HomeಮುಖಪುಟKERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

- Advertisement -
- Advertisement -

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ ವ್ಯಕ್ತಿ ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ನೀಡುವ ಮೂಲಕ ಪೌರತ್ವ ಸಾಬೀತುಪಡಿಸಿದ್ದಾರೆ.

ದಿ ನ್ಯೂಸ್ ಮಿನಿಟ್ ವರದಿಯ ಪ್ರಕಾರ, ಉಪ್ಪಳದ ಕೆ. ಮುಹಮ್ಮದ್ ಅವರಿಗೆ ಫೆಬ್ರವರಿ 12ರಂದು ಇಆರ್‌ಒನಿಂದ ನೋಟಿಸ್ ಬಂದಿತ್ತು. ಫೆಬ್ರವರಿ 13ರಂದು ಮಂಜೇಶ್ವರ ತಾಲೂಕು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ನೋಟಿಸ್ ಪಡೆದ ಮುಹಮ್ಮದ್ ಆರಂಭದಲ್ಲಿ ಗೊಂದಲಕ್ಕೆ ಒಳಗಾಗಿದ್ದರು. ನಂತರ, ತಾನು ‘ಭಾರತೀಯ ಅಲ್ಲ ಪೌರ ಅಲ್ಲ’ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ, ಪೌರತ್ವ ಸಾಬೀತುಪಡಿಸಬೇಕಿದೆ ಎಂಬುವುದು ಅವರಿಗೆ ಗೊತ್ತಾಗಿದೆ.

“ನೋಟಿಸ್ ಪಡೆದ ನಾನು ಆತಂಕಕ್ಕೆ ಒಳಗಾದೆ. ಏಕೆಂದರೆ, ನಾನು ಹುಟ್ಟಿದ್ದು, ಬೆಳೆದಿದ್ದು, ವಿದ್ಯಾಭ್ಯಾಸ ಪಡೆದಿದ್ದು ಎಲ್ಲಾ ಇಲ್ಲೆ. ನನ್ನ ಮನೆ ಕೂಡ ಇಲ್ಲೇ ಇದೆ. ಹಠಾತ್ ಆಗಿ ಯಾರೋ ಒಬ್ಬರು ನಾನು ಭಾರತೀಯ ನಾಗರಿಕ ಅಲ್ಲ ಎಂದು ಹೇಳಿದಾಗ ನಿಜವಾಗಿಯೂ ಭಯಭೀತನಾದೆ” ಎಂದು ಮುಹಮ್ಮದ್ ನೆನಪಿಸಿಕೊಂಡಿದ್ದಾಗಿ ನ್ಯೂಸ್ ಮಿನಿಟ್ ವರದಿ ವಿವರಿಸಿದೆ.

ಮುಹಮ್ಮದ್ ಅವರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಮತದಾರ. 2016 ಮತ್ತು 2021ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅತ್ಯಂತ ಕಡಿಮೆ ಅಂತರದಿಂದ ಸೋತ ಕ್ಷೇತ್ರ ಇದು.

ಫಾರ್ಮ್ 7ರ ಮೂಲಕ ಮುಹಮ್ಮದ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಲೋಕೇಶ್ ನೋಂಡಾ, ಅವರು ‘ಭಾರತೀಯ ಪೌರತ್ವವನ್ನು ಹೊಂದಿಲ್ಲ’ ಎಂಬ ಕಾರಣ ನೀಡಿ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕುವಂತೆ ಕೋರಿದ್ದರು ಎನ್ನಲಾಗಿದೆ.

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಸೇರ್ಪಡೆಯನ್ನು ಪ್ರಶ್ನಿಸಲು ಅಥವಾ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಹೆಸರನ್ನು ತೆಗೆದುಹಾಕಲು ವಿನಂತಿಸಲು ಬಳಸುವ ನಿರ್ದಿಷ್ಟ ಶಾಸನಬದ್ಧ ಅರ್ಜಿಯಾಗಿದೆ ಫಾರ್ಮ್ 7. ಎರಡನೇ ಹಂತದಲ್ಲಿ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳಲ್ಲಿ ಎಸ್‌ಐಆರ್‌ ಅನ್ನು ಚುನಾವಣಾ ಆಯೋಗ ಘೋಷಿಸಿದೆ. ಆ 9 ರಾಜ್ಯಗಳಲ್ಲಿ ಕೇರಳವೂ ಒಂದು.

