ಕಳೆದ ವರ್ಷ ದೇಶದಲ್ಲಿಯೇ ಮೊದಲ ಕೊರೊನಾ ಸೋಂಕು ಪತ್ತೆಯಾಗಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯಲ್ಲಿ ಮತ್ತೆ ಒಂದೂವರೆ ವರ್ಷಗಳ ನಂತರ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಚೀನಾದ ವುಹಾನ್‌ನ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ 20 ವರ್ಷದ ಯುವತಿ ದೆಹಲಿಗೆ ಹೊರಡುವ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಎರಡನೇ ಬಾರಿ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.
ಸದ್ಯಕ್ಕೆ ವಿದ್ಯಾರ್ಥಿನಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆಕೆ ತ್ರಿಶೂರ್‌ನಲ್ಲಿರುವ ತನ್ನ ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆ ಇನ್ನೂ ಕೊರೊನಾ ಲಸಿಕೆ ತೆಗೆದುಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ
ಕೊರೊನಾ ವೈರಸ್‌ನ ಕೇಂದ್ರ ಬಿಂದುವಾಗಿರುವ ಚೀನಾದ ವುಹಾನ್‌ನಲ್ಲಿ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದರು. ಕೊಡುಂಗಲ್ಲೂರ್ ಮೂಲದ ಈಕೆ 2020 ರ ಜನವರಿ 30 ರಂದು ಮೊದಲ ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಮೂಲಕ ದೇಶದಲ್ಲಿ ಸಾಂಕ್ರಾಮಿಕ ವೈರಸ್‌ಗೆ ತುತ್ತಾದ ಮೊದಲ ಸೋಂಕಿತರಾಗಿದ್ದರು.
ಕೊರೊನಾ ಸೋಂಕಿತರಾಗಿದ್ದ ಆಕೆಯನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಆಕೆ ವೈರಸ್ ವಿರುದ್ಧ ಹೊರಾಡಿ, ಗೆದ್ದಿದ್ದರು. ಈಗ ಎರಡನೇ ಬಾರಿಗೆ ಸೋಂಕು ತಗುಲಿದ್ದು, ಯಾವುದೇ ಭಯವಿಲ್ಲ. ಈ ರೀತಿ ಹಕವರಿಗೆ ಎರಡೆರಡು ಬಾರಿ ಸೋಂಕು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಕೊರೊನಾ ಮೂರನೇ ಅಲೆಯ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.
ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ


