Homeಮುಖಪುಟಶಿರೂರು ದುರಂತ : ಲಾರಿ ಮಾಲೀಕನ ವಿರುದ್ದ ದೂರು ದಾಖಲಿಸಿದ ಅರ್ಜುನ್ ಕುಟುಂಬ

ಶಿರೂರು ದುರಂತ : ಲಾರಿ ಮಾಲೀಕನ ವಿರುದ್ದ ದೂರು ದಾಖಲಿಸಿದ ಅರ್ಜುನ್ ಕುಟುಂಬ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದ ಕೇರಳದ ಲಾರಿ ಚಾಲಕ ಅರ್ಜುನ್‌ನ ಕುಟುಂಬಸ್ಥರು ಲಾರಿ ಮಾಲೀಕ ಅಬ್ದುಲ್ ಮನಾಫ್ ವಿರುದ್ದ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅರ್ಜುನ್ ಸಹೋದರಿ ಅಂಜು ದೂರು ದಾಖಲಿಸಿದ್ದು, ಮನಾಫ್ ತಮ್ಮ ಕುಟುಂಬದ ಭಾವನಾತ್ಮಕ ಪರಿಸ್ಥಿತಿಯನ್ನು ಬಂಡವಾಳವನ್ನಾಗಿಸಿಕೊಂಡು, ಅರ್ಜುನ್ ಫೋಟೋ ಬಳಸಿ ಪ್ರಚಾರ ಪಡೆಯುತ್ತಿದ್ದಾರೆ, ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿ ಕುಟುಂಬದ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬದ ವಿರುದ್ದ ಮಾನಹಾನಿ ಪೋಸ್ಟ್ ಹಾಕುವವರ ವಿರುದ್ದವೂ ಅಂಜು ದೂರು ನೀಡಿದ್ದಾರೆ. ಚೆರುವಾಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮನಾಫ್ ಮತ್ತು ಮುಳುಗುತಜ್ಞ ಈಶ್ವರ ಮಲ್ಪೆ ವಿರುದ್ದ ಅರ್ಜುನ್ ಕುಟುಂಬ ಕೆಲ ದಿನಗಳ ಹಿಂದೆ ಹಲವು ಆರೋಪಗಳನ್ನು ಮಾಡಿತ್ತು. ಇವರಿಬ್ಬರೂ ಅರ್ಜುನ್ ಹೆಸರನ್ನು ತಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರನ್ನು ಹೆಚ್ಚಿಸಲು ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಮನಾಫ್ ಅರ್ಜುನ್ ಹೆಸರಿನಲ್ಲಿ ನಮಗೆ ಗೊತ್ತಿಲ್ಲದಂತೆ ಹಣ ಸಂಗ್ರಹಿಸಿದ್ದಾರೆ. ಅದರಲ್ಲಿ ಸ್ವಲ್ಪ ಮೊತ್ತವನ್ನು ನಮಗೆ ಕೊಟ್ಟಿದ್ದಾರೆ. ಅದೂ ಕೂಡ ಪ್ರಚಾರ ಪಡೆಯಲು ಮಾಡಿರುವುದು ಎಂದು ಹೇಳಿತ್ತು.

ತನ್ನ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಮನಾಫ್, “ನಾನು ಈ ಹಿಂದೆ ಹೇಳಿರುವ ಮಾತುಗಳಿಗೆ ಬದ್ದನಾಗಿದ್ದೇನೆ. ಗೊತ್ತಿಲ್ಲದೆ ಏನಾದರು ತಪ್ಪು ಮಾಡಿದ್ದರೆ ಅದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ವಿರುದ್ದ ದೂರು ದಾಖಲಿಸಿದರೂ, ನಾನು ಅರ್ಜುನ್ ಕುಟುಂಬದ ಪರವಾಗಿಯೇ ನಿಲ್ಲುತ್ತೇನೆ” ಎಂದಿದ್ದಾರೆ.

“ಯೂಟ್ಯೂಬ್ ಚಾನೆಲ್‌ನಲ್ಲಿ ಅರ್ಜುನ್ ಫೋಟೋ ಬಳಸಿ ಪ್ರಚಾರ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮನಾಫ್, ಮಾಧ್ಯಮಗಳು ಕೊಟ್ಟ ಸಲಹೆಯಂತೆ ಶಿರೂರಿನ ಪರಿಸ್ಥಿತಿಯ ಕುರಿತು ಮಾಹಿತಿ ನೀಡಲು ನಾನು ಯೂಟ್ಯೂಬ್ ಚಾನೆಲ್ ಮಾಡಿದೆ. ಅರ್ಜುನ್ ಶವವನ್ನು ಮನೆಗೆ ತಲುಪಿಸಿದ ಬಳಿಕ ನಾನು ಚಾನೆಲ್ ಬಳಸಿಲ್ಲ. ಪ್ರಸ್ತುತ ಯೂಟ್ಯೂಬ್ ಚಾನೆಲ್‌ನಿಂದ ಅರ್ಜುನ್ ಫೋಟೋವನ್ನು ತೆಗೆದು ಹಾಕಿದ್ದೇನೆ” ಎಂದು ಹೇಳಿದ್ದಾರೆ.

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕನ್ನಡಿಕ್ಕಲ್ ನಿವಾಸಿಯಾದ ಲಾರಿ ಚಾಲಕ ಅರ್ಜುನ್ ಜುಲೈ 16ರಂದು ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತದ ಬಳಿಕ ಲಾರಿ ಸಹಿತ ನಾಪತ್ತೆಯಾಗಿದ್ದರು. ಸತತ ಹುಡುಕಾಟದ ಫಲವಾಗಿ 72 ದಿನಗಳ ಬಳಿಕ ಸೆಪ್ಟೆಂಬರ್ 25ರಂದು ಲಾರಿ ಮತ್ತು ಅದರೊಳಗೆ ಅರ್ಜುನ್ ಶವ ಗಂಗಾವಳಿ ನದಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ : ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...