Homeಮುಖಪುಟಕೇರಳ | ನರ್ಸಿಂಗ್ ವಿದ್ಯಾರ್ಥಿನಿಯ ಸಾವು ಪ್ರಕರಣ : ಮೂವರು ಸಹಪಾಠಿಗಳ ಬಂಧನ

ಕೇರಳ | ನರ್ಸಿಂಗ್ ವಿದ್ಯಾರ್ಥಿನಿಯ ಸಾವು ಪ್ರಕರಣ : ಮೂವರು ಸಹಪಾಠಿಗಳ ಬಂಧನ

- Advertisement -
- Advertisement -

ಕೇರಳದ ಪತ್ತನಂತಿಟ್ಟದ ಚುಟ್ಟಿಪ್ಪಾರ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮೂವರು ಸಹಪಾಠಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ತನಂತಿಟ್ಟದ ಎಸ್‌ಎಂಇ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಅಮ್ಮು ಎ ಸಜೀವ್ (21) ನವೆಂಬರ್ 15ರಂದು ಶುಕ್ರವಾರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆದರೆ, ವಿದ್ಯಾರ್ಥಿನಿಯ ಕುಟುಂಬಸ್ಥರು ಆಕೆಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದರು. ತಂದೆ ಸಜೀವ್, “ಮಗಳು ಸಹಪಾಠಿಗಳಿಂದ ಕಿರುಕುಳ ಅನುಭವಿಸುತ್ತಿದ್ದ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರಿಗೆ ದೂರು ನೀಡಿದ್ದೆ” ಎಂದಿದ್ದರು. ಹಾಗಾಗಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಆದೇಶಿಸಿದೆ.

ಅಮ್ಮು ಸಜೀವ್ ಸಾವಿಗೆ ಸಂಬಂಧಿಸಿದಂತೆ ಗುರುವಾರ (ನ.22) ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದ ಸಹೋದರ ಅಖಿಲ್ ಸಜೀವ್, “ನನ್ನ ಸಹೋದರಿ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಕೆಯ ಸಾವಿನ ಬಗ್ಗೆ ಕುಟುಂಬಕ್ಕೆ ಅನುಮಾನವಿದೆ. ಕೋಟಯಂ ಮೆಡಿಕಲ್ ಕಾಲೇಜು ಆಸ್ಪತ್ರೆ ಸಮೀಪದಲ್ಲೇ ಇರುವಾಗ ಅಮ್ಮುವನ್ನು ತಿರುವನಂತಪುರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಏಕೆ ಕರೆದುಕೊಂಡು ಹೋಗಲಾಯಿತು?” ಎಂದು ಪ್ರಶ್ನಿಸಿದ್ದರು.

ಈ ಬೆನ್ನಲ್ಲೇ ಮೂವರು ಸಹಪಾಠಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರಲ್ಲಿ ಒಬ್ಬರು ಕೋಟಯಂ ಮತ್ತು ಇಬ್ಬರು ಪತ್ತನಾಪುರಂ ಮೂಲದವರು ಎಂದು ತಿಳಿದು ಬಂದಿದೆ. ಅವರ ಹೆಸರು ಬಹಿರಂಗಗೊಂಡಿಲ್ಲ. ಅಮ್ಮು ತಂದೆ ನೀಡಿದ ದೂರು ಅನುಸರಿಸಿ ಮೂವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ನವೆಂಬರ್ 15ರಂದು ರಾತ್ರಿ ಅಮ್ಮುವಿನ ಹಾಸ್ಟೆಲ್ ವಾರ್ಡನ್, ಆಕೆ ಬಿದ್ದು ಮೂಳೆ ಮುರಿತ ಆಗಿದೆ. ತಿರುವನಂತಪುರಂ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಗುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದರು. ಪೋಷಕರು ಆಸ್ಪತ್ರೆಗೆ ಹೋದಾಗ, ಅಮ್ಮು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು.

ಅಮ್ಮು ಸಾವಿಗೆ ಸಂಬಂಧಿಸಿದಂತೆ ಕೇರಳ ಸ್ಟೂಡೆಂಟ್ ಯೂನಿಯನ್ (ಕೆಎಸ್‌ಯು) ಗುರುವಾರ ಚುಟ್ಟಿಪ್ಪಾರ ನರ್ಸಿಂಗ್ ಕಾಲೇಜಿಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಪೊಲೀಸರು ಕಾಲೇಜು ಬಳಿ ಮೆರವಣಿಗೆ ತಡೆದಾಗ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ರಾಜ್ಯದ ವಿವಿದೆಡೆಗಳಲ್ಲಿ ಅಮ್ಮು ಸಾವು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ : ನರ್ಸಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...