Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 4ಕ್ಕೆ ಏರಿಕೆ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 4ಕ್ಕೆ ಏರಿಕೆ

- Advertisement -
- Advertisement -

ಕೇರಳದ ಕೊಚ್ಚಿಯ ಕಲಮಸ್ಸೆರಿ ಬಳಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಮೊಲಿ ಜಾಯ್ ಘಟನೆ ನಡೆದ ಒಂದು ವಾರಗಳ ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಕಲಮಶ್ಶೇರಿಯ ನಿವಾಸಿ ಎಂದು ತಿಳಿದು ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಅ. 29ರಂದು ಸಂಭವಿಸಿದ್ದ ಸ್ಫೋಟದಲ್ಲಿ ಮೊಲಿ ಜಾಯ್ ಅವರಿಗೆ ಶೇಕಡ 70ರಷ್ಟು ಸುಟ್ಟ ಗಾಯಗಳಾಗಿದ್ದವು. ಅವರಿಗೆ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅ. 29ರಂದು ಸರಣಿ ಸ್ಪೋಟ ನಡೆದಾಗ ಸ್ಪೋಟದ ಸ್ಥಳದಲ್ಲೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಮರುದಿನ ತೀವ್ರವಾಗಿ ಗಾಯಗೊಂಡಿದ್ದ 12 ವರ್ಷ ವಯಸ್ಸಿನ ಲಿಬಿನಾ ಎಂಬ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.

ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಡೊಮಿನಿಕ್ ಮಾರ್ಟಿನ್ ಎಂಬ ಆರೋಪಿ ಸ್ಫೋಟಕ್ಕೆ ಹೊಣೆ ಹೊತ್ತುಕೊಂಡು ಪೊಲೀಸರಿಗೆ ಶರಣಾಗಿದ್ದ. ಪೊಲೀಸರು ಈತನಿಗೆ ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ಪೋಟಕ್ಕೆ ಐಇಡಿ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಟಿಫಿನ್‌ ಬಾಕ್ಸ್‌ನಲ್ಲಿ ಸ್ಪೋಟಕ ಇಟ್ಟಿರುವುದು ತನಿಖೆಯ ವೇಳೆ ಕಂಡು ಬಂದಿತ್ತು. ಸಮಾವೇಶದ ಸ್ಥಳದಲ್ಲಿ ಸ್ಪೋಟಕ್ಕೆ ಕೆಲವೇ ನಿಮಿಷಗಳ ಮೊದಲು ಕಾರೊಂದು ವೇಗವಾಗಿ ಸ್ಥಳದಿಂದ ತೆರಳಿದ್ದು, ಈ ಕುರಿತ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದಲ್ಲದೆ ಕೊಚ್ಚಿ ಸ್ಪೋಟದ ನಂತರ ಸಾಮಾಜಿಕ ಮಾದ್ಯಮಗಳ ಮೂಲಕ ಕೋಮು ಪ್ರಚೋದನಕಾರಿ ವಿಷಯಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 54 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಲಪ್ಪುರಂ ಜಿಲ್ಲೆಯೊಂದರಲ್ಲಿ 26 ಪ್ರಕರಣಗಳು ದಾಖಲಾಗಿದ್ದರೆ, ಎರ್ನಾಕುಲಂನಲ್ಲಿ 15 ಮತ್ತು ತಿರುವನಂತಪುರಂನಲ್ಲಿ 5 ಪ್ರಕರಣಗಳು ದಾಖಲಾಗಿವೆ. ತ್ರಿಶೂರ್ ನಗರ ಮತ್ತು ಕೊಟ್ಟಾಯಂನಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದು, ಪತ್ತನಂತಿಟ್ಟ, ಅಲಪ್ಪುಝ, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್ ಗ್ರಾಮಾಂತರ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ.

ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಈ ಮೊದಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡು ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...