Homeಮುಖಪುಟಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಮುಂದಾದ ವಯನಾಡಿನ ದಂಪತಿ

ಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಮುಂದಾದ ವಯನಾಡಿನ ದಂಪತಿ

- Advertisement -
- Advertisement -

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದ ಪ್ರದೇಶದಿಂದ ನಿಮಿಷಕ್ಕೊಂದು ನೋವಿನ ಕಥೆಗಳು ಕೇಳಿಬರುತ್ತಿರುವ ನಡುವೆ ಮಾನವೀಯ ವಿಚಾರವೊಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಪ್ರವಾಹದಲ್ಲಿ ಅನಾಥವಾಗಿದ್ದ ಮಗುವನ್ನು ದತ್ತು ತೆಗೆದುಕೊಳ್ಳಲು ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗಳು ಮುಂದೆ ಬಂದಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಜುಲೈ 30ರ ಬೆಳಿಗ್ಗೆ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತಗಳು 300ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, 200 ಕ್ಕೂ ಹೆಚ್ಚು ಜನರಿಗಾಗಿ ತೀವ್ರ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.

ದುರಂತದ ಹಿನ್ನೆಲೆಯಲ್ಲಿ, ಇಡುಕ್ಕಿಯ ಮಹಿಳೆ ಭಾವನಾ ಸಜಿನ್ ಅವರು ಭೂಕುಸಿತ ಪೀಡಿತ ಪ್ರದೇಶದಲ್ಲಿ ಅನಾಥ ನವಜಾತ ಶಿಶುಗಳಿಗೆ ಹಾಲುಣಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸ್ವಯಂಪ್ರೇರಿತರಾಗಿದ್ದರು. ಭಾವನಾ ಅವರ ಘೋಷಣೆಯ ಬೆನ್ನಲ್ಲೇ, ವಯನಾಡ್‌ನ ದಂಪತಿಗಳು ವಿಪತ್ತು ವಲಯದಿಂದ ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಸಿದ್ಧರಿದ್ದಾರೆ ಎಂದು ಘೋಷಿಸಿದರು.

ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ದತ್ತು ಸ್ವೀಕಾರ ಮಾಡುವ ಮೊದಲು, ಅವರು ಮಗುವಿಗೆ ಚಿಕ್ಕು ಎಂದು ಹೊಸ ಹೆಸರನ್ನು ಆಯ್ಕೆ ಮಾಡಿದ್ದಾರೆ.

4 ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ; ಸಾವಿನ ಸಂಖ್ಯೆ 308ಕ್ಕೆ ಏರಿಕೆ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ನಾಲ್ಕನೇ ದಿನ ಶೋಧ ಕಾರ್ಯಾಚರಣೆಯಲ್ಲಿ ನಾಲ್ವರು ಜೀವಂತವಾಗಿ ಪತ್ತೆಯಾಗಿದ್ದಾರೆ. ವೆಳ್ಳರಿಮಲ ನಿವಾಸಿಗಳಾದ ಜಾನ್ ಕೆ ಜೆ, ಜೊಮೊಲ್ ಜಾನ್, ಕ್ರಿಸ್ಟೀನ್ ಜಾನ್ ಮತ್ತು ಅಬ್ರಹಾಂ ಜಾನ್ ಅವರನ್ನು ರಕ್ಷಿಸಲಾಗಿದೆ ಮತ್ತು ಸುರಕ್ಷಿತ ಮಾರ್ಗದ ಮೂಲಕ ಹತ್ತಿರದ ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಮೊದಲು, ಕುಟುಂಬವನ್ನು ವಿಮಾನದಲ್ಲಿ ಸಾಗಿಸಲು ಯೋಜಿಸಲಾಗಿತ್ತು. ಆದರೆ, ನಂತರ ಸುರಕ್ಷಿತ ಮಾರ್ಗವನ್ನು ಗುರುತಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡ ಸೇರಿದಂತೆ ರಕ್ಷಕರು ತಮ್ಮ ನಿವಾಸದಿಂದ ಶಿಬಿರಕ್ಕೆ ಸುರಕ್ಷಿತ ಮಾರ್ಗದ ಭರವಸೆ ನೀಡಿದ ನಂತರ ಕುಟುಂಬವು ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸಲು ಒಪ್ಪಿಕೊಂಡಿತು.

ಸಾವಿನ ಸಂಖ್ಯೆ 308ಕ್ಕೆ ಏರಿದೆ. ಅಧಿಕೃತ ಎಣಿಕೆ 201 ರಷ್ಟಿದೆ. ಸುಮಾರು 300 ಜನರು ಇನ್ನೂ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಕೇರಳದ ಎಡಿಜಿಪಿ ಎಂ ಆರ್ ಅಜಿತ್ ಕುಮಾರ್ ಶುಕ್ರವಾರ ಈ ಪ್ರದೇಶದಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಲ್ಲಿ ಸುಮಾರು 300 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಹೇಳಿದ್ದಾರೆ. ಭೂಕುಸಿತದಿಂದ 348 ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ; ಮಣಿಪುರ ಗಲಭೆ: ಜಿರಿಬಾಮ್‌ನಲ್ಲಿ ಶಾಂತಿ ಮರುಸ್ಥಾಪನೆಗೆ ಮೈತೆಯಿ-ಹ್ಮಾರ್ ಸಮುದಾಯಗಳ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...