Homeಮುಖಪುಟಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ...

ಕೇರಳ | ಡಿಎಂಕೆ ಚಳವಳಿ ಪ್ರಾರಂಭಿಸಿದ ಪಿವಿ ಅನ್ವರ್ : ರಾಜಕೀಯ ಪಕ್ಷ ಅಲ್ಲ ಎಂದ ಬಂಡಾಯ ಶಾಸಕ

- Advertisement -
- Advertisement -

ಕೇರಳದ ನಿಲಂಬೂರ್‌ನ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಬಂಡಾಯ ಶಾಸಕ ಪಿವಿ ಅನ್ವರ್ ಅವರು ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ಅಕ್ಟೋಬರ್ 6ರ ಭಾನುವಾರದಂದು ‘ಡೆಮಾಕ್ರಟಿಕ್ ಮೂವ್‌ಮೆಂಟ್ ಕೇರಳ’ (ಡಿಎಂಕೆ) ಎಂಬ ತಮ್ಮ ‘ಸಾಮಾಜಿಕ ಚಳುವಳಿ’ಯನ್ನು ಅಧಿಕೃತವಾಗಿ ಪ್ರಾರಂಭಿಸಿದ್ದಾರೆ.

ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಗೆ ಒಲವು ಹೊಂದಿರುವ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜನರು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವನ್ನು ಹೋಲುವ ಧ್ವಜ ಮತ್ತು ಸ್ಕಾರ್ಫ್‌ಗಳನ್ನು ಧರಿಸಿದ್ದರು. ಗಮನಾರ್ಹವಾಗಿ, ಈ ಹಿಂದೆ ಅನ್ವರ್ ಅವರು ದ್ರಾವಿಡ ಪಕ್ಷಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅನ್ವರ್, “ಪೊಲೀಸರು ಉದ್ದೇಶಪೂರ್ವಕವಾಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನಮ್ಮ ಬೆಂಬಲಿಗರ ವಾಹನಗಳನ್ನು ತಡೆದಿದ್ದಾರೆ. ಅವರು ಸಾಧ್ಯವಾಗುವ ಎಲ್ಲಾ ರೀತಿಯಲ್ಲೂ ನಮ್ಮ ಕಾರ್ಯಕ್ರಮ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಡಿಎಂಕೆ ಪಕ್ಷದ ರಾಜ್ಯ ಪದಾಧಿಕಾರಿಗಳ ಮನೆಗೆ ಭೇಟಿ ನೀಡಿ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿರುವ ಬಗ್ಗೆ ಪ್ರಶ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅನ್ವರ್, “ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದು ರಾಜಕೀಯ ಪಕ್ಷ ಪ್ರಾರಂಭಿಸಲು ಅಲ್ಲ, ಬದಲಾಗಿ ಚಳವಳಿಗೆ ಅವರ ಆಶೀರ್ವಾದ ಪಡೆಯಲು ಎಂದಿದ್ದಾರೆ. ಕೇರಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅನ್ವರ್, ಡಿಎಂಕೆ ಭಾರತದಲ್ಲಿ ಅತ್ಯಂತ ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷವಾಗಿರುವ ಕಾರಣ ನಾನು ಸ್ಟಾಲಿನ್ ಅವರನ್ನು ಭೇಟಿ ಮಾಡಲು ಹೋಗಿದ್ದೆ, ಈ ನಡುವೆ ಸಿಪಿಐ(ಎಂ)ನ ಒಬ್ಬ ವ್ಯಕ್ತಿ ಸ್ಟಾಲಿನ್ ಅವರನ್ನು ಭೇಟಿಯಾಗಿ, ನನ್ನ ವಿರುದ್ಧ ಹೇಳಿಕೆ ನೀಡುವಂತೆ ಕೋರಿದ್ದಾರೆ” ಎಂದು ಆರೋಪಿಸಿದ್ದಾರೆ. ವರದಿಗಳ ಪ್ರಕಾರ, ಸ್ಟಾಲಿನ್ ಅವರು ಅನ್ವರ್ ಅವರನ್ನು ಭೇಟಿಗೆ ನಿರಾಕರಿಸಿದ್ದಾರೆ.

“ಲೋಕಸಭೆ ಚುನಾವಣೆಯ ಸಂದರ್ಭ ಕೊಯಮತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ ಅಣ್ಣಾಮಲೈ ವಿರುದ್ಧ ಸ್ಪರ್ಧಿಸಲು ಡಿಎಂಕೆ ಸಿಪಿಐನ ಸೀಟು ಕಿತ್ತುಕೊಂಡಿದ್ದಕ್ಕೆ ತ್ರಿಶೂರ್‌ನಲ್ಲಿ ಬಿಜೆಪಿ ಗೆಲುವಿಗೆ ಕೇರಳ ಮುಖ್ಯಮಂತ್ರಿಯೇ ದಾರಿ ಮಾಡಿಕೊಟ್ಟಿದ್ದಾರೆ ಎಂದು ಪಿಣರಾಯಿ ವಿಜಯನ್‌ರ ಹೆಸರನ್ನು ಉಲ್ಲೇಖಿಸದೆ ಅನ್ವರ್ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಉಪಚುನಾವಣೆಗೆ ಬಿಜೆಪಿ ಮತ್ತು ಸಿಪಿಎಂ ನಡುವೆ ಒಳ ಒಪ್ಪಂದ ಆಗಿದೆ. ಸಿಪಿಐ(ಎಂ) ನೆರವಿನಿಂದ ಪಾಲಕ್ಕಾಡ್ ಕ್ಷೇತ್ರವನ್ನು ಬಿಜೆಪಿ ಭದ್ರಪಡಿಸಿಕೊಳ್ಳಲಿದೆ ಮತ್ತು ಚೇಲಕ್ಕರಾದಲ್ಲಿ ಬಿಜೆಪಿ ಸಿಪಿಐಎಂಗೆ ಮತ ಹಾಕಲಿದೆ” ಎಂದಿದ್ದಾರೆ. ಡಿಎಂಕೆ ಮತ್ತು ಸ್ಟಾಲಿನ್ ಅವರನ್ನು ಅನ್ವರ್ ಹಾಡಿ ಹೊಗಲಿದ್ದಾರೆ.

