Homeಮುಖಪುಟಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

- Advertisement -
- Advertisement -

2020ರಲ್ಲಿ ಬಿಡುಗಡೆಯಾದ ಮಲಯಾಳಂ ಸಿನಿಮಾಗಳಿಗೆ ಸಂಬಂಧಿಸಿದಂತೆ 51ನೇ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜಿಯೋ ಬೇಬಿ ಅವರು ನಿರ್ದೇಶಿಸಿರುವ ‘ದಿ ಗ್ರೇಟ್ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಆಯ್ಕೆಯಾಗಿದೆ.

‘ದಿ ಗ್ರೇಟ್‌ ಇಂಡಿಯನ್‌ ಕಿಚನ್‌’ ಸಿನಿಮಾವು ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾಗಿತ್ತು. ಮಹಿಳಾ ಸ್ವಾವಲಂಬನೆ, ಮಹಿಳಾ ಸ್ವತಂತ್ರಕ್ಕೆ ಅಡುಗೆ ಮನೆಯೇ ಅತಿದೊಡ್ಡ ಸಂಕೋಲೆಯಾಗಿರುವುದನ್ನು ಈ ಸಿನಿಮಾದಲ್ಲಿ ಕಟ್ಟಿಕೊಡಲಾಗಿತ್ತು. ದೃಶ್ಯಗಳೇ ಮಾತನಾಡುವಂತೆ ಚಿತ್ರಕತೆಯನ್ನು ಜಿಯೋ ಬೇಬಿ ಎಣೆದಿದ್ದು, ಚಿತ್ರಕತೆ ಪ್ರಶಸ್ತಿಗೆ ಅವರು ಆಯ್ಕೆಯಾಗಿದ್ದಾರೆ.

‘ವೆಲ್ಲಮ್‌’ ಚಿತ್ರದ ನಟನೆಗಾಗಿ ಜಯಸೂರ್ಯ ಅತ್ಯುತ್ತಮ ನಟ, ‘ಕಪ್ಪೆಲ’ ಸಿನಿಮಾ ನಟನೆಗಾಗಿ ಅನ್ನಾ ಬೆನ್‌ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಯಸೂರ್ಯ
ಅನ್ನ ಬೆನ್‌

‘ಅಯ್ಯಪ್ಪನ್ನುಮುಂ ಕೋಶಿಯುಂ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಆಯ್ಕೆಯಾಗಿದೆ. ಈ ಸಿನಿಮಾದ ನಿರ್ದೇಶಕ ಸಚ್ಚಿ (ಸಚ್ಚಿದಾನಂದ) 2020ರ ಜೂನ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಖ್ಯಾತ ನಟಿ ಸುಹಾಸಿನಿ ಮಣಿರತ್ನಂ ಅಧ್ಯಕ್ಷತೆಯಲ್ಲಿ ರೂಪಿಸಿದ್ದ ಪ್ರಶಸ್ತಿ ಸಮಿತಿಯಲ್ಲಿ ಕನ್ನಡ ಚಿತ್ರನಿರ್ದೇಶಕ ಪಿ.ಶೇಷಾದ್ರಿ ಅವರೂ ಇದ್ದರು. ಒಟ್ಟು ಎಂಬತ್ತು ಸಿನಿಮಾಗಳು ಪ್ರಶಸ್ತಿ ಸುತ್ತಿನಲ್ಲಿದ್ದವು.

ಪ್ರಶಸ್ತಿ ಪಟ್ಟಿ

ಅತ್ಯುತ್ತಮ ನಟ : ಜಯಸೂರ್ಯ (ವೆಲ್ಲಮ್‌), ಅತ್ಯುತ್ತಮ ನಟಿ : ಅನ್ನಾ ಬೆನ್‌ (ಕಪ್ಪೆಲ), ಅತ್ಯುತ್ತಮ ಸಿನಿಮಾ: ದಿ ಗ್ರೇಟ್‌ ಇಂಡಿಯನ್ ಕಿಚನ್‌ (ನಿರ್ದೇಶನ – ಜಿಯೋ ಬೇಬಿ), ಅತ್ಯುತ್ತಮ ಮನರಂಜನಾತ್ಮಕ ಸಿನಿಮಾ: ಅಯ್ಯಪ್ಪನುಮ್‌ ಕೋಶಿಯುಂ (ನಿರ್ದೇಶನ : ಸಚಿ), ಅತ್ಯುತ್ತಮ ನಿರ್ದೇಶಕ: ಸಿದ್ಧಾರ್ಥ ಶಿವ (ಎನ್ನಿವರ್‌), ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮೊಹಮ್ಮದ್ ಮುಸ್ತಾಫಾ (ಕಪ್ಪೆಲಾ), ಅತ್ಯುತ್ತಮ ಚಿತ್ರಕಥೆ : ಜಿಯೋ ಬೇಬಿ (ದಿ ಗ್ರೇಟ್ ಇಂಡಿಯನ್ ಕಿಚನ್‌), ಅತ್ಯುತ್ತಮ ಸಂಕಲನ : ಮಹೇಶ್ ನಾಯಾಯಣನ್‌ (ಸಿ ಯೂ ಸೂನ್‌), ಅತ್ಯುತ್ತಮ ಸಂಗೀತ ನಿರ್ದೇಶಕ : ಎಂ.ಜಯಚಂದ್ರನ್‌ (ಸೂಫಿಯಂ ಸುಜಾತಯಂ), ಅತ್ಯುತ್ತಮ ಗಾಯಕ : ಶಾಬಾಝ್ ಅಮಾನ್‌, ಅತ್ಯುತ್ತಮ ಗಾಯಕಿ : ನಿತ್ಯಾ ಮಮ್ಮೆನ್‌, ಅತ್ಯುತ್ತಮ ಗೀತರಚನೆ : ಅನ್ವರ್ ಅಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯಪ್ಪನುಂ ಕೋಶಿಯುಂ ಸಿನಿಮಾ ನಿರ್ದೇಶಕರಾದ ಸಚ್ಚಿದಾನಂದ ಮರಣಹೊಂದಿದ್ದು 2020 ಜೂನ್ ತಿಂಗಳಲ್ಲಿ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...