Homeಮುಖಪುಟಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ಈ ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ಬಾಯಿ ಮುಚ್ಚಿಸಿದ ಕೇರಳ ವಿದ್ಯಾರ್ಥಿಗಳು

ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ.

- Advertisement -
- Advertisement -

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ರಾಜ್ಯವು ಮತೀಯವಾದ, ಕಟ್ಟಳೆಗಳಿಗೆ ಸೊಪ್ಪು ಹಾಕುವುದಿಲ್ಲ ಎನ್ನುವುದನ್ನು ಅಲ್ಲಿನ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಒಂದು ಸುಂದರ ಫೋಟೊ ಮೂಲಕ ಸಂಪ್ರದಾಯವಾದಿಗಳ ವಿರುದ್ಧ ವಿನೂತನವಾಗಿ ಸೆಡ್ಡು ಹೊಡೆದು ಸುದ್ದಿಯಾಗಿದ್ದಾರೆ.

ಕಾಲೇಜ್ ಆಫ್ ಇಂಜಿನಿಯರಿಂಗ್ ತ್ರಿವೇಂದ್ರಮ್ (ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಬಸ್‌ ನಿಲ್ದಾಣದಲ್ಲಿ ಲಿಂಗಬೇಧವೆಣಿಸದೆ ಒಬ್ಬರ ಕಾಲಿನ ಮೇಲೆ ಮತ್ತೊಬ್ಬರು ಕುಳಿತುಕೊಂಡು ತೆಗೆಸಿಕೊಂಡ ಸುಂದರ ಫೋಟೊ ಒಂದು ವೈರಲ್ ಆಗಿದೆ. ಹಲವಾರು ಜನ ಆ ಫೋಟೊವನ್ನು ಪ್ರೊಫೈಲ್ ಪಿಕ್ ಆಗಿ, ವಾಟ್ಸಾಪ್ ಸ್ಟೇಟಸ್ ಆಗಿ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಉಳಿದ ವಿದ್ಯಾರ್ಥಿಗಳು ಕೂಡ ಅದೇ ಜಾಗದಲ್ಲಿ ಕುಳಿತು ಫೋಟೊ ತೆಗೆಸಿದ್ದಾರೆ! ಆ ಮೂಲಕ ನೈತಿಕ ಪೊಲೀಸ್‌ಗಿರಿ ಮಾಡಲು ಮುಂದಾದವರಿಗೆ ತಕ್ಕ ಉತ್ತರ ನೀಡಿದ್ದಾರೆ.

ನಡೆದಿದ್ದಿಷ್ಟು..

ಸಿಇಟಿ ಕಾಲೇಜಿನ ಹೊರಗಿನ ಬಸ್‌ ನಿಲ್ದಾಣವು ವಿದ್ಯಾರ್ಥಿಗಳಿಗೆ ತಮ್ಮ ಸ್ನೇಹಿತರನ್ನು ಮಾತನಾಡಿಸಲು, ಹರಟೆ ಹೊಡೆಯಲು ಪ್ರಸಕ್ತ ಸ್ಥಳವಾಗಿತ್ತು. ಕಾಲೇಜು ಮುಗಿದ ನಂತರ ಅಲ್ಲಿ ಕುಳಿತು ಹುಡುಗ ಹುಡುಗಿಯರು ಸೇರಿ ತಮಾಷೆ ಮಾಡುತ್ತಿದ್ದುದು ಎಂದಿನ ದಿನಚರಿ. ಆದರೆ ಇದು ಅಲ್ಲಿನ ಸ್ಥಳೀಯ ಸಂಪ್ರದಾಯವಾದಿಗಳಿಗೆ ಸಹಿಸಿಕೊಳ್ಳಲು ಅಸಾಧ್ಯವಾಗಿತ್ತು. ಅವರ ಪ್ರಕಾರ ಹುಡುಗ ಹುಡುಗಿಯರು ಮಾತನಾಡಬಾರದು, ಸ್ನೇಹ ಪ್ರೀತಿ ಮಾಡಬಾರದು. ಅದಕ್ಕಾಗಿ ಸ್ಥಳೀಯರು ಕಳೆದ ಜುಲೈ 19ರ ಮಂಗಳವಾರ ರಾತ್ರೋರಾತ್ರಿ ಬಸ್‌ ಸ್ಟ್ಯಾಂಡಿನಲ್ಲಿ ಕುಳಿತುಕೊಳ್ಳುವ ಕುರ್ಚಿಗಳನನ್ನು ತೆಗೆದು ಕೇವಲ ಒಬ್ಬೊಬ್ಬರು ಮಾತ್ರ ಕುಳಿತುಕೊಳ್ಳುವಂತೆ ಮೂರು ಕುರ್ಚಿಗಳನ್ನು ಹಾಕಲಾಗಿತ್ತು. ಎರಡು ಕುರ್ಚಿ ಜೊತೆಗಿದ್ದರೆ ಹುಡುಗ-ಹುಡುಗಿ ಕುಳಿತು ಮಾತನಾಡುತ್ತಾರೆ ಎಂಬುದು ಅವರ ಈ ಕೃತ್ಯಕ್ಕೆ ಕಾರಣವಾಗಿತ್ತು.