“ತ್ರಿಶೂರ್ ಪೂರಂ ವೇಳೆ ಉದ್ದೇಶಪೂರ್ವಕವಾಗಿ ವಿವಾದ ಎಬ್ಬಿಸಿದ್ದು ಎಡಿಜಿಪಿ ಅಜಿತ್ ಕುಮಾರ್. ನಾನು ತ್ರಿಶೂರ್ ಪೂರಂ ಸಮಯದಲ್ಲಿ ನಡೆದ ತಂತ್ರಗಳನ್ನು ಎತ್ತಿ ತೋರಿಸಿದೆ. ಅದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದೆ. ಆದರೆ, ಎಡಿಜಿಪಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಿಎಂ ಸಿದ್ಧರಿರಲಿಲ್ಲ” ಎಂದು ಹೇಳಿದ್ದಾರೆ.

ತನ್ನ ಹೊಸ ಆಂದೋಲನದ ಪ್ರಣಾಳಿಕೆಯನ್ನು ಅನ್ವರ್ ಬಿಡುಗಡೆ ಮಾಡಿದ್ದು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾಭಿಮಾನ ಮತ್ತು ಫೆಡರಲಿಸಂಗೆ ಒತ್ತು ನೀಡುವ ಮೂಲಕ ಡಿಎಂಕೆ ಪ್ರಣಾಳಿಕೆಗೆ ಸಾಮ್ಯತೆ ಇರುವ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಮಲಬಾರ್ ಪ್ರದೇಶವನ್ನು ದೀರ್ಘಕಾಲದಿಂದ ನಿರ್ಲಕ್ಷಿಸಲಾಗಿದೆ ಎಂದು ಪ್ರಣಾಳಿಕೆಯಲ್ಲಿ ಒತ್ತಿ ಹೇಳಿರುವ ಅನ್ವರ್ ಅವರು, ಕೇರಳದ 14 ಜಿಲ್ಲೆಗಳ ಜೊತೆಗೆ ಹೊಸ ಜಿಲ್ಲೆಯ ರಚನೆ, ಜಾತಿ ಜನ ಗಣತಿ ನಡೆಸುವುದು, ವಲಸೆ ನಿವಾಸಿಗಳಿಗೆ ಮತದಾನದ ಹಕ್ಕು ನೀಡುವುದು, ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ, ಶಾಲಾ ಅವಧಿ ಕಡಿತಗೊಳಿಸುವುದು, ಕೃಷಿ ಬಜೆಟ್, ಕೃಷಿ ಪ್ರವಾಸೋದ್ಯಮ ಸೇರಿದಂತೆ ಹಲವು ವಿಷಯಗಳ ಭರವಸೆ ನೀಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮತ್ತು ಒನ್ ನೇಷನ್ ಒನ್ ಎಲೆಕ್ಷನ್‌ನಂತಹ ಫೆಡರಲಿಸಂ ಅನ್ನು ನಾಶಪಡಿಸುವ ಕೇಂದ್ರ ಸರ್ಕಾರದ ನೀತಿಗಳನ್ನು ಅವರು ವಿರೋಧಿಸಿದ್ದಾರೆ.

ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳನ್ನು ವಿಭಜಿಸಿ 15ನೇ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಅನ್ವರ್ ಮುಂದಿಟ್ಟಿದ್ದಾರೆ. ಕೇರಳ ಡೆಮಾಕ್ರಟಿಕ್ ಮೂವ್‌ಮೆಂಟ್ (ಡಿಎಂಕೆ) ರಾಜಕೀಯ ಪಕ್ಷ ಅಲ್ಲ ಎಂದಿದ್ದಾರೆ. ಆದರೆ, ಅನ್ವರ್ ಅವರು ಡಿಎಂಕೆ ಮತ್ತು ಎಂ.ಕೆ ಸ್ಟಾಲಿನ್ ಅವರನ್ನು ಹೊಗಳುವುದು ನೋಡಿದ್ರೆ, ತಮಿಳುನಾಡಿನ ಡಿಎಂಕೆಯನ್ನು ಕೇರಳಕ್ಕೆ ವಿಸ್ತರಿಸಿರುವ ಎಲ್ಲಾ ಲಕ್ಷಣ ಕಾಣುತ್ತಿದೆ.

ಇದನ್ನೂ ಓದಿ : ಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...