Homeಮುಖಪುಟಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

ಕೇರಳ | ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆಸ್ಟ್ರೇಲಿಯನ್ ಪ್ರವಾಸಿಯ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ಏಪ್ರಿಲ್‌ ತಿಂಗಳ ವೇಳೆ ಕೇರಳದ ಕೊಚ್ಚಿಯಲ್ಲಿ ಪ್ಯಾಲೆಸ್ತೀನ್ ಪರ ಬ್ಯಾನರ್ ಮತ್ತು ಬೋರ್ಡ್‌ಗಳನ್ನು ಹರಿದು ಹಾಕಿದ್ದ ಆರೋಪದ ಮೇಲೆ ಆಸ್ಟ್ರೇಲಿಯಾದ ಪ್ರವಾಸಿ ಜರಾ ಮಿಚೆಲ್ ಶಿಲಾನ್ಸ್ಕಿ ವಿರುದ್ಧದ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಪೋಸ್ಟರ್‌ಗಳು ಯಾವುದೇ ಸಂಘಟನೆಯ ಹೆಸರನ್ನು ಹೊಂದಿಲ್ಲ ಮತ್ತು ಅವುಗಳ ಪ್ರದರ್ಶನಕ್ಕೆ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಯಾವುದೇ ಕಾನೂನು ಅಧಿಕಾರವಿಲ್ಲದೆ ಪೋಸ್ಟರ್‌ಗಳನ್ನು ಹಾಕಲಾಗಿದೆ. ಅವುಗಳಲ್ಲಿ ಜವಾಬ್ದಾರಿಯುತ ಯಾವುದೇ ಸಂಘಟನೆಯ ಹೆಸರನ್ನು ಹೊಂದಿಲ್ಲವಾದ್ದರಿಂದ, ಪೋಸ್ಟರ್‌ಗಳನ್ನು ತೆಗೆದುಹಾಕುವುದು ಅಥವಾ ಹರಿದು ಹಾಕುವುದು ಕಾನೂನುಬಾಹಿರ ಅಥವಾ ಗಲಭೆಯನ್ನು ಪ್ರಚೋದಿಸುವ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ತೀರ್ಪು ನೀಡಿದ್ದಾರೆ.

“IPC ಯ ಸೆಕ್ಷನ್ 153 ರ ಅಡಿಯಲ್ಲಿ ಅಪರಾಧಕ್ಕಾಗಿ ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದ್ದು. ಈ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

ತನ್ನ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಶಿಲಾನ್ಸ್ಕಿ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಶಿಲಾನ್ಸ್ಕಿಯನ್ನು ಪ್ರತಿನಿಧಿಸಿದ ವಕೀಲ ಬ್ಲೇಜ್ ಕೆ. ಜೋಸ್, ಶಿಲಾನ್ಸ್ಕಿ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗಳು ಕೇವಲ ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ವಾದಿಸಿದ್ದಾರೆ.

ಜಮಾತ್-ಎ-ಇಸ್ಲಾಮಿ ಹಿಂದ್‌ನ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಕಮಲಕ್ಕಡವು ಜುಂಕಾರ್ ಜೆಟ್ಟಿಯಲ್ಲಿ ಅಳವಡಿಸಿದ್ದ ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳು ಮತ್ತು ಬೋರ್ಡ್‌ಗಳನ್ನು ಇಬ್ಬರು ವಿದೇಶಿ ಮಹಿಳಾ ಪ್ರವಾಸಿಗರು ಹರಿದು ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳೊಂದಿಗೆ ವಿವಾದ ಉಂಟಾಗಿದ್ದು, ಆಸ್ಟ್ರೇಲಿಯನ್ ಪ್ರವಾಸಿಗರೊಂದಿಗೆ ವಾಗ್ವಾದ ನಡೆದಿತ್ತು.

ಪೋಸ್ಟರ್‌ಗಳನ್ನು ಪ್ರಚೋದನೆಗಾಗಿ ಹರಿದು ಹಾಕಲಾಗಿದೆ ಅಥವಾ ಅದು ಗಲಭೆಗೆ ಪ್ರಚೋದನೆ ನೀಡುತ್ತದೆ ಎಂದು ಅಂತಿಮ ವರದಿಯಲ್ಲಿ ಸೂಚಿಸಿಲ್ಲ ಎಂದು ನ್ಯಾಯಾಲಯವು ಹೇಳಿದೆ. ಶಿಲಾನ್ಸ್ಕಿಗೆ ತನ್ನ ಕೃತ್ಯದಿಂದ ಗಲಭೆ ನಡೆಯುತ್ತದೆ, ಮತ್ತು ಅದು ಸಂಭಾವ್ಯ ಅಪರಾಧಕ್ಕೆ ಕಾರಣವಾಗಬಹುದು ಅಥವಾ ಇದರಿಂದಾಗಿ ಇತರರು ಪ್ರಚೋದಿತರಾಗುತ್ತಾರೆ ಎಂದು ತಿಳಿದಿತ್ತೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿಲ್ಲ ಎಂದು ನ್ಯಾಯಾಲಯ ಒತ್ತಿಹೇಳಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...