Homeಮುಖಪುಟಕೇರಳ ಭೂಕುಸಿತ: ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದ ರಾಹುಲ್ ಗಾಂಧಿ!

ಕೇರಳ ಭೂಕುಸಿತ: ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದ ರಾಹುಲ್ ಗಾಂಧಿ!

ರಾಹುಲ್ ಗಾಂಧಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿದ್ದ ಸಂತ್ರಸ್ತೆ ನಿರ್ಭಯಾ ಅವರ ಸಹೋದರನ ವಿದ್ಯಾಭ್ಯಾಸದ ಖರ್ಚು ನೋಡಿಕೊಂಡಿದ್ದು, ಆತ ಬಯಸಿದಂತೆ ಪೈಲಟ್ ತರಬೇತಿಯನ್ನು ಕೊಡಿಸಿದ್ದರು.

- Advertisement -
- Advertisement -

ಮೂರು ದಿನಗಳ ಕೇರಳ ರಾಜ್ಯದ ವಯನಾಡು ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಲಪ್ಪುರಂನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕೊರೊನಾ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿರುವ ಹಿನ್ನೆಲೆ ತಮ್ಮ ಸಂಸದೀಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದರು.

ಕಳೆದ ಮೂರು ದಿನಗಳಲ್ಲಿ, ಕೇರಳ ರಾಜ್ಯದಲ್ಲಿ ಮಲಪ್ಪುರಂನಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಭಾನುವಾರ 1,399, ಶನಿವಾರ 1,519 ಮತ್ತು ಶುಕ್ರವಾರ 1,025 ಪ್ರಕರಣಗಳು ವರದಿಯಾಗಿವೆ.

ಜಿಲ್ಲಾಧಿಕಾರಿಗಳ ಸಭೆ ಬಳಿಕ ರಾಹುಲ್ ಗಾಂಧಿ, ಕಳೆದ ವರ್ಷ ಮಲಪ್ಪುರಂನ ಕವಲಪ್ಪರ ಭೂಕುಸಿತದಲ್ಲಿ ಪೋಷಕರು ಮತ್ತು ಮನೆಯನ್ನು ಕಳೆದುಕೊಂಡಿದ್ದ ಕಾವ್ಯ ಮತ್ತು ಕಾರ್ತಿಕಾ ಎಂಬ ಸಹೋದರಿಯರಿಗೆ ಹೊಸ ಮನೆಯ ಕೀ ಹಸ್ತಾಂತರಿಸಿದರು.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರಿ ಮಳೆಯಿಂದಾಗಿ ಮಳಪ್ಪುರಂನ ಕವಲಪ್ಪರ ಮತ್ತು ವಯನಾಡ್ ಜಿಲ್ಲೆಯ ಪುತ್ತುಮಾಲದಲ್ಲಿ ಜರುಗಿದ ಭೂಕುಸಿತಗಳು ಕೇರಳದ ಎರಡು ಪ್ರಮುಖ ಭೂಕುಸಿತಗಳಾಗಿವೆ. ಈ ದುರಂತದಲ್ಲಿ ಕನಿಷ್ಠ 113 ಜನರು ಸಾವನ್ನಪ್ಪಿದ್ದಾರೆ.

ಈ ದುರ್ಘಟನೆಯಲ್ಲಿ ಪೋಷಕರೊಂದಿಗೆ, ಇರಲು ಮನೆ ಕೂಡ ಇಲ್ಲದಂತೆ ಎಲ್ಲವನ್ನು ಕಳೆದುಕೊಂಡಿದ್ದ ಸಹೋದರಿಯರಿಗೆ ರಾಹುಲ್ ಗಾಂಧಿ ಹೊಸ ಮನೆ ನಿರ್ಮಿಸಿಕೊಟ್ಟಿದ್ದು, ಇಂದು ವಯನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯ ಕೀಯನ್ನು ನೀಡಿದ್ದಾರೆ.

ಈ ಹಿಂದೆ ಕೂಡ ರಾಹುಲ್ ಗಾಂಧಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿದ್ದ ಸಂತ್ರಸ್ತೆ ನಿರ್ಭಯಾ ಅವರ ಕಿರಿಯ ಸಹೋದರರ ವಿದ್ಯಾಭ್ಯಾಸದ ಖರ್ಚು ನೋಡಿಕೊಂಡಿದ್ದು, ಆತ ಬಯಸಿದಂತೆ ಪೈಲಟ್ ತರಬೇತಿಯನ್ನು ಕೊಡಿಸಿದ್ದರು. ತರಬೇತಿ ಮುಗಿಸಿ ಖಾಸಗಿ ವಿಮಾನಯಾನ ಸಂಸ್ಥೆಗೆ ಕೆಲಸಕ್ಕೆ ಸೇರಿದ್ದಾರೆ.

ಅಂದು ಕೂಡ ನಿರ್ಭಯಾ ಪೋಷಕರು ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ದರು. ದುಖಃದಿಂದ ಬಳಲುತ್ತಿದ್ದ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...