Homeಮುಖಪುಟಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

- Advertisement -
- Advertisement -

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೇರಳ ಶಾಸಕಾಂಗವು ಬುಧವಾರ ಸರ್ವಾನುಮತದಿಂದ ನಿರ್ಣಯ ಮಂಡಿಸಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದೆ.

ಒಂದು ಕೋಟಿ ಕೊರೊನಾ ಲಸಿಕೆಗೆ ಕೇರಳ ಸರ್ಕಾರ ಆದೇಶ ನೀಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಪುನರುಚ್ಚರಿಸಿದ ಒಂದು ದಿನದ ನಂತರ, ಆರೋಗ್ಯ ಸಚಿವ ವೀಣಾ ಜಾರ್ಜ್ ಅವರು ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗಾಗಿ ಸದನದಲ್ಲಿ ನಿರ್ಣಯವನ್ನು ಮಂಡಿಸಿದ್ದಾರೆ.

ಇದನ್ನೂ ಓದಿ: ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ: ಜೂನ್ 10ರಂದು ಕರವೇಯಿಂದ ಪ್ರತಿಭಟನೆ

“ಕೊರೊನಾ ವಿರುದ್ಧ ಹೋರಾಡಲು, ನಾವು ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್ ಅನ್ನು ಒದಗಿಸಬೇಕಾಗಿದೆ, ಇದು ಸಮಾಜದ ಎಲ್ಲಾ ವರ್ಗಗಳನ್ನು ವೈರಸ್‌‌ನಿಂದ ರಕ್ಷಿಸಲಾಗಿದೆ ಎಂದು ಖಚಿತಪಡಿಸುತ್ತದೆ” ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಲಸಿಕೆಗಳನ್ನು ಸಕಾಲಿಕವಾಗಿ ವಿತರಿಸುವಂತೆ ನಿರ್ಣಯವು ಕೇಂದ್ರ ಸರ್ಕಾರವನ್ನು ಕೇಳಿದೆ.

“ವ್ಯಾಕ್ಸಿನೇಷನ್ ವೇಗಗೊಳಿಸಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾದರೆ, ಇದು ಆರ್ಥಿಕತೆಗೆ ಸಹ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಕೊರೊನಾ ಲಸಿಕಾ ಪ್ರಕ್ರಿಯೆಯನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಎಲ್ಲರೂ ಕೈಜೋಡಿಸುವಂತೆ ಅವರು ಒತ್ತಾಯಿಸಿದ್ದರು.

ಇದನ್ನೂ ಓದಿ: ಪ್ರಶ್ನಿಸುವ ಪಿಶಾಚಿಗಳು; ಸತ್ತಂತೆ ಬದುಕಿದ್ದವರು ಪ್ರಶ್ನಿಸಲಾರರು ಎಂಬುದು ನಿಮ್ಮ ಮನದಿಂಗಿತವೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...