Homeಮುಖಪುಟ‘ಕೇರಳ ಸವಾರಿ’ - ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ...

‘ಕೇರಳ ಸವಾರಿ’ – ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ರಾಜ್ಯ ಸರ್ಕಾರದ ಒಡೆತನದ ದೇಶದ ಮೊದಲ ಆನ್‌ಲೈನ್ ಟ್ಯಾಕ್ಸಿ ಸೇವೆ ‘ಕೇರಳ ಸವಾರಿ’ಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಉದ್ಘಾಟಿಸಿದ್ದಾರೆ. ‘ಕೇರಳ ಸವಾರಿ’ ಪ್ರಯಾಣಿಕರಿಗೆ ನ್ಯಾಯಯುತ ಮತ್ತು ಯೋಗ್ಯ ಸೇವೆಯನ್ನು ಮತ್ತು ಆಟೋ ಟ್ಯಾಕ್ಸಿ ಕಾರ್ಮಿಕರಿಗೆ ನ್ಯಾಯಯುತ ಸಂಭಾವನೆಯನ್ನು ಖಾತ್ರಿಗೊಳಿಸುತ್ತದೆ ಎಂದು ಸರ್ಕಾರ ಹೇಳಿದೆ. ರಾಜ್ಯದ ಕಾರ್ಮಿಕ ಇಲಾಖೆಯ ನೇತೃತ್ವದಲ್ಲಿ ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯು ಈ ಸೇವೆಯನ್ನು ಪ್ರಾರಂಭಿಸಿದೆ. ಕೇರಳ ಸವಾರಿ ಸಾರ್ವಜನಿಕರಿಗೆ ಸರ್ಕಾರಿ ಅನುಮೋದಿತ ದರದಲ್ಲಿ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸುತ್ತದೆ ಸರ್ಕಾರ ಹೇಳಿದೆ.

ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಂತೆ ಕೇರಳ ಸವಾರಿ ದರಗಳಲ್ಲಿ ಯಾವುದೇ ಏರಿಳಿತ ಇರುವುದಿಲ್ಲ. ಇತರ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳು ಜನರು ಹೆಚ್ಚಾಗಿ ಓಡಾಡುವ (ಪೀಕ್ ಅವರ್‌ನಲ್ಲಿ) ಸಮಯದಲ್ಲಿ ಸೇವೆಗಳ ಶುಲ್ಕವನ್ನು ಒಂದೂವರೆ ಪಟ್ಟು ಹೆಚ್ಚಿಸುತ್ತವೆ. ಆದರೆ ಇದರಿಂದ ಪ್ರಯಾಣಿಕರಿಗಾಗಲಿ, ಡ್ರೈವರ್‌ಗಳಿಗೆ ಯಾವುದೆ ಪ್ರಯೋಜನವಾಗುವುದಿಲ್ಲ. ಕೇರಳ ಸವಾರಿಯು ಸರ್ಕಾರ ನಿಗದಿಪಡಿಸಿದ ದರಕ್ಕಿಂತ 8% ಸೇವಾ ಶುಲ್ಕವನ್ನು ಮಾತ್ರ ವಿಧಿಸುತ್ತದೆ. ಇತರೆ ಆನ್‌ಲೈನ್ ಟ್ಯಾಕ್ಸಿ ಕಂಪೆನಿಗಳ ಸೇವೆಗಳಲ್ಲಿ ಇದು 20%ದಿಂದ 30ರಷ್ಟಿರುತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಮತ್ತು ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಪ್ರಚಾರದ ಪ್ರೋತ್ಸಾಹಕ್ಕಾಗಿ ಸೇವಾ ಶುಲ್ಕವಾಗಿ ಸ್ವೀಕರಿಸಿದ ಮೊತ್ತವನ್ನು ಬಳಸಲು ನಿರ್ಧರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳ ಸವಾರಿಯು ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸುರಕ್ಷಿತ ಮತ್ತು ವಿಶ್ವಾಸಾರ್ಹ ಆನ್‌ಲೈನ್ ಸೇವೆಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಅಪ್ಲಿಕೇಶನ್ ವಿನ್ಯಾಸ ಮತ್ತು ಚಾಲಕ ನೋಂದಣಿಯಲ್ಲಿ ಈ ಪರಿಗಣನೆಗೆ ಪ್ರಾಮುಖ್ಯತೆ ನೀಡಲಾಗಿದೆ. ಯೋಜನೆಗೆ ಸೇರುವ ಚಾಲಕರಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಸೂಕ್ತ ತರಬೇತಿಯನ್ನೂ ನೀಡಲಾಗುತ್ತದೆ.

