Homeಮುಖಪುಟಪಡಿತರ ಅಂಗಡಿಗಳಲ್ಲಿ 'ಮೋದಿ ಸೆಲ್ಫಿ ಪಾಯಿಂಟ್', 'ಫ್ಲೆಕ್ಸ್‌'ಗಳನ್ನು ಹಾಕುವಂತೆ ಸೂಚನೆ: ತಿರಸ್ಕರಿಸಿದ ಕೇರಳ

ಪಡಿತರ ಅಂಗಡಿಗಳಲ್ಲಿ ‘ಮೋದಿ ಸೆಲ್ಫಿ ಪಾಯಿಂಟ್’, ‘ಫ್ಲೆಕ್ಸ್‌’ಗಳನ್ನು ಹಾಕುವಂತೆ ಸೂಚನೆ: ತಿರಸ್ಕರಿಸಿದ ಕೇರಳ

- Advertisement -
- Advertisement -

ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು, ಫ್ಲೆಕ್ಸ್‌ಗಳನ್ನು ಮತ್ತು ಬೋರ್ಡ್‌ಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನವನ್ನು ನೀಡಿದ್ದು, ಇದನ್ನು ಕೇರಳ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಪಿಣರಾಯಿ ವಿಜಯನ್ ಅವರು ತಿರಸ್ಕರಿಸಿದ್ದಾರೆ.

ಈ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಕೇರಳ ಸಿಎಂ ಪಿಣರಾಯ್‌ ವಿಜಯನ್,  ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿದೆ. ಇದು ಸರಿಯಲ್ಲ ಮತ್ತು ಇದನ್ನು ಕೇರಳದಲ್ಲಿ ಜಾರಿಗೆ ತರುವುದು ಕಷ್ಟ ಎಂದು ನಾವು ಕೇಂದ್ರಕ್ಕೆ ತಿಳಿಸುತ್ತೇವೆ. ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತರಬಹುದೇ ಎಂದು ನಾವು ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ  ಸರಕಾರದ ಪಿಎಂ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿನ ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ದೇಶಿಸಲಾಗಿತ್ತು. ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಪಡಿತರ ಅಂಗಡಿಗಳು ಕೇರಳದಲ್ಲಿ ಬಹಳ ಹಿಂದಿನಿಂದಲೂ ಅಸ್ತಿತ್ವದಲ್ಲಿವೆ. ಆದರೆ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗ ಈ ನಿರ್ದೇಶನವನ್ನು ನೀಡಿದೆ, ಖಂಡಿತವಾಗಿಯೂ ಇದನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವ ಉದ್ದೇಶದಿಂದ ನೀಡಿರುವುದಾಗಿದೆ. ನಾವು ಈ ನಿರ್ದೇಶನವನ್ನು ಜಾರಿಗೊಳಿಸುವುದಿಲ್ಲ ಎಂದು ಪಿಣರಾಯ್‌ ವಿಜಯನ್ ಹೇಳಿದ್ದಾರೆ.

ಇದಕ್ಕೂ ಮುನ್ನ 10,000 ಪಡಿತರ ಅಂಗಡಿಗಳಲ್ಲಿ ಮೋದಿ ಇರುವ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿ ವರದಿ ಸಲ್ಲಿಸುವಂತೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು  ಕೇರಳದ ನಾಗರಿಕ ಮತ್ತು ಸರಬರಾಜು ಖಾತೆ ಸಚಿವ ಜಿ.ಆರ್‌ ಅನಿಲ್ ಸದನಕ್ಕೆ ತಿಳಿಸಿದ್ದಾರೆ. 550 ಪಡಿತರ ಅಂಗಡಿಗಳಲ್ಲಿ ಪ್ರಧಾನಿಯವರ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆಯೂ ನಿರ್ದೇಶನ ನೀಡಿದೆ ಇದಲ್ಲದೆ ಕೇಂದ್ರ ಸರ್ಕಾರದ ಬ್ರ್ಯಾಂಡಿಂಗ್ ಹೊಂದಿರುವ ಕ್ಯಾರಿ ಬ್ಯಾಗ್‌ಗಳನ್ನು ಸಹ ಗ್ರಾಹಕರಿಗೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರಚಾರದ ಭಾಗದಲ್ಲಿ ‘ಸೆಲ್ಫಿ ಪಾಯಿಂಟ್‌ಗಳು’ ದೊಡ್ಡ ಭಾಗವಾಗಿದೆ. ಅವುಗಳನ್ನು ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಲ್ಲಿ ಇರಿಸುವಂತೆ ಈ ಮೊದಲು ನಿರ್ದೇಶನವನ್ನು ನೀಡಲಾಗಿತ್ತು. ಇವೆಲ್ಲವನ್ನೂ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌ಗಳ ನಿರ್ಮಾಣಕ್ಕೆ ಆದೇಶ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕರ ವೆಚ್ಚದಲ್ಲಿ ಮೋದಿಯ ಪೋಟೋ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ ಎನ್ನವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿತ್ತು. ಮೋದಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನು ಓದಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...