HomeUncategorizedಕೇರಳದಲ್ಲಿ 300 ಹೊಸ ಕೋವಿಡ್ ಪ್ರಕರಣ ಪತ್ತೆ: ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಕೇರಳದಲ್ಲಿ 300 ಹೊಸ ಕೋವಿಡ್ ಪ್ರಕರಣ ಪತ್ತೆ: ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಹೊಸ್ತಿಲಲ್ಲಿ ಭಾರತದಲ್ಲಿ ಕೋವಿಡ್ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏಕಾಏಕಿ ಹೆಚ್ಚಳವಾಗಿದೆ.

ಇಂದು (ಡಿ.21) ಕೇರಳದಲ್ಲಿ 300 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟನೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ (ಇಂದು ಬೆಳಿಗ್ಗೆ 8 ಗಂಟೆಯವರೆಗೆ) ಇಡೀ ದೇಶದಲ್ಲಿ ಒಟ್ಟು 341 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 300 ಪ್ರಕರಣಗಳು ಕೇರಳದಲ್ಲಿ ವರದಿಯಾಗಿವೆ. ಮೂವರು ಮೃತಪಟ್ಟಿದ್ದಾರೆ.

ದೇಶದಲ್ಲಿ ಇಂದು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ. ಈ ಪೈಕಿ ಕೇರಳದಲ್ಲಿ 2,341 ಪ್ರಕರಣಗಳಿವೆ. ಮೂವರು ಹೊಸ ಕೋವಿಡ್ ಉಪತಳಿ ಜೆಎನ್ 1ನಿಂದ ಮೃತಪಟ್ಟಿದ್ದಾರೆಯೇ ಎಂದು ತಿಳಿಯಲು ಅವರ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿದೆ.

ಮೂರು ರಾಜ್ಯಗಳಲ್ಲಿ ಕೋವಿಡ್ ಹೊಸ ತಳಿ ಪತ್ತೆ:

ಡಿ.20ರವರೆಗೆ ಕೋವಿಡ್-19ರ ಹೊಸ ಉಪತಳಿ ಜೆಎನ್‌ 1ರ 21 ಪ್ರಕರಣಗಳು ಮೂರು ರಾಜ್ಯಗಳಲ್ಲಿ ಪತ್ತೆಯಾಗಿವೆ. ಗೋವಾದಲ್ಲಿ 19, ಮಹಾರಾಷ್ಟ್ರ ಮತ್ತು ಕೇರಳಲ್ಲಿ ತಲಾ ಒಂದು ಹೊಸ ತಳಿ ಪ್ರಕರಣಗಳು ವರದಿಯಾಗಿವೆ.

ಮುನ್ನೆಚ್ಚರಿಕೆ ಅಗತ್ಯ, ಭಯ ಬೇಡ : ಮನ್ಸುಖ್ ಮಾಂಡವೀಯ

ದೇಶದಾದ್ಯಂತ ಕೋವಿಡ್ ಉಲ್ಬಣ ಹಿನ್ನೆಲೆ ಬುಧವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ವಿವಿಧ ರಾಜ್ಯಗಳ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು, ದೇಶದಾದ್ಯಂತ ಆರೋಗ್ಯ ಕೇಂದ್ರಗಳ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ. “ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ, ಭಯಪಡಬೇಡಿ” ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ದರು.

ಸಭೆ ಕರೆದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು(ಡಿ.21) ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಭಾಗಿಯಾಗಲಿದ್ದಾರೆ. ಇಂದಿನ ಸಭೆಯಲ್ಲಿ ನಿನ್ನೆಯ ಕೇಂದ್ರ ಆರೋಗ್ಯ ಸಚಿವರ ಜೊತೆಗಿನ ಸಭೆಯ ಮಾಹಿತಿ ಸಚಿವ ದಿನೇಶ್ ಗುಂಡೂರಾವ್ ಸಿಎಂಗೆ ನೀಡಲಿದ್ದಾರೆ.

ರಾಜ್ಯದಲ್ಲಿ ಒಂದು ಸಾವು

ರಾಜ್ಯದಲ್ಲಿ ಇಂದು 13 ಸಕ್ರಿಯ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ನಿನ್ನೆ (ಡಿ.19) 44 ಮಂದಿಯನ್ನು ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗಿತ್ತು. ಬೆಂಗಳೂರಿನ ಚಾಮರಾಜಪೇಟೆಯ ನಿವಾಸಿಯೊಬ್ಬರು ಕೊರೊನಾದಿಂದ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಕೇರಳದಲ್ಲಿ ಹೊಸ ಕೋವಿಡ್ ಉಪ ತಳಿಯ ಒಂದು ಪ್ರಕರಣ ಪತ್ತೆಯಾದ ಬೆನ್ನಲ್ಲೇ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡಿ.17ರಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್‌ ಕಡ್ಡಾಯ

ಡಿಸೆಂಬರ್ 18ರಂದು ಕೊಡಗಿನ ಕುಶಾಲನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ದಿನೇಶ್ ಗುಂಡೂರಾವ್, ಕರ್ನಾಟಕದಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸೂರಜ್‌ ರೇವಣ್ಣ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...