ನೋಟಿಸ್ ಬಂದ ಮರುದಿನ ಫೆಬ್ರವರಿ 13ರಂದು, ಮುಹಮ್ಮದ್ ಅವರು ಮಂಜೇಶ್ವರ ತಾಲೂಕು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅವರು ತಮ್ಮ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಹಾಜರುಪಡಿಸಿದ್ದರು.

ಸುಳ್ಳು ದೂರು

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 128ರ ಮತಗಟ್ಟೆಯ ಮತದಾರರಾದ ಮುಹಮ್ಮದ್ 1970ರಲ್ಲಿ ಜನಿಸಿದವರು. ಈಗ ಅವರಿಗೆ 55 ವರ್ಷ. ಸ್ಥಳೀಯ ಬೇಕೂರ್ ಶಾಲೆಯಲ್ಲಿ 10ನೇ ತರಗತಿಯವರೆಗೆ ಅಧ್ಯಯನ ಮಾಡಿರುವ ಮುಹಮ್ಮದ್, ನಂತರ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ.

ನ್ಯೂಸ್ ಮಿನಿಟ್ ವರದಿಯ ಪ್ರಕಾರ, ವಿಚಾರಣೆಯ ನಂತರ ಮುಹಮ್ಮದ್ ಅವರ ವಿರುದ್ದದ ದೂರು ಆಧಾರರಹಿತ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಐಎಎಸ್ ಅವರ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ದೂರುದಾರರು ವಿಚಾರಣೆಗೆ ಹಾಜರಾಗಿದ್ದರು, ಆದರೆ ಆರೋಪವನ್ನು ದೃಢೀಕರಿಸಲು ಯಾವುದೇ ದಾಖಲೆ ಪುರಾವೆಗಳನ್ನು ನೀಡುವಲ್ಲಿ ಅವರು ವಿಫಲರಾಗಿದ್ದಾರೆ.

ದಾಖಲೆ ಪರಿಶೀಲನೆ ಮತ್ತು ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ಮುಹಮ್ಮದ್ ಅವರ ವಿರುದ್ಧದ ದೂರು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದು ಕಂಡುಬಂದಿದೆ. ಅದರಂತೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಮುಂದುವರಿಯಬೇಕೆಂದು ಇಆರ್‌ಒ ಆದೇಶಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಅಲ್ಲದೆ, ಸುಳ್ಳು ದೂರು ನೀಡಿದ ಲೋಕೇಶ್ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸಹ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ನ್ಯೂಸ್‌ ಮಿನಿಟ್ ದೂರುದಾರ ಲೋಕೇಶ್ ನೋಂಡಾನನ್ನು ಮಾತನಾಡಿಸಿದೆ. ಆತ ತಾನು ಮುಹಮ್ಮದ್ ವಿರುದ್ದ ದೂರು ನೀಡಿದ್ದು ಹೌದು, ಆದರೆ ಅವರು ಭಾರತೀಯ ಪ್ರಜೆಯಲ್ಲ ಎಂದು ನಾನು ಹೇಳಿಲ್ಲ. ಅವರನ್ನು ತುಂಬಾ ದಿನಗಳಿಂದ ನೋಡಿಲ್ಲದ ಕಾರಣ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದೆ. ನನ್ನಲ್ಲಿ ದೂರಿನ ಪ್ರತಿ ಇದೆ. ನಾನು ದೂರಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು ಮತ್ತು ಪುರಾವೆಗಳನ್ನು ಹೊಂದಿದ್ದೇನೆ. ತನಿಖೆ ಮುಂದುವರಿದಂತೆ ಅವುಗಳನ್ನು ಅಧಿಕಾರಿಗಳಿಗೆ ನೀಡುವುದಾಗಿ ಹೇಳಿದ್ದಾರೆ.

“ಲೋಕೇಶ್ ನೋಂಡಾ ನನ್ನದೇ ಊರಿನವನು. ಹಾಗಾಗಿ, ಆತನನ್ನು ನನಗೆ ಪರಿಚಯವಿದೆ. ತಾಲೂಕು ಕಚೇರಿಯಲ್ಲಿ ನೋಡಿದಾಗಲೇ, ನನ್ನ ವಿರುದ್ದಆತನೇ ದೂರು ಕೊಟ್ಟಿರುವುದು ಎಂದು ನನಗೆ ಗೊತ್ತಾಗಿದ್ದು. ಈಗ ನಾನು ಕೆಲಸ ಹೋದಾಗಲೆಲ್ಲ, “ನಿಮ್ಮನ್ನು ವಿಚಾರಣೆಗೆ ಕರೆದಿದ್ದು ಏಕೆ..ನಿಮ್ಮ ಬಳಿ ದಾಖಲೆಗಳು ಇಲ್ವಾ ಎಂದು ಜನರು ಕೇಳುತ್ತಾರೆ. ನನ್ನ ಬಳಿ ಎಲ್ಲಾ ದಾಖಲೆಗಳು ಇವೆ” ಎಂಬುವುದಾಗಿ ಮುಹಮ್ಮದ್ ತಿಳಿಸಿದ್ದಾರೆ.

ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂಬ ಆರು ಸುಳ್ಳು ದೂರುಗಳು

ಮುಹಮ್ಮದ್ ಮಾತ್ರವಲ್ಲದೆ ಇನ್ನೂ 6 ಮಂದಿ ಮುಸ್ಲಿಂ ಮಹಿಳೆಯರ ವಿರುದ್ದ ‘ಗೈರು ಹಾಜರಿ’ ಅಥವಾ ‘ಶಾಶ್ವತವಾಗಿ ಸ್ಥಳಾಂತರ’ ಎಂಬ ದೂರುಗಳನ್ನು ಇದೇ ಲೋಕೇಶ್ ನೋಂಡಾ ದಾಖಲಿಸಿದ್ದಾರೆ. ನೋಟಿಸ್ ಪಡೆದ ಅಸ್ಮಾ (64), ಸಫಿಯಾ (51), ನಬೀಸಾ (75), ಮೌಝಿಯತ್ ಸುನೈಫಾ ಎ (25), ಕುಬ್ರಾ (35), ಮತ್ತು ಝುಬೈದಾ (55) ನೋಟಿಸ್ ಪಡೆದವರು. ಇವರಲ್ಲಿ ಸಫಿಯಾ, ಝುಬೈದಾ ಮತ್ತು ಕುಬ್ರಾ ವಿವಾಹವಾಗಿ ಬೇರೆ ಊರುಗಳಿಂದ ಗಂಡನ ಮನೆಗೆ ಬಂದವರು. ಆದರೆ, ಒಂದು ದಶಕಕ್ಕೂ ಹೆಚ್ಚು ಸಮಯದಿಂದ ಇವರು ಬೂತ್ ಸಂಖ್ಯೆ 128ರ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಉಳಿದ ಮೂವರು ಇಲ್ಲೇ ಹುಟ್ಟಿ ಬೆಳೆದವರು ಎಂದು ನ್ಯೂಸ್ ಮಿನಿಟ್ ವರದಿ ಉಲ್ಲೇಖಿಸಿದೆ.

ಪೈವಳಿಕೆ ಪಂಚಾಯತ್‌ನ ಮಾಜಿ ಸದಸ್ಯ ಹಾಗೂ ಅಸ್ಮಾ ಅವರ ಮಗ ಝುಲ್ಫಿಕರ್ ಅಲೀ ಮಾತನಾಡಿ, “ದೂರುದಾರ ಲೋಕೇಶ್‌ ನೋಂಡಾಗೆ ಈ ಏಳು ಜನರ ಪೈಕಿ ಹೆಚ್ಚಿನವರ ಪರಿಚಯ ಇದೆ. ಆತ ನನ್ನ ಮನೆ ಸಮೀಪದ ನಿವಾಸಿ. ಆತ ನನ್ನ ತಾಯಿಯನ್ನು ನೋಡಿದ್ದಾರೆ. ನಾವು ಇಆರ್‌ಒ ಬಳಿಗೆ ಹೋದಾಗ ನೋಂಡಾ ಅಲ್ಲಿ ಇರಲಿಲ್ಲ” ಎಂದು ಹೇಳಿದ್ದಾರೆ.

