Homeಮುಖಪುಟಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

- Advertisement -
- Advertisement -

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮೂರು ಬಾರಿ ಎಟಿಎಂ ಮುರಿದು ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗಿದ್ದ ತಂಡವನ್ನು ಶುಕ್ರವಾರ ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಕೇರಳ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಆರು ಜನರಿದ್ದ ಕಳ್ಳರ ಗ್ಯಾಂಗ್ ಕೊನೆಗೂ ಸಿಕ್ಕಿಬಿದ್ದಿವೆ.ಮನಿ ಹೈಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೇಗವಾಗಿ ಬಂದ ಕಂಟೈನರ್ ಲಾರಿಯಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಪೊಲೀಸರು ಬೆನ್ನಟ್ಟಿದ್ದು, ಕೊನೆಗೆ ಶೂಟೌಟ್‌ನಲ್ಲಿ ಅದು ಕೊನೆಗೊಂಡಿದೆ. ಈ ಶೂಟೌಟ್‌ನಲ್ಲಿ ಶಂಕಿತ ಕಳ್ಳನೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ. ಇದೇ ವೇಳೆ ದರೋಡೆಕೋರರ ಗುಂಡಿಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾಗಿ ವರದಿಯಾಗಿದೆ.

ನಾಮಕ್ಕಲ್ ಜಿಲ್ಲೆಯ ಕುಮಾರಪಾಳ್ಯಂ ಬಳಿಯ ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಸುಮಾರು ಐದು ಕಿಲೋಮೀಟರ್ ದೂರ ಬೆನ್ನೆಟ್ಟಲಾಗಿತ್ತು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಶಂಕಿತರು ನುಣುಚಿಕೊಳ್ಳಲು ಪ್ರಯತ್ನಿಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ವರದಿ ಹೇಳಿದೆ.ಮನಿ ಹೈಸ್ಟ್

ಕಾರ್ಯಾಚರಣೆಯು ಶೂಟೌಟ್‌ನಲ್ಲಿ ಕೊನೆಗೊಂಡಿದ್ದು, ಪರಿಣಾಮವಾಗಿ ಒಬ್ಬ ಶಂಕಿತ ಕಳ್ಳ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಆರೋಪಿ ಮತ್ತು ಇಬ್ಬರು ಪೊಲೀಸರು ಕೂಡಾ ಈ ವೇಳೆ ಗಾಯಗೊಂಡಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

“ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಕರಣದ ಬಗ್ಗೆ ವಿಚಾರಣೆಯ ನಂತರ ಮಾತನಾಡುತ್ತೇವೆ” ಎಂದು ಸೇಲಂ ವಲಯದ ಡಿಐಜಿ ಇಎಸ್ ಉಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದರೋಡೆಕೋರರ ತಂಡವು ಮೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಿಂದ ಸುಮಾರು 65 ಲಕ್ಷ ರೂ. ದೂಚಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. ಶುಕ್ರವಾರ ಮುಂಜಾನೆ 2 ರಿಂದ 4 ಗಂಟೆಯ ನಡುವೆ ತ್ರಿಶೂರ್ ನಗರ ವ್ಯಾಪ್ತಿಯ ಸಿಟಿ ಈಸ್ಟ್ ಮತ್ತು ವಿಯ್ಯೂರ್ ಮತ್ತು ತ್ರಿಶೂರ್ ಗ್ರಾಮಾಂತರದ ಇರಿಂಜಲಕುಡದಲ್ಲಿ ಕಳ್ಳತನ ನಡೆದಿದೆ.

ಸೆಕ್ಯುರಿಟಿ ಇಲ್ಲದ ಆಲರಾಂ ವ್ಯವಸ್ಥೆ ಹೊಂದಿರುವ ಎಟಿಎಂಗಳನ್ನು ಗುರಿಯಾಗಿಟ್ಟುಕೊಂಡು ಗ್ಯಾಂಗ್ ದರೋಡೆ ಮಾಡಿದೆ ಎಂದು ವರದಿ ಹೇಳಿದೆ. ಕಳ್ಳರ ಗ್ಯಾಂಗ್ ಸಿಸಿಟಿವಿ ಕ್ಯಾಮೆರಾಗಳಿಗೆ ಬಣ್ಣ ಎರಚಿದ್ದು, ನಂತರ ಎಟಿಎಂನ ನಗದು ಪಡೆಯಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಳ್ಳತನದ ನಂತರ, ಕಳ್ಳರ ಗ್ಯಾಂಗ್ ಆರಂಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೊದಲಿಗೆ ಕಾರಿನಲ್ಲಿ ಪರಾರಿಯಾಗಿತ್ತು. ನಂತರ ಕಂಟೈನರ್ ಟ್ರಕ್‌ ಮೂಲಕ ಪರಾರಿಯಾಗಿದ್ದಾರೆ. ಈ ವಾಹನವು ನಕಲಿ ನಂಬರ್ ಪ್ಲೇಟ್ ಅನ್ನು ಹೊಂದಿದ್ದರಿಂದ ಅದನ್ನು ಪತ್ತೆಹಚ್ಚಲು ಕೇರಳ ಪೊಲೀಸರು ರಸ್ತೆಯಲ್ಲಿ ಕಂಟೈನರ್ ಟ್ರಕ್‌ಗಳನ್ನು ಮೇಲ್ವಿಚಾರಣೆ ಮಾಡಲು ತಮಿಳುನಾಡು ಪೊಲೀಸರಿಗೆ ಕೇಳಿಕೊಂಡಿದ್ದಾರೆ.

ಇದನ್ನೂಓದಿ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಈ ಗುಪ್ತಚರ ಮಾಹಿತಿ ಮೇರೆಗೆ ತಮಿಳುನಾಡು ಪೊಲೀಸರು ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದು, ಅಂತಿಮವಾಗಿ ನಾಮಕ್ಕಲ್‌ನಲ್ಲಿ ಶಂಕಿತರ ಬಂಧನ ನಡೆದಿದೆ. ಟ್ರಕ್ ಪಚ್ಚಪಾಳ್ಯಂ ಪ್ರದೇಶವನ್ನು ತಲುಪಿದಾಗ, ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದರು; ಈ ವೇಳೆ ಕಳ್ಳರ ಗ್ಯಾಂಗ್ ಪ್ರತಿದಾಳಿ ನಡೆಸಿದ್ದು, ಹಾಗಾಗಿ ಗುಂಡಿನ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದರ ನಂತರ, ಗ್ಯಾಂಗ್‌ನ ಐದು ಸದಸ್ಯರನ್ನು ಬಂಧಿಸಲಾಗಿದ್ದು, ಮೃತ ಶಂಕಿತ ಕಳ್ಳನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಗ್ಯಾಂಗ್ ರಾಜಸ್ಥಾನ ಮತ್ತು ಹರಿಯಾಣ ಮೂಲದ್ದಾಗಿದೆ ಎಂದು ನಂಬಲಾಗಿದೆ. ಇವರು ಇತರ ರೀತಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸ್ ಮೂಲಗಳು ಸೂಚಿಸಿವೆ.

2021 ರಲ್ಲಿ, ಕೇರಳ ಪೊಲೀಸರು ಇದೇ ರೀತಿಯ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು. ಪ್ರಸ್ತತ ಬಂಧನಕ್ಕೊಳಗಾಗಿರುವ ಗ್ಯಾಂಗ್‌ನ ಚಟುವಟಿಕೆಗಳು ಮತ್ತು ಸಂಪರ್ಕಗಳ ಕುರಿತು ಹೆಚ್ಚಿನ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ತಮಿಳುನಾಡಿನ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...