ಅಪ್ಲಿಕೇಶನ್‌ನಲ್ಲಿ ‘ಪ್ಯಾನಿಕ್ ಬಟನ್’ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಕಾರು ಅಪಘಾತದ ಸಂದರ್ಭದಲ್ಲಿ ಅಥವಾ ಯಾವುದೇ ಅಪಾಯದ ಸಂದರ್ಭದಲ್ಲಿ ಈ ಗುಂಡಿಯನ್ನು ಒತ್ತಬಹುದು. ಇದು ಸಂಪೂರ್ಣವಾಗಿ ಖಾಸಗಿಯಾಗಿ ಇರಲಿದ್ದು, ಚಾಲಕ ಪ್ಯಾನಿಕ್ ಬಟನ್ ಒತ್ತಿದರೆ ಪ್ರಯಾಣಿಕರಿಗೆ ತಿಳಿಯುವುದಿಲ್ಲ ಅಥವಾ ಪ್ರಯಾಣಿಕರು ಪ್ಯಾನಿಕ್ ಬಟನ್ ಒತ್ತಿದರೆ ಚಾಲಕನಿಗೆ ತಿಳಿಯುವುದಿಲ್ಲ. ಈ ಗುಂಡಿಯನ್ನು ಒತ್ತಿದಾಗ, ಪೊಲೀಸ್, ಅಗ್ನಿಶಾಮಕ ದಳ ಮತ್ತು ಮೋಟಾರು ವಾಹನ ಇಲಾಖೆಗಳನ್ನು ಆಯ್ಕೆ ಮಾಡಬಹುದಾಗಿದೆ. ಒಂದು ವೇಳೆ ಯಾವುದನ್ನೂ ಆಯ್ಕೆ ಮಾಡಲು ಸಾಧ್ಯವಾಗದಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿದ್ದರೆ, ಬಟನ್ ಒತ್ತಿದರೆ ನೇರವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಪರ್ಕ ಪಡೆಯುವಂತೆ ಅಪ್ಲಿಕೇಷನ್ ಅನ್ನು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಸಬ್ಸಿಡಿ ದರದಲ್ಲಿ ವಾಹನಗಳಿಗೂ ಜಿಪಿಎಸ್ ಅಳವಡಿಸಲು ನಿರ್ಧರಿಸಲಾಗಿದೆ. ಇದನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸೇವೆಗಾಗಿ 24 ಗಂಟೆಗಳ ಕಾಲ್ ಸೆಂಟರ್ ಸಿದ್ಧಪಡಿಸಲಾಗಿದ್ದು, ಮೋಟಾರು ಕಾರ್ಮಿಕರ ಕಲ್ಯಾಣ ಮಂಡಳಿಯ ಜಿಲ್ಲಾ ಕಚೇರಿಯಲ್ಲಿ ಅತ್ಯಾಧುನಿಕ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತಿದೆ.

ಕಾಲ್ ಸೆಂಟರ್ ಸೇವೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೊದಲ ಹಂತದ ಯೋಜನೆಯನ್ನು ತಿರುವನಂತಪುರಂ ನಗರದಲ್ಲಿ ಜಾರಿಗೊಳಿಸಲಾಗಿದೆ. ಮೊದಲ ಹಂತದ ಮೌಲ್ಯಮಾಪನದ ನಂತರ ಯೋಜನೆಯನ್ನು ಸಂಪೂರ್ಣ ರಾಜ್ಯದಲ್ಲಿ ದೋಷರಹಿತ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸರ್ಕಾರ ಹೇಳಿದೆ. ಮುಂದಿನ ಒಂದು ತಿಂಗಳೊಳಗೆ ಕೊಲ್ಲಂ, ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್ ಮತ್ತು ಕಣ್ಣೂರು ಪುರಸಭೆಯ ವ್ಯಾಪ್ತಿಯನ್ನು ತಲುಪಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...