ವು ತನ್ನ ವಿದ್ಯಾರ್ಥಿಗಳಿಗೆ ಮುಟ್ಟಿನ ರಜೆಯನ್ನು ಒದಗಿಸುವ ನಿರ್ಧಾರವನ್ನು ತೆಗೆದುಕೊಂಡ ಬೆನ್ನಿಗೆ, ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು, ‘‘ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಕೂಡಾ ಇದೇ ಮಾದರಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಋತುಚಕ್ರದ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೊಚ್ಚಿನ್ ವಿಶ್ವವಿದ್ಯಾನಿಲಯ ಇತ್ತೀಚೆಗೆ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಅವರು, ಕೇರಳದಲ್ಲಿ ಮೊದಲ ಬಾರಿಗೆ ಶಿಕ್ಷಣ ಕೇಂದ್ರವೊಂದು ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆ ನೀಡಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ನೇತೃತ್ವದ ವಿದ್ಯಾರ್ಥಿಗಳ ಒಕ್ಕೂಟ ಸಲ್ಲಿಸಿದ್ದ ಪ್ರಾತಿನಿದ್ಯವನ್ನು ಪರಿಗಣಿಸಿದ ವಿಶ್ವವಿದ್ಯಾನಿಲಯ ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ, ಜನವರಿ 11 ರಂದು ಯುನಿವರ್ಸಿಟಿಯು ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಕೊರತೆಯ ಹೆಚ್ಚುವರಿ ಶೇಕಡಾ ಎರಡರಷ್ಟು ರಿಯಾಯಿತಿಯನ್ನು ಮಂಜೂರು ಮಾಡಿತ್ತು.

ಇಂತಹ ಉಪಕ್ರಮವನ್ನು ಕೈಗೊಂಡಿದ್ದಕ್ಕಾಗಿ ವಿದ್ಯಾರ್ಥಿ ಸಂಘವನ್ನು ಶ್ಲಾಘಿಸಿದ ಸಚಿವೆ, “ಮುಟ್ಟಿನ ರಜೆಯ ಮಾದರಿಯನ್ನು ರಾಜ್ಯದಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದ್ದಾರೆ.

ಮುಟ್ಟಿನ ಅವಧಿಗಳು ಅನೇಕರಿಗೆ ಭಾವನಾತ್ಮವಾಗಿ ‘ರೋಲರ್ ಕೋಸ್ಟರ್’ ದಿನಗಳಾಗಿವೆ ಎಂದು ಬಿಂದು ಹೇಳಿದ್ದು, “ಹೆಣ್ಣುಮಕ್ಕಳು ತಮ್ಮ ಋತುಚಕ್ರದ ಕಷ್ಟದ ದಿನಗಳಲ್ಲಿ ವಿಶ್ರಾಂತಿ ಪಡೆಯಲಿ’’ ಎಂದು ಅವರು ತಿಳಿಸಿದ್ದಾರೆ.

ಸ್ವಾಯತ್ತ ವಿಶ್ವವಿದ್ಯಾನಿಲಯ ಮತ್ತು CUSAT ಗಳಲ್ಲಿ ಸುಮಾರು 8,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು, ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಹುಡುಗಿಯರಾಗಿದ್ದಾರೆ.

“ವಿದ್ಯಾರ್ಥಿನಿಯರಿಗೆ ಋತುಸ್ರಾವದ ಪ್ರಯೋಜನಗಳ ಕೋರಿಕೆಗಳನ್ನು ಪರಿಗಣಿಸಿದ ಉಪಕುಲಪತಿಗಳು, ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಕೊರತೆಯ ಕ್ಷಮಾದಾನದ ಹೆಚ್ಚುವರಿ ಶೇಕಡಾ 2 ರಷ್ಟು ಮಂಜೂರು ಮಾಡಲು ಆದೇಶಿಸಿದ್ದಾರೆ” ಎಂದು ಕುಸಾಟ್‌ನ ರಿಜಿಸ್ಟ್ರಾರ್‌ ಆದೇಶ ಹೊರಡಿಸಿದ್ದರು.

ಈ ಆದೇಶವು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವವರು ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ ಮತ್ತು ತಕ್ಷಣದಿಂದಲೇ ಜಾರಿಗೆ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ: ಮಾರ್ಚ್‌ನಲ್ಲಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...