Homeಮುಖಪುಟಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

- Advertisement -
- Advertisement -

ಕೇರಳದ ಆಲಪ್ಪುಳದ ಸಿಪಿಐ(ಎಂ) ನಾಯಕರೊಬ್ಬರು ಪಕ್ಷ ತೊರೆದು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ, ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮಂಗಳವಾರ ಪಕ್ಷ ತೊರೆಯಲಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪಕ್ಷದ ನಾಯಕ ಮಧು ಮುಲ್ಲಶ್ಶೇರಿ ಅವರು ತಾನು ಪಕ್ಷದಿಂದ ನಿರ್ಗಮಿಸುವುದಾಗಿ ಬೆಳಿಗ್ಗೆ ಘೋಷಿಸುತ್ತಿದ್ದಂತೆ, ಸಿಪಿಐ(ಎಂ) ಅವರನ್ನು ತನ್ನ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತುಹಾಕಿದೆ. ಕೇರಳ

ಪಕ್ಷದ ತತ್ವಗಳಿಗೆ ವ್ಯತಿರಿಕ್ತವಾಗಿ ವರ್ತಿಸಿ ಸಾರ್ವಜನಿಕ ವಲಯದಲ್ಲಿ ಮಾನಹಾನಿ ಮಾಡಿದ ಕಾರಣ ಅವರನ್ನು ತೆಗೆದುಹಾಕಲಾಗುತ್ತಿದೆ ಎಂದು ಸಿಪಿಐ(ಎಂ) ಹೇಳಿದೆ. ಸಿಪಿಐ(ಎಂ)ನ ಮಾಜಿ ಪ್ರದೇಶ ಕಾರ್ಯದರ್ಶಿಯಾಗಿರುವ ಮತ್ತು 42 ವರ್ಷಗಳಿಂದ ಪಕ್ಷದ ಸದಸ್ಯರಾಗಿರುವ ಮಧು ಅವರು, ತನ್ನ ನಿರ್ಗಮನಕ್ಕೆ ಸ್ಥಳೀಯ ಶಾಸಕ ಮತ್ತು ಜಿಲ್ಲಾ ಸಮಿತಿ ಕಾರ್ಯದರ್ಶಿ ಆಗಿರುವ ವಿ. ಜಾಯ್ ಅವರು ಕಾರಣ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಿಲ್ಲಾ ಕಾರ್ಯದರ್ಶಿ ವಿ.ಜಾಯ್ ಅವರೊಂದಿಗೆ ಕೆಲಸ ಮಾಡುವುದು ಕಷ್ಟಕರವಾದ ಕಾರಣ ನಾನು 42 ವರ್ಷಗಳಿಂದ ಕೆಲಸ ಮಾಡಿದ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯ ರಾಜ್ಯ ನಾಯಕತ್ವ ನನ್ನನ್ನು ಸಂಪರ್ಕಿಸಿದ್ದು, ಯಾವ ಪಕ್ಷಕ್ಕೆ ಸೇರುತ್ತೇನೆ ಎಂಬ ನಿರ್ಧಾರವನ್ನು ಬೆಳಗ್ಗೆ 11 ಗಂಟೆಗೆ ಪ್ರಕಟಿಸುವುದಾಗಿ ಮಧು ಮುಲ್ಲಸ್ಸೆರಿ ಟಿವಿ ಚಾನೆಲ್‌ಗೆ ತಿಳಿಸಿದ್ದಾರೆ. ಕೇರಳ

ಬಿಜೆಪಿಯ ತಿರುವನಂತಪುರಂ ಜಿಲ್ಲಾಧ್ಯಕ್ಷ ವಿ.ವಿ. ರಾಜೇಶ್ ಮತ್ತು ಪಕ್ಷದ ಇತರ ಮುಖಂಡರು ಮಧು ಅವರನ್ನು ಅವರ ನಿವಾಸದಲ್ಲಿ ಬೆಳಗ್ಗೆ ಭೇಟಿ ಮಾಡಿದ್ದಾಗಿ ವರದಿಯಾಗಿದೆ. ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಾಯ್ ಅವರು, ತಮ್ಮ ಹಿತಾಸಕ್ತಿ ಮತ್ತು ಪಕ್ಷದೊಳಗಿನ ಸ್ಥಾನಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಮತ್ತು ಸಿಪಿಐ(ಎಂ)ನ ಜಿಲ್ಲಾ ಸಮಿತಿಯಲ್ಲಿ ಒಡಕು ಮೂಡಿಸುತ್ತಿದ್ದಾರೆ ಎಂದು ಮಧು ಆರೋಪಿಸಿದ್ದಾರೆ. ಜೊತೆಗೆ, ಅವರು ತನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ನವೆಂಬರ್ 30 ರಂದು, ಸಿಪಿಐ(ಎಂ) ಆಲಪ್ಪುಳ ಪ್ರದೇಶ ಸಮಿತಿಯ ಸದಸ್ಯ ಮತ್ತು ಕೃಷ್ಣಾಪುರಂ ವಿಭಾಗವನ್ನು ಪ್ರತಿನಿಧಿಸುವ ಜಿಲ್ಲಾ ಪಂಚಾಯತ್ ಸದಸ್ಯ ಬಿಪಿನ್ ಸಿ ಬಾಬು ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿ ಸೇರಿದ ನಂತರ ಸಿಪಿಐ(ಎಂ) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಪಿನ್, ಪಕ್ಷವು ತನ್ನ ಜಾತ್ಯತೀತ ಗುಣವನ್ನು ಕಳೆದುಕೊಂಡಿದೆ ಎಂದು ಹೇಳಿದ್ದರು. “ಕೆಲವು ಕೋಮುವಾದಿ ಶಕ್ತಿಗಳು ಈಗ ಪಕ್ಷವನ್ನು ಮುನ್ನಡೆಸುತ್ತಿದ್ದು, ಪಕ್ಷವು ಈಗ ನಿರ್ದಿಷ್ಟ ವರ್ಗದ ಮುಖವಾಗಿದೆ” ಎಂದು ಅವರು ಹೇಳಿದ್ದರು.

ಹಿರಿಯ ಸಿಪಿಐ(ಎಂ) ನಾಯಕ ಜಿ. ಸುಧಾಕರನ್ ಅವರನ್ನು ಬದಿಗಿರಿಸಿರುವುದು ಪಕ್ಷದೊಳಗೆ ಟೀಕೆಗೆ ಗುರಿಯಾಗಿದೆ. ಜೊತೆಗೆ, ಕೊಲ್ಲಂ ಜಿಲ್ಲೆಯ ಕರುನಾಗಪಲ್ಲಿಯಂತಹ ಕೆಲವು ಸ್ಥಳಗಳಲ್ಲಿ ಪಕ್ಷದ ಸ್ಥಳೀಯ ಮತ್ತು ಪ್ರದೇಶ ಸಮ್ಮೇಳನಗಳಲ್ಲಿ ಬಹಿರಂಗ ಪ್ರತಿಭಟನೆಗಳು ನಡೆದಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...