Homeರಾಷ್ಟ್ರೀಯಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

- Advertisement -
- Advertisement -

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ತಮ್ಮ ಒಳವಸ್ತ್ರವನ್ನು ತೆಗೆದು ಪರೀಕ್ಷೆ ಬರೆಯುವಂತೆ ಕೇಳಿ, ಮಹಿಳೆಯರ ಘನತೆಗೆ ಕುಂದುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354 (ಹೆಣ್ಣಿನ ಸ್ವಾಭಿಮಾನಕ್ಕೆ ಕುಂದುಂಟು ಮಾಡುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು 509 (ಮಹಿಳೆಯರ ಸ್ವಾಭಿಮಾನಕ್ಕೆ ಅವಮಾನ ಮಾಡುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ)ದ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲ್ಲಂ ಜಿಲ್ಲೆಯ ಆಯುರ್‌ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ವಿದ್ಯಾರ್ಥಿನಿಯರ ವಿರುದ್ಧ ಈ ಅವಮಾನಕರ ಘಟನೆ ನಡೆದಿದ್ದು, ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಮಹಿಳಾ ಅಧಿಕಾರಿಗಳ ತಂಡವು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನೀಟ್ ಪರೀಕ್ಷೆಗೆ ಕುಳಿತಿದ್ದ 17 ವರ್ಷದ ಬಾಲಕಿಯ ತಂದೆಯೊಬ್ಬರು ತನ್ನ ಮಗಳು ಮೂರು ಗಂಟೆಗಳ ಕಾಲ ಒಳವಸ್ತ್ರ ಇಲ್ಲದೆ ಪರೀಕ್ಷೆಗೆ ಕುಳಿತಿದ್ದ ಆಘಾತಕಾರಿ ಅನುಭವವನ್ನು ಮಾಧ್ಯಮಗಳ ಮುಂದೆ ತಿಳಿಸಿದ ನಂತರ ಪ್ರಕರಣವು ಬೆಳಕಿಗೆ ಬಂದಿತ್ತು. ತನ್ನ ಮಗಳು ನೀಟ್‌‌ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾದ ಡ್ರೆಸ್ ಕೋಡ್‌ನಂತೆ ಬಟ್ಟೆ ಧರಿಸಿದ್ದಳು, ಆದರೆ ಅದರಲ್ಲಿ ಒಳ ಉಡುಪುಗಳ ಬಗ್ಗೆ ಏನೂ ಉಲ್ಲೇಖಿಸಿರಲಿಲ್ಲ ಎಂದು ತಂದೆ ಟಿವಿ ಚಾನೆಲ್‌ಗೆ ತಿಳಿಸಿದ್ದರು.

ಈ ಘಟನೆಯನ್ನು ಖಂಡಿಸಿ ವಿವಿಧ ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು. ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವೂ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಕೊಲ್ಲಂ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಸೂಚಿಸಿದೆ.

ಇದನ್ನೂ ಓದಿ: ಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

ಸಾವಿರಾರು ವೈದ್ಯಕೀಯ ಆಕಾಂಕ್ಷಿಗಳಿಗೆ, NEET ಭದ್ರತಾ ತಪಾಸಣೆಯನ್ನು ತೆರವುಗೊಳಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಭ್ಯರ್ಥಿಗಳು ಸ್ಟೇಷನರಿಯನ್ನು ಕೊಂಡೊಯ್ಯದಂತೆ ಮತ್ತು ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ಅನುಸರಿಸಲು ಕೇಳಿಕೊಳ್ಳಲಾಗಿದ್ದು, ಇದರಲ್ಲಿ ವ್ಯಾಲೆಟ್‌ಗಳು, ಕೈಚೀಲಗಳು, ಬೆಲ್ಟ್‌ಗಳು, ಕ್ಯಾಪ್‌ಗಳು, ಆಭರಣಗಳು, ಶೂಗಳು ಮತ್ತು ಹೀಲ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...