Homeಮುಖಪುಟಕೇರಳ | ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿ; ಬಿಜೆಪಿ ಪರ ಸಂಘಟನೆ ವಿಎಚ್‌ಪಿ, ಭಜರಂಗದಳ ದುಷ್ಕರ್ಮಿಗಳ...

ಕೇರಳ | ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿ; ಬಿಜೆಪಿ ಪರ ಸಂಘಟನೆ ವಿಎಚ್‌ಪಿ, ಭಜರಂಗದಳ ದುಷ್ಕರ್ಮಿಗಳ ಬಂಧನ

- Advertisement -
- Advertisement -

ಕೇರಳದ ಪಾಲಕ್ಕಾಡ್‌ನ ನಲ್ಲೆಪಿಲ್ಲಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಲು ಯತ್ನಿಸಿದ ಬಿಜೆಪಿ ಪರ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಕೇರಳ

ಕ್ರಿಸ್‌ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ದುಷ್ಕರ್ಮಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವರದಿ ಹೇಳಿದೆ. ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೂವರು ದುಷ್ಕರ್ಮಿಗಳನ್ನು ನಲ್ಲೆಪಿಲ್ಲಿ ನಿವಾಸಿಗಳಾದ ವಡಕ್ಕುಂತಾರ ಕೆ ಅನಿಲ್‌ಕುಮಾರ್, ಮನಂಕುಜಿ ಸುಶಾಸನನ್ ಮತ್ತು ತೆಕ್ಕುಮುರಿ ವೇಲಾಯುಧನ್ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಪೊಲೀಸರು ಜಾಮೀನು ರಹಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಪಾಲಕ್ಕಾಡ್‌ನ ನಲ್ಲೆಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ದುಷ್ಕರ್ಮಿಗಳು ಶಾಲೆಯ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕ್ರಿಸ್‌ಮಸ್ ಕ್ಯಾರೋಲ್‌ಗಾಗಿ ಧರಿಸಿದ್ದ ಉಡುಪಿನ ಬಗ್ಗೆ ಕೂಡಾ ದುಷ್ಕರ್ಮಿಗಳು ಪ್ರಶ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಎದುರೇ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ದುಷ್ಕರ್ಮಿ ಕೆ. ಅನಿಲ್‌ಕುಮಾರ್‌ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದು, ವಿ.ಸುಶಾಸನನ್‌ ಭಜರಂಗದಳ ಜಿಲ್ಲಾ ಸಂಯೋಜಕನಾಗಿದ್ದಾನೆ. ಮತ್ತೊಬ್ಬ ದುಷ್ಕರ್ಮಿ ಕೆ.ವೇಲಾಯುಧನ್‌ ವಿಎಚ್‌ಪಿಯ ಪಂಚಾಯಿತಿ ಸಮಿತಿ ಅಧ್ಯಕ್ಷನಾಗಿದ್ದಾನೆ.

“ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಚಿತ್ತೂರು ಪೊಲೀಸ್ ಠಾಣೆಯ ಎಸ್‌ಎಚ್‌ಒ ಕೆ. ಮ್ಯಾಥ್ಯೂ ತಿಳಿಸಿದ್ದಾರೆ.

ಕೇರಳದಲ್ಲಿ ಕ್ರಿಶ್ಚಿಯನ್ ಸಮುದಾಯದ ಮತವನ್ನು ಗಳಿಸಲು ಬಿಜೆಪಿ ನಡೆಸುತ್ತಿರುವ ನಾನಾ ಕಸರತ್ತುಗಳ ನಡುವೆ ಈ ಘಟನೆ ನಡೆದಿದೆ. ಅದಾಗ್ಯೂ, ಘಟನೆ ಬಗ್ಗೆ ಮತ್ತು ತಮ್ಮ ಬೆಂಬಲಿಗ ಸಂಘಟನೆಗಳ ದುಷ್ಕರ್ಮಿಗಳ ಬಗ್ಗೆ ರಾಜ್ಯ ಬಿಜೆಪಿಯ ನಾಯಕತ್ವವು ಮೌನ ವಹಿಸಿದೆ.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...