Homeಅಂತರಾಷ್ಟ್ರೀಯಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

- Advertisement -
- Advertisement -

ಕೇರಳ ಮೂಲದ ನಿಮಿಷಾ ಪ್ರಿಯಾಗೆ ವಿಧಿಸಿದ ಮರಣದಂಡನೆ ಶಿಕ್ಷೆಯನ್ನು ದೇಶದ ಅಧ್ಯಕ್ಷ ರಶಾದ್ ಅಲ್-ಅಲಿಮಿ ಅನುಮೋದಿಸಿಲ್ಲ ಎಂದು ಭಾರತದಲ್ಲಿರುವ ಯೆಮೆನ್ ಗಣರಾಜ್ಯದ ರಾಯಭಾರ ಕಚೇರಿ ಸೋಮವಾರ ಹೇಳಿದೆ ಎಂದು ಕಾನ್ಸುಲೇಟ್ ಪತ್ರವನ್ನು ಉಲ್ಲೇಖಿಸಿ ಮನೋರಮಾ ನ್ಯೂಸ್ ವರದಿ ಮಾಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹದಿಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್‌ನಲ್ಲಿ ಜೈಲಿನಲ್ಲಿದ್ದಾರೆ. ಕೇರಳ ನರ್ಸ್

“ಇಡೀ ಪ್ರಕರಣವನ್ನು ಹೌತಿ ಬಂಡುಕೋರರು ನಿರ್ವಹಿಸಿದ್ದಾರೆ ಎಂದು ಯೆಮೆನ್ ಸರ್ಕಾರ ಒತ್ತಿಹೇಳುತ್ತದೆ ಮತ್ತು ಆದ್ದರಿಂದ, ಯೆಮೆನ್ ಗಣರಾಜ್ಯದ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾದ ಗೌರವಾನ್ವಿತ ಡಾ. ರಶಾದ್ ಅಲ್-ಅಲಿಮಿ ಅವರು ಈ ತೀರ್ಪನ್ನು ಅಂಗೀಕರಿಸಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

2020 ರಲ್ಲಿ, ರಾಜಧಾನಿ ಸನಾದ ವಿಚಾರಣಾ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತು. ಅವರ ಮನವಿಯನ್ನು ನವೆಂಬರ್ 2023 ರಲ್ಲಿ ಯೆಮೆನ್ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ತಿರಸ್ಕರಿಸಿತ್ತು. ಆದಾಗ್ಯೂ, ಷರಿಯಾ ಅಥವಾ ಇಸ್ಲಾಮಿಕ್ ಕಾನೂನಿನ ಪ್ರಕಾರ, ಹತ್ಯೆಗೀಡಾದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಿದರೆ ಅವರಿಗೆ ಕ್ಷಮೆ ನೀಡುವ ಆಯ್ಕೆಯನ್ನು ಇದು ಮುಕ್ತವಾಗಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 30 ರಂದು, ಯೆಮೆನ್ ಅಧ್ಯಕ್ಷೀಯ ನಾಯಕತ್ವ ಮಂಡಳಿಯ ಅಧ್ಯಕ್ಷರಾಗಿರುವ ಅಲ್-ಅಲಿಮಿ ಅವರು ಪ್ರಿಯಾಗೆ ಮರಣದಂಡನೆ ಶಿಕ್ಷೆಯನ್ನು ಅನುಮೋದಿಸಿದ್ದಾರೆ ಎಂದು  ವರದಿಗಳು ಹೇಳಿತ್ತು. ಈ ವೇಳೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಡಿಸೆಂಬರ್ 31 ರಂದು, ಪರಿಸ್ಥಿತಿಯ ಬಗ್ಗೆ ತಿಳಿದಿದ್ದು, ಈ ಪ್ರಕರಣದಲ್ಲಿ ಪ್ರಿಯಾ ಮತ್ತು ಅವರ ಕುಟುಂಬಕ್ಕೆ ಸಹಾಯವನ್ನು ನೀಡುತ್ತಿದೆ ಎಂದು ಹೇಳಿತ್ತು.

ಈ ನಡುವೆ, ಮರಣದಂಡನೆ ಶಿಕ್ಷೆಯನ್ನು ಮನ್ನಾ ಮಾಡಲು ಪ್ರಿಯಾ ಅವರ ತಾಯಿ ಕೊಲೆಗೀಡಾದ ಮೆಹದಿ ಕುಟುಂಬದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ದಿನಗೂಲಿ ಕಾರ್ಮಿಕರಾಗಿರುವ ತಮ್ಮ ಪೋಷಕರಿಗೆ ಸಹಾಯ ಮಾಡಲು ಪ್ರಿಯಾ ಅವರು 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಅವರು 2015 ರಲ್ಲಿ ತನ್ನದೆ ಆದ ಕ್ಲಿನಿಕ್ ಅನ್ನು ಪ್ರಾರಂಭಿಸಿದ್ದರು, ಅದಕ್ಕೂ ಮೊದಲು ಅವರು ಯೆಮೆನ್‌ನ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು.

ಈ ನಡುವೆ ಪ್ರಿಯಾ ಮತ್ತು ಅವರ ವ್ಯಾಪಾರದ ಪಾಲುದಾರರಾದ ಮೆಹದಿ ನಡುವೆ ಭಿನ್ನಾಭಿಪ್ರಾಯಗಳು ಬಂದಿದ್ದವು. ಅವರು ಹಣದ ದುರುಪಯೋಗದ ಬಗ್ಗೆ ಮೆಹದಿಯನ್ನು ಪ್ರಶ್ನಿಸಿದ್ದು ಈ ಭಿನ್ನಾಭಿಪ್ರಾಯಕ್ಕೆ ಕಾರಣ ಎಂದು ಅವರ ಕುಟುಂಬವು ಹೇಳಿಕೊಂಡಿದೆ. ಕೇರಳ ನರ್ಸ್

ಕೊಲೆಗೀಡಾದ ಮೆಹದಿ ತನ್ನ ಮಗಳಿಗೆ ಮಾದಕದ್ರವ್ಯದ ಅಮಲಿನಲ್ಲಿ ವರ್ಷಗಟ್ಟಲೆ ಚಿತ್ರಹಿಂಸೆ ನೀಡಿದ್ದಾನೆ ಮತ್ತು ಹಲವಾರು ಬಾರಿ ಬಂದೂಕು ತೋರಿಸಿ ಅವರ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಪ್ರಿಯಾ ಅವರ ತಾಯಿ ಮನವಿಯಲ್ಲಿ ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ಪ್ರಿಯಾ ದೇಶವನ್ನು ತೊರೆಯಲು ಸಾಧ್ಯವಾಗದಂತೆ ಅವರ ಪಾಸ್‌ಪೋರ್ಟ್ ಅನ್ನು ಕೂಡಾ ಮೆಹದಿ ಮುಟ್ಟುಗೋಲು ಹಾಕಿಕೊಂಡಿದ್ದರು ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಅದಾಗ್ಯೂ, ಪ್ರಿಯಾ ತನ್ನ ಪಾಸ್‌ಪೋರ್ಟ್ ಹಿಂಪಡೆಯುವುದಕ್ಕಾಗಿ ಮೆಹದಿಗೆ ನಿದ್ರೆಯ ಚುಚ್ಚುಮದ್ದನ್ನು ನೀಡಿದ್ದರು. ಆದರೆ, ಇದು ಮಿತಿಮೀರಿದ್ದರಿಂದ ಮೆಹದಿ ಸಾವನ್ನಪ್ಪಿದ್ದರು.

2014 ರಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರು ದೇಶದ ರಾಜಧಾನಿ ಸನಾವನ್ನು ವಶಪಡಿಸಿಕೊಂಡಾಗ ಯೆಮೆನ್‌ನಲ್ಲಿ ಅಂತರ್ಯುದ್ಧ ಪ್ರಾರಂಭವಾಗಿತ್ತು. ಅಂದಿನಿಂದ ಅವರು ದೇಶದ ಬಹುಪಾಲು ಭಾಗವನ್ನು ತಮ್ಮ ನಿಯಂತ್ರಣದಲ್ಲಿ ಇರಿಸಿದ್ದಾರೆ. ಹೌತಿಗಳು ಮುಸ್ಲಿಮರ ಶಿಯಾ ಪಂಗಡದ ಭಾಗವಾಗಿದ್ದು, ಯೆಮೆನ್‌ನ ಸುನ್ನಿ ಬಹುಮತದ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಲೆ ಬಂದಿದೆ.

2015 ರಲ್ಲಿ, ಸೌದಿ ಅರೇಬಿಯಾ ಮತ್ತು ಮುಸ್ಲಿಂ ರಾಜ್ಯಗಳ ಒಕ್ಕೂಟವು ಹೌತಿ ಬಂಡುಕೋರರನ್ನು ಹಿಮ್ಮೆಟ್ಟಿಸಲು ಮಧ್ಯಪ್ರವೇಶಿಸಿತ್ತು. ಅದರ ನಂತರ ಈ ಒಕ್ಕೂಟವು ಅಲಿ ಅಬ್ದುಲ್ಲಾ ಸಲೇಹ್ ಅವರ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಸರ್ಕಾರವನ್ನು ಪದಚ್ಯುತಗೊಳಿಸಿದ್ದರು. ಈ ವೇಳೆ ದೇಶದಲ್ಲಿ ಸಾವಿರಾರು ಜನರು ಸಾವನ್ನಪ್ಪಿ ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಇದನ್ನೂಓದಿ:  ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ಕೇರಳ ನರ್ಸ್ ಮರಣದಂಡನೆಗೆ ಅಧ್ಯಕ್ಷರ ಅನುಮತಿಯಿಲ್ಲ; ಯೆಮೆನ್ ರಾಯಭಾರ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...