Homeಮುಖಪುಟಕೇರಳ | ಆರೆಸ್ಸೆಸ್‌ ನಾಯಕರ ಭೇಟಿಯಾದ ಎಡಿಜಿಪಿ ಪದಚ್ಯುತಿಗೆ ಸಿಪಿಐ ಆಗ್ರಹ

ಕೇರಳ | ಆರೆಸ್ಸೆಸ್‌ ನಾಯಕರ ಭೇಟಿಯಾದ ಎಡಿಜಿಪಿ ಪದಚ್ಯುತಿಗೆ ಸಿಪಿಐ ಆಗ್ರಹ

- Advertisement -
- Advertisement -

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಉಸ್ತುವಾರಿ ವಹಿಸಿರುವ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದ ತನ್ನ ನಿಲುವನ್ನು ಕೇರಳದ ಆಡಳಿತರೂಢ ಎಲ್‌ಡಿಎಫ್‌ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಸಿಪಿಐ ಪುನರುಚ್ಚರಿಸಿದೆ. ಎಡಿಜಿಪಿ ಅಜಿತ್ ಅವರು ಆರೆಸ್ಸೆಸ್‌ ಜೊತೆಗೆ ಸಭೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದ ನಂತರ ಕೇರಳ ರಾಜಕೀಯದಲ್ಲಿ ಬಿರುಗಾಳಿ ಬೀಸಿದೆ. ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿರುವ ಅಧಿಕಾರಿ ಎಲ್‌ಡಿಎಫ್ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿಯುತ ಎಡಿಜಿಪಿಯಾಗಿ ಸೇವೆ ಸಲ್ಲಿಸಲು ಅನರ್ಹರು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಶನಿವಾರ ಕೊಟ್ಟಾಯಂನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಿಪಿಐ(ಎಂ) ನೇತೃತ್ವದ ಕೇರಳದ ಎಲ್‌ಡಿಎಫ್‌ ಸರ್ಕಾರದಲ್ಲಿ ಸಿಪಿಐ ಪ್ರಮುಖ ಪಕ್ಷವಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ ಬೆದರಿಕೆ

“ಎಡಿಜಿಪಿ ಅವರು ಆರ್‌ಎಸ್‌ಎಸ್ ನಾಯಕರನ್ನು ಒಂದಲ್ಲ, ಎರಡು ಬಾರಿ ಭೇಟಿ ಮಾಡಿದ್ದಾರೆ. ಈ ಸಭೆಗಳ ಉದ್ದೇಶವು ಅಸ್ಪಷ್ಟವಾಗಿದ್ದು, ನಿರ್ಲಕ್ಷಿಸಲಾಗುವುದಿಲ್ಲ. ಹೀಗಾಗಿ ಎಡಿಜಿಪಿಯನ್ನು ಬದಲಾಯಿಸಬೇಕು ಎಂಬ ಸಿಪಿಐ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಬಿನೊಯ್ ಹೇಳಿದ್ದಾರೆ.

ಮಲಪ್ಪುರಂನಲ್ಲಿ ಡಿವೈಎಫ್‌ಐ ಕಾರ್ಯಕರ್ತರು ನಡೆಸಿದ ಮೆರವಣಿಗೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ವೈಷಮ್ಯ ಹೊಂದಿರುವ ನಿಲಂಬೂರು ಶಾಸಕ ಪಿ ವಿ ಅನ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಗಿದ್ದ ಘೋಷಣೆಗಳನ್ನು ಅವರು ಖಂಡಿಸಿದ್ದಾರೆ.

“ಎಡಪಂಥೀಯರನ್ನು ವಿರೋಧಿಸುವವರ ಕೈಕಾಲುಗಳನ್ನು ಕತ್ತರಿಸುವುದು ಕಮ್ಯುನಿಸ್ಟ್ ತತ್ವಗಳಿಗೆ ಪೂರಕವಾಗಿಲ್ಲ. ವಿರೋಧವನ್ನು ವಿಚಾರಗಳಿಂದ ಎದುರಿಸಬೇಕು, ದೈಹಿಕ ಹಾನಿಯಿಂದಲ್ಲ. ಸಿಪಿಐ ಸಿದ್ದಾಂದ ಶಕ್ತಿಯನ್ನು ದೃಢವಾಗಿ ನಂಬುತ್ತದೆ” ಎಂದು ಬಿನೋಯ್ ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...