ಇದನ್ನು ನೋಡಿದ ವಿದ್ಯಾರ್ಥಿಗಳಿಗೆ ಆಶ್ಚರ್ಯ ಮತ್ತು ಆಘಾತವಾಗಿತ್ತು. ಇದನ್ನು ಪ್ರತಿಭಟಿಸಲು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರ್ಧರಿಸಿದರು. ಒಂದೇ ಸೀಟಿನಲ್ಲಿ ಹುಡುಗ ಹುಡುಗಿಯರು ತೊಡೆಮೇಲೆ ಕುಳಿತು ಫೋಟೊ ತೆಗೆದು ತಮ್ಮ ಸ್ನೇಹಿತರ ಗುಂಪುಗಳಲ್ಲಿ ಹಂಚಿಕೊಂಡರು. ಅವರ ಈ ದಿಟ್ಟ ಮತ್ತು ವಿನೂತನ ಪ್ರತಿಭಟನೆಯ ಈ ಚಿತ್ರಗಳು ನಂತರ ಎಲ್ಲೆಂದರಲ್ಲಿ ವೈರಲ್ ಆದವು. ಉಳಿದ ವಿದ್ಯಾರ್ಥಿಗಳು ಈ ಫೋಟೊ ತೆಗೆಸಿಕೊಳ್ಳುವ ಪ್ರತಿಭಟನೆಗೆ ಕೈಜೋಡಿಸಿ ತಾವು ಜೊತೆಗೆ ಕುಳಿತು ಪೋಟೊ ತೆಗೆಸಿಕೊಂಡರು.

“ನಾವು ಪ್ರತಿನಿತ್ಯ ಅಲ್ಲಿ ಕುಳಿತರೆ, ಹುಡುಗ-ಹುಡುಗಿ ಮಾತನಾಡಿದರೆ ಸ್ಥಳೀಯರು ತೊಂದರೆ ಕೊಡುತ್ತಿದ್ದರು. ನಿಂದಿಸುತ್ತಿದ್ದರು. ಹಾಗಾಗಿ ಇಬ್ಬರು ಕೂರಬಾರದೆಂದು ಒಂದೊಂದು ಕುರ್ಚಿಯನ್ನು ತೆಗೆಸಿದ್ದರು. ಅದನ್ನು ವಿದ್ಯಾರ್ಥಿಗಳು ವಿರೋಧಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ” ಎಂದು ಸಿಇಟಿ ಕಾಲೇಜು ಸಂಘದ ಉಪಾಧ್ಯಕ್ಷರಾದ ಕೆ.ಪೆ ಫೆಬಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಆರ್ಯ ಪ್ರತಿಕ್ರಿಯಿಸಿ, “ನಾವು ಪೋಸ್ಟ್ ಮಾಡಿದ ಚಿತ್ರ ವೈರಲ್ ಆಗುತ್ತದೆ ಎಂದು ನಾವು ಅಂದಾಜಿಸಿರಲಿಲ್ಲ. ಅದು ಅಷ್ಟೊಂದು ಹರಿದಾಡುತ್ತಿರುವುದು ನಮ್ಮ ಈ ಸರಳ ಪ್ರತಿಭಟನೆಗೆ ಜನಬೆಂಬಲವನ್ನು ತೋರಿಸುತ್ತದೆ. ಜೊತೆಗೆ ಇಲ್ಲಿನ ಸ್ಥಳೀಯರು ವಿದ್ಯಾರ್ಥಿಗಳ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದಾರೆ ಮತ್ತು ನಮ್ಮನ್ನು ಹೇಗೆ ನಿಯಂತ್ರಿಸಲು ಬಯಸುತ್ತಾರೆ ಎಂಬುದನ್ನು ತಿಳಿಸುತ್ತದೆ. ಆದರೆ ನಮ್ಮ ಪ್ರತಿಭಟನೆಯ ನಂತರ ಇದುವರೆಗೂ ನಮಗೆ ಸಕರಾತ್ಮಕ ಪ್ರತಿಕ್ರಿಯೆಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ ಸಾಮರಸ್ಯ ನಡಿಗೆ, ಸಹಬಾಳ್ವೆ ಸಮಾವೇಶ ಹೀಗಿತ್ತು; ಚಿತ್ರಗಳಲ್ಲಿ ನೋಡಿ

ಈ ಮೊದಲು ಸಹ ಸಿಇಟಿ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಸಮಯದ ಕುರಿತು ಪ್ರತಿಭಟನೆ ನಡೆಸಿದ್ದರು. ಸಂಜೆ 6.30ರ ಒಳಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಒಳಗೆ ಬರಬೇಕು ಎಂಬ ನಿಯಮ ತಂದಾಗ ದೊಡ್ಡ ಪ್ರತಿಭಟನೆ ನಡೆಸಿ ಅದನ್ನು 9.30ರ ಒಳಗೆ ಬರಬೇಕು ಎಂದು ತಿದ್ದುಪಡಿ ತರಲು ಕಾರಣರಾಗಿದ್ದರು. ಈಗ ಮತ್ತೊಮ್ಮೆ ಮತೀಯ ಗೂಂಡಾಗಿರಿ ವಿರುದ್ಧ ಸ್ಪಷ್ಟ ಸಂದೇಶ ನೀಡಿದ್ದಾರೆ.

ಕೃಪೆ: ಆನ್‌ಮನೋರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಗಂಡು ಹೆಣ್ಣಿನ ಸ್ನೇಹ ಅದು ಗಿಟ್ಟದ ಸಂಪ್ರದಾಯಿಗಳ ಲೈಂಗಿಕ ವಿಕರಾಳಗಳಿಗೆ ಸವಾಲೊಡ್ಡುತ್ತದೆ 😁ಪಾಪ ಆವರೇನು ಮಾಡಿಯಾರು?
    ಆದರೆ ಈ ತಾಲೆಬಾನಿಗಳಿಗೆ ವಿದ್ಯಾರ್ಥಿಗಳ ಉತ್ತರ ಸಮಂಜಸವಾದದ್ದೆ.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...