Homeಮುಖಪುಟಕೇರಳ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ವಿ ಅನ್ವರ್

ಕೇರಳ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ವಿ ಅನ್ವರ್

- Advertisement -
- Advertisement -

ಇತ್ತೀಚೆಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ ಕೇರಳದ ನೀಲಂಬೂರು ಕ್ಷೇತ್ರದ ಸ್ವತಂತ್ರ ಶಾಸಕ ಪಿವಿ ಅನ್ವರ್ ಅವರು ರಾಜೀನಾಮೆ ನೀಡಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಬೆಂಬಲದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅನ್ವರ್, ಜನವರಿ 13ರಂದು ಸೋಮವಾರ ಕೇರಳ ವಿಧಾನಸಭಾ ಸ್ಪೀಕರ್‌ಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಜನವರಿ 11ರಂದು, ಅನ್ವರ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಎಐಟಿಸಿಯ ಅಥವಾ ಟಿಎಂಸಿಯ ಕೇರಳ ರಾಜ್ಯ ಸಂಯೋಜಕರಾಗಿ ನೇಮಕಗೊಂಡಿರುವುದಾಗಿ ಘೋಷಿಸಿದ್ದರು. ಇದೀಗ, ಅನರ್ಹತೆ ಎದುರಿಸಬೇಕಾದೀತು ಎಂಬ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ವತಂತ್ರ ಶಾಸಕರು ರಾಜಕೀಯ ಪಕ್ಷಕ್ಕೆ ಸೇರಿದರೆ ತಮ್ಮ ಸ್ಥಾನವನ್ನು ತ್ಯಜಿಸಬೇಕಾಗುತ್ತದೆ. 1985 ರ 52ನೇ ತಿದ್ದುಪಡಿಯ ಮೂಲಕ ಸಂವಿಧಾನದಲ್ಲಿ ಸೇರಿಸಲಾದ ಪಕ್ಷಾಂತರ ವಿರೋಧಿ ಕಾಯ್ದೆ ಎಂದು ಕರೆಯಲ್ಪಡುವ ಹತ್ತನೇ ಶೆಡ್ಯೂಲ್ ಸ್ವತಂತ್ರ ಶಾಸಕರನ್ನು ಈ ವ್ಯಾಪ್ತಿಯೊಳಗೆ ತಂದಿತು.

ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಆರ್. ಅಜಿತ್ ಕುಮಾರ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜಕೀಯ ಕಾರ್ಯದರ್ಶಿ ಪಿ. ಶಶಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ನಂತರ ಸಿಪಿಐ(ಎಂ) ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ಅನ್ವರ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಲು ವಿಫಲ ಪ್ರಯತ್ನ ಮಾಡಿದ್ದರು. ನಂತರ ಅವರು ಡೆಮಾಕ್ರಟಿಕ್ ಮೂವ್‌ಮೆಂಟ್ ಆಫ್ ಕೇರಳ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು.

ಇತ್ತೀಚೆಗೆ ನೀಲಂಬೂರಿನಲ್ಲಿ ಅರಣ್ಯ ವಿಭಾಗೀಯ ಕಚೇರಿ (ಉತ್ತರ) ಧ್ವಂಸ ಮಾಡಿದ್ದಕ್ಕಾಗಿ ಅನ್ವರ್ ಅವರನ್ನು ಬಂಧಿಸಲಾಗಿತ್ತು. ಕಾಡಾನೆ ದಾಳಿಯಿಂದ ಬುಡಕಟ್ಟು ಯುವಕನೊಬ್ಬ ಸಾವನ್ನಪ್ಪಿದ ನಂತರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು.
ಜನವರಿ 6 ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಅನ್ವರ್ ಅವರು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನೊಂದಿಗೆ ಸಹಕರಿಸಲು ಸಿದ್ಧ ಎಂದು ಹೇಳಿದ್ದರು. ನಂತರ ಅವರು ಟಿಎಂಸಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...