Homeಮುಖಪುಟವಯನಾಡ್ ದುರಂತ 'ರಾಷ್ಟ್ರೀಯ ವಿಪತ್ತು' ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

ವಯನಾಡ್ ದುರಂತ ‘ರಾಷ್ಟ್ರೀಯ ವಿಪತ್ತು’ ಅಲ್ಲವೆಂದ ಕೇಂದ್ರ : ಬಂದ್‌ ಕರೆಕೊಟ್ಟ ಕೇರಳದ ಆಡಳಿತ-ಪ್ರತಿಪಕ್ಷ

- Advertisement -
- Advertisement -

ವಯನಾಡ್ ಭೂಕುಸಿತ, ಪ್ರಳಯ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಖಂಡಿಸಿ ನವೆಂಬರ್ 19ರಂದು ಜಿಲ್ಲಾ ಬಂದ್‌ಗೆ ಕೇರಳದ ಆಡಳಿತ ಮತ್ತು ಪ್ರತಿಪಕ್ಷಗಳು ಕರೆ ನೀಡಿವೆ.

ಶುಕ್ರವಾರ (ನ.15) ಈ ಕುರಿತು ಘೋಷಣೆ ಮಾಡಿರುವ ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಮತ್ತು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ನವೆಂಬರ್ 19ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಯನಾಡ್ ಜಿಲ್ಲಾ ಬಂದ್ ಮಾಡಲಾಗುವುದು. ಅಂಗಡಿ-ಮುಂಗಟ್ಟುಗಳು ಮತ್ತು ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುವುದಿಲ್ಲ ಎಂದಿವೆ. ಎಲ್‌ಡಿಎಫ್‌ ಮತ್ತು ಯುಡಿಎಫ್‌ ಪ್ರತ್ಯೇಕವಾಗಿ ಪ್ರತಿಭಟಿಸಲಿವೆ ಎಂದು ತಿಳಿದು ಬಂದಿದೆ.

ರಾಜ್ಯ ಕಂದಾಯ ಸಚಿವ ಕೆ.ರಾಜನ್ ಕೇಂದ್ರದ ನಿಲುವಿನ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದು, ಇದು ‘ದುರದೃಷ್ಟಕರ’ ಎಂದಿದ್ದಾರೆ. ಕೇರಳವನ್ನು ಬದಿಗೆ ಸರಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ಹೇಳಿದ್ದಾರೆ.

ಆದರೆ, ಕೇಂದ್ರ ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರದ ನಡೆಯನ್ನು ಸಮರ್ಥಿಸಿಕೊಂಡಿದ್ದು, ಯಾವುದೇ ಪಕ್ಷಪಾತ ಧೋರಣೆಯನ್ನು ಕೇಂದ್ರ ಹೊಂದಿಲ್ಲ. ಸ್ಥಾಪಿತ ನಿಯಮಗಳು ಮತ್ತು ಕಾರ್ಯವಿಧಾನಗಳಿಗೆ ಬದ್ಧವಾಗಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ (SDRF)ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF)ಯ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಸ್ಥಾಪಿತ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರಕಾರ, ವಯನಾಡ್ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂಬುವುದಾಗಿ ಘೋಷಿಸಲು ಬರುವುದಿಲ್ಲ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.

ಜುಲೈ 30,2024ರಂದು ಕೇರಳದ ವಯನಾಡ್ ಜಿಲ್ಲೆ ವೈತ್ತಿರಿ ತಾಲೂಕಿನ ಮೆಪ್ಪಾಡಿ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಪುಂಜಿರಿಮಟ್ಟಂ, ಮುಂಡಕ್ಕೈ, ಚೂರಲ್ಮಲಾ ಮತ್ತು ವೆಳ್ಳರಿಮಲದಲ್ಲಿ ಭೀಕರ ಭೂಕುಸಿತ ಮತ್ತು ಜಲಪ್ರಳಯ ಸಂಭವಿಸಿತ್ತು. ಈ ಘಟನೆಯಲ್ಲಿ 420 ಜನರು ಸಾವನ್ನಪ್ಪಿದ್ದು, 397 ಮಂದಿ ಗಾಯಗೊಂಡಿದ್ದಾರೆ ಮತ್ತು 118 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಕೇರಳದ ಇತಿಹಾಸದಲ್ಲಿ ಇದೊಂದು ಕರಾಳ ಘಟನೆಯಾಗಿದೆ.

ಈ ಭೂಕುಸಿತ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಿ 2000 ಕೋಟಿ ರೂಪಾಯಿ ನೆರವು ನೀಡಬೇಕು ಎಂದು ಕೇರಳ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಆದರೆ, ಕೇಂದ್ರ ಸರ್ಕಾರ 2024-25 ಹಣಕಾಸು ವರ್ಷದಲ್ಲಿ ರಾಜ್ಯದ ಎಸ್‌ಡಿಆರ್‌ಎಫ್‌ ನಿಧಿಗೆ 388 ಕೋಟಿ ರೂ. ನೀಡಿದೆ. ಕೇರಳ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ನೀಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 1, 2024 ರ ಹೊತ್ತಿಗೆ ಎಸ್‌ಡಿಆರ್‌ಎಫ್ ನಿಧಿಯಲ್ಲಿ 394.99 ಕೋಟಿ ರೂ. ಇದೆ ಎಂಬುವುದನ್ನು ಕೇಂದ್ರ ಎತ್ತಿ ತೋರಿಸಿದೆ. ಈ ತಿಂಗಳಾಂತ್ಯಕ್ಕೆ ಕೇರಳಕ್ಕೆ ಹಣ ಮಂಜೂರು ಮಾಡುವ ಕುರಿತು ಕೇಂದ್ರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಇದನ್ನೂ ಓದಿ : ಮಣಿಪುರದಲ್ಲಿ ತೀವ್ರಗೊಂಡ ಹಿಂಸಾಚಾರ | ಆರು ಮಂದಿಯ ಅಪಹರಣ : ಮೂವರ ಶವ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ...

ತಮಿಳುನಾಡು: ಪ್ರತಿಭಟನಾ ನಿರತ ಶಿಕ್ಷಕರು, ನೈರ್ಮಲ್ಯ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಪ್ರೇಮಲತಾ ವಿಜಯಕಾಂತ್

ತಮಿಳುನಾಡು ಸರ್ಕಾರವು ಪ್ರತಿಭಟನಾ ನಿರತ ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ನೈರ್ಮಲ್ಯ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಗುರುವಾರ ಹೇಳಿದ್ದಾರೆ.  ತಮ್ಮ...

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ "ಲೆ ಕಾನ್ಸ್ಟೆಲೇಷನ್" ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ...

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ. ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ...

ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 'ಸನಾತನ...

ಜಮ್ಮು-ಕಾಶ್ಮೀರ| 17 ಹಳ್ಳಿಗಳ 150 ಜನರಿಗೆ ‘ರಕ್ಷಣಾ ತರಬೇತಿ’ ನೀಡುತ್ತಿರುವ ಸೇನಾ ಪಡೆ

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಚೆನಾಬ್ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿ, ಗ್ರಾಮ ಮಟ್ಟದ ಭದ್ರತೆಯನ್ನು ಬಲಪಡಿಸಲು ಸೇನೆಯು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ದೋಡಾ-ಚಂಬಾ ಗಡಿಯುದ್ದಕ್ಕೂ 17...