Homeಮುಖಪುಟಸಿಎಬಿ ವಿರುದ್ಧ ಒಟ್ಟಾಗಿ ನಿಂತ ಕೇರಳ: ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಂದೇ ವೇದಿಕೆಯಲ್ಲಿ ಭಾರೀ...

ಸಿಎಬಿ ವಿರುದ್ಧ ಒಟ್ಟಾಗಿ ನಿಂತ ಕೇರಳ: ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಂದೇ ವೇದಿಕೆಯಲ್ಲಿ ಭಾರೀ ಪ್ರತಿಭಟನೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಡಿಸೆಂಬರ್‌ 16 ರಂದು ಸಿಎಬಿ ವಿರುದ್ಧ ಒಟ್ಟಾಗಿ ಇಡೀ ಕೇರಳ ಗುಡುಗಲಿದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಂದೇ ವೇದಿಕೆಯಲ್ಲಿ ಭಾರೀ ಪ್ರತಿಭಟನೆ ನಡೆಸಲು ಸಜ್ಜುಗೊಂಡಿವೆ.

ಕೇರಳದ ವಿರೋಧ ಪಕ್ಷದ ನಾಯಕ ರಮೇಶ್‌ ಚೆನ್ನಿತಾಲಾ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಜಂಟಿ ಪ್ರತಿಭಟನೆ ನಡೆಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಳಿ ಮನವಿ ಮಾಡಿದ್ದೆವು. ಅವರೂ ಸಹ ಒಪ್ಪಿಕೊಂಡಿದ್ದಾರೆ. ಹಾಗಾಗಿ ಡಿಸೆಂಬರ್‌ 16ರಂದು ಹುತಾತ್ಮ ಕಾಲಂ ಬಳಿ ಎಲ್ಲಾ ಸಚಿವರು, ಶಾಸಕರು, ಮುಖಂಡರು, ವಿರೋಧ ಪಕ್ಷದ ಮುಖಂಡರು ಒಟ್ಟು ಕೂತು ಕಾಯ್ದೆಯ ವಿರುದ್ಧ ದನಿಯೆತ್ತಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಅದೇ ದಿನ ಕೋಲ್ಕತ್ತಾದಲ್ಲಿ ಟಿಎಂಸಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಭಾರೀ ರ್‍ಯಾಲಿ ಹಮ್ಮಿಕೊಂಡಿದ್ದೇವೆ ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಚಿಂತಕ ಯೋಗೇಂದ್ರ ಯಾದವ್‌ ಸೇರಿದಂತೆ ದೇಶದ ಎಲ್ಲಾ ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಸೇರಿ ಡಿಸೆಂಬರ್‌ 19ರಂದು ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದ್ದಾರೆ.

ಇದನ್ನೂ ಓದಿ: ಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

ಈ ಮೊದಲು ಕಾಯ್ದೆಯನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದ ರಾಜ್ಯಗಳು ಅದಕ್ಕೆ ತಿದ್ದುಪಡಿಯಲ್ಲಿ ಅವಕಾಶವಿಲ್ಲವೆಂದು ತಿಳಿದ ನಂತರ ಅದರ ವಿರುದ್ಧ ಭಾರೀ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...