ಇಆರ್‌ಒ ಪ್ರಕಾರ, ಲೋಕೇಶ್ ಈ ಹಿಂದೆ 91 ಜನರ ವಿರುದ್ಧ ಲಿಖಿತ ದೂರುಗಳನ್ನು ದಾಖಲಿಸಿದ್ದರು ಎಂದು ಝುಲ್ಫಿಕರ್ ಹೇಳಿದ್ದಾರೆ. ಇಆರ್‌ಒ ಆನ್‌ಲೈನ್‌ನಲ್ಲಿ ಸಲ್ಲಿಸಲು ಕೇಳಿದಾಗ, ಆತ ಕೇವಲ ಏಳು ದೂರುಗಳನ್ನು ಮಾತ್ರ ಸಲ್ಲಿಸಿದ್ದಾರೆ ಎಂದಿದ್ದಾರೆ. ಲೋಕೇಶ್ ಈ ಆರೋಪಗಳನ್ನು ನಿರಾಕರಿಸಿದ್ದು, ನಾನು ಕೇವಲ 71 ಆಫ್‌ಲೈನ್ ದೂರುಗಳನ್ನು ಮಾತ್ರ ಸಲ್ಲಿಸಿದ್ದೇನೆ. ಆನ್‌ಲೈನ್‌ನಲ್ಲಿ ಏನನ್ನೂ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಈ ಬೆಳವಣಿಗೆಯ ನಂತರ ನೋಟಿಸ್ ಬಂದ ವ್ಯಕ್ತಿಗಳು ಲೋಕೇಶ್ ನೋಂಡಾ ವಿರುದ್ದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು, ಜಿಲ್ಲಾಧಿಕಾರಿ ಆತನ ಮೇಲೆ ಎಫ್‌ಐಆರ್ ದಾಖಲಿಸುವುದಾಗಿ ಫೆ.15ರಂದು ತಿಳಿಸಿದ್ದಾರೆ.

ಲೋಕೇಶ್ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿರುವುದರಿಂದ, ಇದನ್ನು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತಿದೆ ಎಂದು ನ್ಯೂಸ್ ಮಿನಿಟ್ ವರದಿ ಉಲ್ಲೇಖಿಸಿದೆ.

ಬಿಜೆಪಿ ಮತ್ತು ಮಂಜೇಶ್ವರ

ಕೇರಳದ ಯುನೈಟೆಡ್‌ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಭಾಗವಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್‌ (ಐಯುಎಂಎಲ್‌) ಪಕ್ಷದ ನಾಯಕ ಹಾಗೂ ಮಂಜೇಶ್ವರದ ಶಾಸಕ ಎಕೆಎಂ ಅಶ್ರಫ್ ಅವರು ನೋಟಿಸ್ ಬಂದವರ ವಿಚಾರಣೆಯ ದಿನದಂದು ತಾಲೂಕು ಕಚೇರಿಗೆ ಭೇಟಿ ನೀಡಿದ್ದರು. ಅಧಿಕಾರಿಗಳು ಮತ್ತು ಬಿಜೆಪಿ ನಡುವಿನ ಸಂಬಂಧ ಮತದಾರರಿಗೆ ನೋಟಿಸ್ ಬರಲು ಕಾರಣ ಎಂದು ಅವರು ಆರೋಪಿಸಿದ್ದಾರೆ.

“ವೃದ್ಧರನ್ನು ವಿಚಾರಣೆಗೆ ಕರೆಯುವುದು ಮತ್ತು ಅವರಿಗೆ ಅನಾನುಕೂಲತೆಯನ್ನುಂಟುಮಾಡುವುದು ಬಿಜೆಪಿಯೊಂದಿಗಿನ ಅವರ (ಅಧಿಕಾರಿಗಳ) ಸಂಬಂಧದ ಭಾಗವಾಗಿದೆ. ಇದರ ವಿರುದ್ಧ ನಾವು ಬಲವಾದ ಹೋರಾಟವನ್ನು ಪ್ರಾರಂಭಿಸುತ್ತೇವೆ” ಎಂದು ಅಶ್ರಫ್ ಹೇಳಿದ್ದಾರೆ.

ಮಂಜೇಶ್ವರ ಕೇರಳದಲ್ಲಿ ಬಿಜೆಪಿಗೆ ‘ಎ-ಕ್ಲಾಸ್’ ಕ್ಷೇತ್ರವೆಂದು ಪರಿಗಣಿಸಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 2021 ಮತ್ತು 2016ರ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು 2019 ರ ಉಪಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಎರಡನೇ ಸ್ಥಾನ ಗಳಿಸಿತ್ತು.

2021ರಲ್ಲಿ, ಅಶ್ರಫ್ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ವಿರುದ್ಧ 745 ಮತಗಳ ಅಲ್ಪ ಅಂತರದಿಂದ ಗೆದ್ದರು. 2016ರಲ್ಲಿ, ಸುರೇಂದ್ರನ್ ಯುಡಿಎಫ್‌ನ ಪಿ.ಬಿ. ಅಬ್ದುಲ್ ರಝಾಕ್ ವಿರುದ್ಧ ಕೇವಲ 89 ಮತಗಳಿಂದ ಸೋತಿದ್ದರು.

‍Courtesy : thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...