Homeರಾಜಕೀಯಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

ಆಪರೇಷನ್ ಕಮಲ ಪ್ರಕರಣದಲ್ಲಿ ಕೇರಳ ಎನ್‌ಡಿಎ ಸಂಚಾಲಕ ತುಷಾರ್ ವೆಲ್ಲಪಲ್ಲಿಗೆ ಲುಕ್‌‌ಔಟ್ ನೋಟಿಸ್

- Advertisement -
- Advertisement -

ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್‌ನ ಶಾಸಕರನ್ನು ಆಪರೇಷನ್‌ ಕಮಲ ನಡೆಸಲು ಯತ್ನಿಸಿದ ಆರೋಪದ ಮೇಲೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇರಳ ಮೂಲದ ರಾಜಕಾರಣಿ, ಉದ್ಯಮಿ ತುಷಾರ್ ವೆಲ್ಲಪಲ್ಲಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತುಷಾರ್ ಅವರ ಪಕ್ಷವಾದ ಭಾರತ ಧರ್ಮ ಜನ ಸೇನೆಯ (ಬಿಡಿಜೆಎಸ್)ಯು ಕೇರಳದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಚಾಲಕರೂ ಆಗಿರುವ ತುಷಾರ್ ಮತ್ತು ಡಾ.ಜಗ್ಗಿ ಸ್ವಾಮಿ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಲುಕ್‌ಔಟ್‌‌ ನೋಟಿಸ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತುಷಾರ್ ಅವರು ವಿಪಕ್ಷಗಳ ಶಾಸಕರನ್ನು ಆಪರೇಷನ್ ಕಮಲ ಮೂಲಕ ಪಕ್ಷಾಂತರ ನಡೆಸಲು ತ್ರಂತ್ರ ರೂಪಿಸಿದ್ದಾರೆ ಎಂದು ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಆರೋಪಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ತುಷಾರ್ ಅವರು ರಾಜ್ಯದ ನಾಲ್ವರು ಟಿಆರ್‌ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು 100 ಕೋಟಿ ರೂ. ಆಫರ್‌ ಮಾಡಿದ್ದಾರೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: TRS ಶಾಸಕರ ಅಪರೇಷನ್ ಕಮಲ ಪ್ರಕರಣ: ತನಿಖೆ ಮೇಲಿನ ತಡೆಯಾಜ್ಞೆ ಹಿಂಪಡೆದ ತೆಲಂಗಾಣ ಹೈಕೋರ್ಟ್

ಟಿಆರ್‌ಎಸ್‌ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಐದು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅರ್ಧ ಗಂಟೆ ಕಾಲ ತುಷಾರ್ ಅವರ ಏಜೆಂಟ್‌ಗಳು ಟಿಆರ್‌ಎಸ್ ಶಾಸಕರಿಗೆ ಆಫರ್ ಬಗ್ಗೆ ಮಾತನಾಡುತ್ತಿರುವುದು ದಾಖಲಾಗಿದೆ. ಈ ವೇಳೆ ಅವರು ಅಮಿತ್ ಶಾ ಜೊತೆಗೆ ತುಷಾರ್ ಇರುವ ಕೆಲವು ಫೋಟೋಗಳು ಮತ್ತು ಇತರ ಕೆಲವು ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದರು.

ಟಿಆರ್‌ಎಸ್ ಶಾಸಕರನ್ನು ಆಪರೇಷನ್ ಕಮಲ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಹಿಂದೆ ತುಷಾರ್ ಇದ್ದಾರೆ ಎಂದು ಟಿಆರ್‌ಎಸ್‌ ಆರೋಪಿಸಿತ್ತು.

ನೋಟಿಸ್‌ ನೀಡಿದ ಬೆನ್ನಲ್ಲೇ ತೆಲಂಗಾಣ ಪೊಲೀಸರು ಕೊಚ್ಚಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯ ಕಣಿಚುಕುಲಂಗರದಲ್ಲಿರುವ ತುಷಾರ್ ಅವರ ಮನೆಗೆ ಕಳೆದ ದಿನ ಎಸ್‌ಐಟಿ ತಂಡ ತಲುಪಿದ್ದು, ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ದಾಳಿಯನ್ನು ನಲ್ಗೊಂಡ ಪೊಲೀಸ್ ವರಿಷ್ಠಾಧಿಕಾರಿ ರಮಾ ಮಹೇಶ್ವರಿ ನೇತೃತ್ವದಲ್ಲಿ ನಡೆದಿತ್ತು.

ಬಿಜೆಪಿಗೆ ಪಕ್ಷಾಂತರ ಮಾಡಲು 100 ಕೋಟಿ ಆಮಿಷ ಒಡ್ಡಲಾಗಿದೆ ಎಂದು ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಮಚಂದ್ರ ಭಾರತಿ, ಕೋರೆ ನಂದು ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಧನಕ್ಕೆ ಒಳಗಾದವರು ನಾಲ್ವರು ಶಾಸಕರಿಗೆ ಟಿಆರ್‌ಎಸ್ ತೊರೆದ ನಂತರ ಬಿಜೆಪಿ ಸೇರುವುದರಿಂದ ಆಗುವ ಲಾಭಗಳ ಕುರಿತು ವಿವರಿಸುತ್ತಿರುವ ವಿಡಿಯೋ ತುಣುಕುಗಳನ್ನು ಟಿಆರ್‌ಎಸ್‌ ಬಿಡುಗಡೆ ಮಾಡಿವೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್…

ಟಿಆರ್‌ಎಸ್‌ ಶಾಸಕ ರೋಹಿತ್ ರೆಡ್ಡಿ ಅವರು ಮೊಬೈಲ್ ಸ್ಪೀಕರ್ ಆನ್ ಮಾಡಿ ತುಷಾರ್ ಎಂದು ಹೇಳಿಕೊಂಡಿರುವ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ದಾಖಲಾಗಿದೆ. ಫೋನ್‌ನ ಇನ್ನೊಂದು ಕಡೆಯಲ್ಲಿ ತುಷಾರ್ ಅವರ ಧ್ವನಿಯನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕೇಳಬಹುದು ಎಂದು ಮುಖ್ಯಮಂತ್ರಿ ರಾವ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...