Homeಮುಖಪುಟ'ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು' ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ.

ಕೊಚ್ಚಿಯಲ್ಲಿ ನಡೆದ ‘ಹುಬ್ಬುಲ್ ರಸೂಲ್’ ಸಮ್ಮೇಳನದಲ್ಲಿ ಮಾತನಾಡಿದ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಎಂದೇ ಪರಿಚಿತರಾಗಿರುವ ಅವರು, ಮಹಿಳೆಯರ ಗೌರವ ಮತ್ತು ಭದ್ರತೆಯನ್ನು ಕಾಪಾಡುವ ಉದ್ದೇಶದಿಂದಲೇ ಇಸ್ಲಾಂ ಧರ್ಮದಲ್ಲಿ ಪರ್ದಾ ಪದ್ಧತಿಯನ್ನು ಸೂಚಿಸಲಾಗಿದೆ ಎಂದು ವಾದಿಸಿದ್ದಾರೆ. “ಮಹಿಳೆಯರು ತಮ್ಮ ಮನೆಗಳಲ್ಲೇ ಇರಬೇಕು, ಅವರು ಸಾರ್ವಜನಿಕ ಕ್ಷೇತ್ರಕ್ಕೆ ಬರಬಾರದು. ಪವಿತ್ರ ಕುರಾನ್ ಕೂಡ ಇದನ್ನೇ ಹೇಳುತ್ತದೆ,” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

‘ಮಹಿಳೆಯರು ಚಿನ್ನದ ಆಭರಣದಂತೆ’: ಆಕ್ಷೇಪಾರ್ಹ ಹೋಲಿಕೆ

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಕಾಂತಪುರಂ ಅವರು ಮಹಿಳೆಯರನ್ನು ಚಿನ್ನದ ಹಾರಕ್ಕೆ ಹೋಲಿಸಿ ಮಾತನಾಡಿದ್ದಾರೆ. ಒಬ್ಬ ವ್ಯಕ್ತಿ ಆಭರಣದ ಅಂಗಡಿಯಿಂದ ಚಿನ್ನದ ಹಾರ ಖರೀದಿಸಿದಾಗ, ಅದನ್ನು ಅತ್ಯಂತ ಜಾಗರೂಕತೆಯಿಂದ ಪೆಟ್ಟಿಗೆಯಲ್ಲಿಟ್ಟು ಬೀರುವಿನೊಳಗೆ ಇರಿಸಲಾಗುತ್ತದೆ. ಆದರೆ ರಸ್ತೆ ಬದಿಯಲ್ಲಿ ಮಾರಾಟಕ್ಕಿಡುವ ಕಲ್ಲಿನ ಒರಳು ಅಥವಾ ಗ್ರೈಂಡರ್‌ಗಳನ್ನು ಜನ ತುಳಿಯಬಹುದು ಅಥವಾ ಮುಟ್ಟಬಹುದು. ಅದೇ ರೀತಿ ಚಿನ್ನದ ಹಾರ ತನ್ನ ಸೌಂದರ್ಯವನ್ನು ಉಳಿಸಿಕೊಳ್ಳಬೇಕಾದರೆ ಅದನ್ನು ಪೆಟ್ಟಿಗೆಯೊಳಗೇ ಸುರಕ್ಷಿತವಾಗಿಡಬೇಕು. ಮಹಿಳೆಯರನ್ನು ಈ ರೀತಿಯಾಗಿ ಸಾರ್ವಜನಿಕ ಕ್ಷೇತ್ರಕ್ಕೆ ಕರೆತಂದರೆ ಅದು ದೊಡ್ಡ ವಿನಾಶಕ್ಕೆ ಕಾರಣವಾಗುತ್ತದೆ, ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ಸಮಸ್ತ ಕೇರಳ ಜಮಿಯ್ಯತುಲ್ ಉಲಮಾ ಕಳೆದ 100 ವರ್ಷಗಳಿಂದ ಇದೇ ತತ್ವವನ್ನು ಬೋಧಿಸುತ್ತಾ ಬಂದಿದ್ದು, ಇದರಿಂದ ಮಹಿಳೆಯರು ತಮ್ಮ ಗೌರವವನ್ನು ಕಾಪಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಧರ್ಮದ ಬಗ್ಗೆ ಮಾತನಾಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ’

ಇದೇ ವೇಳೆ ಇಸ್ಲಾಂ ಐತಿಹಾಸಿಕವಾಗಿ ಮಹಿಳೆಯರ ಸ್ಥಾನಮಾನವನ್ನು ಎತ್ತಿಹಿಡಿದಿದೆ ಎಂದಿರುವ ಕಾಂತಪುರಂ, ಇಸ್ಲಾಂ ಪೂರ್ವದ ಅರೇಬಿಯಾದಲ್ಲಿ ಹೆಣ್ಣು ಮಕ್ಕಳ ಹತ್ಯೆಯಂತಹ ಕ್ರೂರ ಪದ್ಧತಿ ಇತ್ತು. ಇಸ್ಲಾಂ ಅದನ್ನು ನಿಷೇಧಿಸಿತು ಹಾಗೂ ಮಹಿಳೆಯರಿಗೆ ಆಸ್ತಿ ಹಕ್ಕು ಮತ್ತು ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲನ್ನು ನೀಡಿತು, ಎಂದು ಹೇಳಿದ್ದಾರೆ.

ತಮ್ಮ ಪ್ರಚೋದನಾತ್ಮಕ ಹೇಳಿಕೆಗಳನ್ನು ಪ್ರಶ್ನಿಸುವ ಸಂಘಟನೆಗಳ ವಿರುದ್ಧ ಹರಿಹಾಯ್ದ ಅವರು, ನಾವು ಧರ್ಮವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ್ದೇವೆ. ಹೀಗಾಗಿ ಸಮುದಾಯಕ್ಕೆ ಧರ್ಮದ ಬಗ್ಗೆ ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯ. ನಾವು ಈ ಬಗ್ಗೆ ಮಾತನಾಡುತ್ತೇವೆ ಮತ್ತು ಮುಂದೆಯೂ ಮಾತನಾಡುತ್ತೇವೆ. ಯಾರಿಂದಲೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ, ಎಂದು ಸವಾಲು ಎಸೆದಿದ್ದಾರೆ.

ಮಹಿಳೆಯರನ್ನು ಮನೆಯಿಂದ ಹೊರಬರದಂತೆ ಕಟ್ಟಿಹಾಕುವ ಮತ್ತು ಆಭರಣದಂತಹ ವಸ್ತುಗಳಿಗೆ ಹೋಲಿಸುವ ಇಂತಹ ಹೇಳಿಕೆಗಳು ಲಿಂಗ ಸಮಾನತೆ ಮತ್ತು ಮಾನವ ಹಕ್ಕುಗಳ ವಿರುದ್ಧವಾಗಿವೆ ಎಂದು ಪ್ರಗತಿಪರ ಚಿಂತಕರು ಹಾಗೂ ಹಕ್ಕುಗಳ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...