Homeಕರೋನಾ ತಲ್ಲಣಕೇರಳ: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ. ಆರ್ಥಿಕ ನೆರವು

ಕೇರಳ: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ. ಆರ್ಥಿಕ ನೆರವು

- Advertisement -
- Advertisement -

ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವು ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ 3 ಲಕ್ಷ ರೂಪಾಯಿಗಳ ‘ಒನ್-ಟೈಮ್’ ಆರ್ಥಿಕ ನೆರವು ನೀಡುವುದಾಗಿ ಶನಿವಾರ (ಆಗಸ್ಟ್ 28) ಘೋಷಿಸಿದೆ.

ಕೊರೊನಾ ಕಾರಣದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 18 ವರ್ಷ ತುಂಬುವವರೆಗೆ ಪ್ರತಿ ತಿಂಗಳು 2000 ರೂಗಳನ್ನು ನೀಡುವುದಾಗಿ ಮತ್ತು ಪದವಿ ಪಡೆಯುವವರೆಗೂ ಈ ಮಕ್ಕಳ ಶಿಕ್ಷಣದ ವೆಚ್ಚವನ್ನು ಭರಿಸುವುದಾಗಿ ಕೇರಳ ಸರ್ಕಾರ ಘೋಷಿಸಿದೆ.

ಈ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  “ಕೋವಿಡ್ ವೈರಸ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮುಂದಿನ ವಾರದಲ್ಲಿ 3 ಲಕ್ಷ ರೂಪಾಯಿ ನೀಡಲಾಗುವುದು. ಅವರಿಗೆ 18 ವರ್ಷ ತುಂಬುವವರೆಗೆ ಪ್ರತಿ ತಿಂಗಳು 2000 ರೂಪಾಯಿಗಳನ್ನು ವೆಚ್ಚಕ್ಕಾಗಿ ಸರ್ಕಾರದಿಂದ ಭರಿಸಲಾಗುವುದು. ಇದರ ಜೊತೆಗೆ ಅವರು ಪದವಿ ಪಡೆಯುವವರೆಗೂ ಈ ಮಕ್ಕಳ ಶಿಕ್ಷಣದ ವೆಚ್ಚವನ್ನು ಸರ್ಕಾರ ನೋಡಿಕೊಳ್ಳುತ್ತದೆ. ಈ ಯೋಜನೆಗೆ 3.20 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಕೇರಳ: ತಂದೆ ಜೊತೆ ಶಬರಿಮಲೆಗೆ ತೆರಳಲು 9 ವರ್ಷದ ಬಾಲಕಿಗೆ ಹೈಕೋರ್ಟ್ ಅನುಮತಿ

ಈ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಶಾಲೆಗಳು ತಮ್ಮ ಶುಲ್ಕವನ್ನು ಮನ್ನಾ ಮಾಡಲು ವಿಫಲವಾದರೆ, ಕೊರೊನಾ ವೈರಸ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಕೊರೊನಾ ವೈರಸ್ ಹೆಚ್ಚಳದಿಂದಾಗಿ ಕೇರಳ ರಾಜ್ಯದಲ್ಲಿ ಆಗಸ್ಟ್ 30 ರಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ.  ಕೇರಳದಲ್ಲಿ ಆಗಸ್ಟ್ 25 ರಿಂದ 30,000 ಕ್ಕೂ ಹೆಚ್ಚು ಕೋವಿಡ್  ಪ್ರಕರಣಗಳು ವರದಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಳೆದ ವಾರ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮುಂಬರುವ ನಾಲ್ಕು ವಾರಗಳು ರಾಜ್ಯಕ್ಕೆ ಬಹಳ ನಿರ್ಣಾಯಕವಾಗಲಿದೆ ಎಂದು ಜನರಿಗೆ ಎಚ್ಚರಿಕೆ ನೀಡಿದ್ದರು. “ಆರ್ಥಿಕ ಚಟುವಟಿಕೆಗಳು ನಡೆಯಬೇಕಾಗಿರುವುದರಿಂದ ಲಾಕ್‌ಡೌನ್ ಅನ್ನು ಸಾರ್ವಕಾಲಿಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಜೀವನ ಮತ್ತು ಜೀವನೋಪಾಯ ಎರಡನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವೀಣಾ ಜಾರ್ಜ್ ಹೇಳಿದ್ದರು.


ಇದನ್ನೂ ಓದಿ: ‘ಮುಂದಿನ 4 ವಾರ ಕೇರಳಕ್ಕೆ ನಿರ್ಣಾಯಕ’ – ಕೊರೊನಾ ಬಗ್ಗೆ ಎಚ್ಚರಿಕೆ ನೀಡಿದ ವೀಣಾ ಜಾರ್ಜ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

0
ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮೋದಿಯ...