Homeಮುಖಪುಟಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ದೇಶದಲ್ಲಿ ಏಕರೂಪ ನಾಗರಿಕತೆ (ಯುಸಿಸಿ) ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು.

ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು, ”ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ ಮತ್ತು ಆತುರದ ಕ್ರಮ. ಸಂಘಪರಿವಾರದಿಂದ ಪ್ರೇರಿಸಲ್ಪಟ್ಟ ಏಕರೂಪ ನಾಗರಿಕ ಸಂಹಿತೆ ಸಂವಿಧಾನಿಕವಾಗಿಲ್ಲ, ಬದಲಿಗೆ ಅದು ಹಿಂದೂ ಕಾನೂನು ಪಠ್ಯ ಮನುಸ್ಮೃತಿ ಅನ್ನು ಆಧರಿಸಿದೆ” ಎಂದು ಅವರು ವಾದಿಸಿದರು.

”ಈ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂಘ ಪರಿವಾರದವರು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಸಂವಿಧಾನದಲ್ಲಿ ಇರುವುದನ್ನು ಅವರು ಜಾರಿಗೆ ತರಲು ಪ್ರಯತ್ನಿಸುತ್ತಿಲ್ಲ, ಅದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನ ಕಾನೂನುಗಳನ್ನು ಅಪರಾಧೀಕರಿಸಿದೆ, ಆದರೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಥವಾ ಶೋಷಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಲು ಏನನ್ನೂ ಮಾಡಿಲ್ಲ” ಎಂದು ವಿಜಯನ್ ಪ್ರತಿಪಾದಿಸಿದರು.

ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದ ನಂತರ ಎಡ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಯುಡಿಎಫ್ ಹಲವಾರು ತಿದ್ದುಪಡಿಗಳು ಮತ್ತು ಮಾರ್ಪಾಡುಗಳನ್ನು ಸೂಚಿಸಿತು. ಸೂಚಿಸಿದ ಮಾರ್ಪಾಡುಗಳನ್ನು ಗಣನೆಗೆ ತೆಗೆದುಕೊಂಡ ನಂತರ, ಮುಖ್ಯಮಂತ್ರಿಗಳು ಅಂತಿಮಗೊಳಿಸಿದ ನಿರ್ಣಯವನ್ನು ಓದಿದರು.

ಯುಸಿಸಿ ವಿಧಿಸುವ ಕೇಂದ್ರದ ಕ್ರಮದಿಂದ ಕೇರಳ ವಿಧಾನಸಭೆ ದಿಗ್ಭ್ರಮೆಗೊಂಡಿದೆ. ಇದು ದೇಶದ ಜಾತ್ಯತೀತ ಸ್ವರೂಪವನ್ನು ಕಸಿದುಕೊಳ್ಳುವ ಏಕಪಕ್ಷೀಯ ಮತ್ತು ಆತುರದ ನಿರ್ಧಾರವಾಗಿದೆ ಎಂದು ಹೇಳಿದರು. ಸಂವಿಧಾನವು ಸಾಮಾನ್ಯ ನಾಗರಿಕ ಕಾನೂನನ್ನು ನಿರ್ದೇಶನ ತತ್ವವಾಗಿ ಮಾತ್ರ ಉಲ್ಲೇಖಿಸುತ್ತದೆ ಮತ್ತು ಅದು ಕಡ್ಡಾಯವಲ್ಲ. ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸಿದಾಗ ಮತ್ತು ಧಾರ್ಮಿಕ ವೈಯಕ್ತಿಕ ನಿಯಮಗಳನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕನ್ನು ಒಳಗೊಂಡಿರುವಾಗ, ಅದನ್ನು ನಿಷೇಧಿಸುವ ಯಾವುದೇ ಕಾನೂನು ಸಂವಿಧಾನದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು. ಸಂವಿಧಾನದ 44ನೇ ವಿಧಿಯು ರಾಜ್ಯವು ಸಾಮಾನ್ಯ ನಾಗರಿಕ ಸಂಹಿತೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ ಎಂದು ಹೇಳುತ್ತದೆ. ಜನರಲ್ಲಿ ಒಮ್ಮತ ಮೂಡಿಸಲು ಇಂತಹ ಯಾವುದೇ ಕ್ರಮವನ್ನು ಚರ್ಚೆಗಳ ಮೂಲಕ ಮೊದಲು ಮಾಡಬೇಕು ಮತ್ತು ಹಾಗೆ ಮಾಡದಿರುವುದು ಸಂವಿಧಾನದ ಉಲ್ಲಂಘನೆ ಎಂದು ಅವರು ಹೇಳಿದರು.

ಕೇರಳ ಅಸೆಂಬ್ಲಿ ಕೂಡ ಕೇಂದ್ರ ನಿರ್ಧಾರದ ಬಗ್ಗೆ ಕಳವಳವನ್ನು ಹಂಚಿಕೊಳ್ಳುತ್ತದೆ. ಯುಸಿಸಿ ಹೇರುವಿಕೆಯು ಜನರ ಮತ್ತು ಒಟ್ಟಾರೆ ರಾಷ್ಟ್ರದ ಏಕತೆಯ ಮೇಲೆ ದಾಳಿ ಮಾಡುವ ಜಾತ್ಯತೀತವಲ್ಲದ ಕ್ರಮ ಎಂದು ನಂಬುತ್ತದೆ. ಸಂವಿಧಾನ ರಚನಾ ಸಭೆಯ ಚರ್ಚೆಗಳಲ್ಲಿಯೂ ಸಹ ಯುಸಿಸಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದವು. ಬಿಆರ್ ಅಂಬೇಡ್ಕರ್ ಅವರ ಅಂದಿನ ನಿಲುವು ಸಂಸತ್ತು ಸಾಮಾನ್ಯ ನಾಗರಿಕ ಕಾನೂನನ್ನು ತರಲು ಪ್ರಯತ್ನಿಸಬಹುದು ಎಂದು ಹೇಳಿದ್ದರು. ಆದರೆ ಅದನ್ನು ಕಡ್ಡಾಯಗೊಳಿಸಬೇಕೆಂದು ಅವರು ಒತ್ತಾಯಿಸಲಿಲ್ಲ. ಅವರು ಕೇವಲ ಒಂದು ಸಾಧ್ಯತೆಯನ್ನು ಮಾತ್ರ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ವಾದಿಸಿದರು.

ಸಿಪಿಐ(ಎಂ) ನೇತೃತ್ವದ ಸರ್ಕಾರವು ಯುಸಿಸಿ ವಿರುದ್ಧ ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷಗಳು ಮತ್ತು ವಿರೋಧ ಪಕ್ಷವಾದ ಯುಡಿಎಫ್ ಹಾಗೂ ರಾಜ್ಯದ ವಿವಿಧ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಅಭಿಯಾನದ ನಡುವೆಯೇ ನಿರ್ಣಯವನ್ನು ಮಂಡಿಸಲು ನಿರ್ಧರಿಸಿತ್ತು.

2019ರ ಡಿಸೆಂಬರ್‌ನಲ್ಲಿ ಕೇರಳ ವಿಧಾನಸಭೆಯು ಪೌರತ್ವ ತಿದ್ದುಪಡೆ ಕಾಯ್ದೆ (ಸಿಎಎ) ವಿರುದ್ಧದ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿತ್ತು.

ಇದನ್ನೂ ಓದಿ: ಈಗ ಅಗತ್ಯ ಇರುವುದು ಲಿಂಗ ನ್ಯಾಯ ಸಂಹಿತೆ, ಏಕರೂಪ ನಾಗರಿಕ ಸಂಹಿತೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...