Homeಮುಖಪುಟಕೇರಳ ನಾಮಪತ್ರ ವಿವಾದ- ಬಿಜೆಪಿ ಅಭ್ಯರ್ಥಿಗಳ ಮನವಿ ಹೈಕೋರ್ಟ್‌ನಲ್ಲೂ ತಿರಸ್ಕೃತ

ಕೇರಳ ನಾಮಪತ್ರ ವಿವಾದ- ಬಿಜೆಪಿ ಅಭ್ಯರ್ಥಿಗಳ ಮನವಿ ಹೈಕೋರ್ಟ್‌ನಲ್ಲೂ ತಿರಸ್ಕೃತ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡು ತೀವ್ರ ಹಿನ್ನಡೆ ಅನುಭವಿಸಿದ್ದ ಎನ್‌ಡಿಎ ಅಭ್ಯರ್ಥಿಗಳು, ಪ್ರಕರಣದ ಬಗ್ಗೆ ಮೇಲ್ಮನವಿ ಸಲ್ಲಿಸಿ ಕೇರಳ ಹೈಕೋರ್ಟ್ ಮೆಟ್ಟಿಲು ಹತ್ತಿದ್ದರು. ಇದೀಗ ಹೈಕೋರ್ಟ್ ಕೂಡಾ ಅವರ ಮೇಲ್ಮನವಿಯನ್ನು ತಿರಸ್ಕರಿಸಿದೆ. ಈ ಮೂಲಕ ಬಿಜೆಪಿ ನೇತೃತ್ವವು ಕೇರಳದಲ್ಲಿ ಭಾರಿ ಮುಖಭಂಗಕ್ಕೊಳಗಾಗಿದೆ.

ಚುನಾವಣ ಆಯೋಗವು, “ಚುನಾವಣಾ ಅಧಿಸೂಚನೆ ಹೊರಡಿಸಿದ ನಂತರ ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ವಾದಿಸಿತ್ತು. ಇದನ್ನು ಒಪ್ಪಿಕೊಂಡಿರುವ ಕೇರಳ ಹೈಕೋರ್ಟ್‌ ಅಭ್ಯರ್ಥಿಗಳ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ ಏಪ್ರಿಲ್ 06 ರಂದು ಚುನಾವಣೆ ನಡೆಯಲಿದ್ದು, ಕಳೆದವಾರ ತಲಶೇರಿ, ಗುರುವಾಯೂರು ಮತ್ತು ದೇವಿಕುಳಂ ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರಗಳು ಅಂತಿಮ ಪರಿಶೀಲನೆಯಲ್ಲಿ ತಿರಸ್ಕೃತವಾಗಿದ್ದವು.

ತಲಶೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ಜಿಲ್ಲಾಧ್ಯಕ್ಷ ಎನ್ ಹರಿದಾಸ್ ಅವರ ನಾಮಪತ್ರವನ್ನು ಅಂತಿಮ ಪರಿಶೀಲನೆಯಲ್ಲಿ ತಿರಸ್ಕರಿಸಲಾಗಿತ್ತು. ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಫಾರ್ಮ್ ಎ (ಅಭ್ಯರ್ಥಿ ಸ್ಫರ್ಧಿಸುವ ರಾಜಕೀಯ ಪಕ್ಷ), ಪಕ್ಷದ ರಾಜ್ಯ ಅಧ್ಯಕ್ಷರ ಕಡ್ಡಾಯ ಸಹಿ ಹೊಂದಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದರು.

ಗುರುವಾಯೂರು ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ನಿವೇದಿತಾ ಸುಬ್ರಮಣ್ಯಂ ಅವರ ನಾಮಪತ್ರವನ್ನು ಅಗತ್ಯ ದಾಖಲೆಪತ್ರಗಳನ್ನು ಸಲ್ಲಿಸದ ಕಾರಣ ನೀಡಿ ತಿರಸ್ಕರಿಸಲಾಗಿತ್ತು. ದೇವಿಕುಲಂ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಪಕ್ಷ ಎಐಎಡಿಎಂಕೆ ಅಭ್ಯರ್ಥಿ ಆರ್. ಧನಲಕ್ಷ್ಮಿ ಅವರ ನಾಮಪತ್ರ ಅಪೂರ್ಣ ನಾಮಪತ್ರ ಎಂದು ತಿರಸ್ಕರಿಸಲ್ಪಟ್ಟಿತ್ತು.

ಇದನ್ನೂ ಓದಿ: ‘ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ’ ಪೋಸ್ಟರ್: ಹಿಂದೂ ಯುವ ವಾಹಿನಿ ಸದಸ್ಯರ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...