Homeಮುಖಪುಟಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

- Advertisement -
- Advertisement -

ಹಿಂದೂ ಧರ್ಮೀಯರಲ್ಲ ಎಂಬ ಕಾರಣಕ್ಕೆ ಕೇರಳದ ತ್ರಿಶೂರ್‌ನಲ್ಲಿರುವ ದೇವಾಲಯದ ಆಡಳಿತವು ಭರತನಾಟ್ಯ ಕಲಾವಿದೆ ಮಾನ್ಸಿಯಾ ವಿ.ಪಿ. ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಆಡಳಿತದ ದೇವಸ್ವಂ ಮಂಡಳಿಗೆ ಒಳಪಡುವ ಕೂಡಲಮಾಣಿಕ್ಯಂ ದೇವಸ್ಥಾನವು ತನ್ನ ಆವರಣದಲ್ಲಿ ಹಿಂದೂಯೇತರರು ನೃತ್ಯ ಪ್ರದರ್ಶನ ನೀಡುವಂತಿಲ್ಲ ಎಂದು ಹೇಳಿದೆ.

ಭರತನಾಟ್ಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ವಾಂಸರಾಗಿರುವ ಮಾನ್ಸಿಯಾ ಅವರು ಮುಸ್ಲಿಂ ಧರ್ಮದಲ್ಲಿ ಬೆಳೆದವರಾಗಿದ್ದಾರೆ. ಈ ಹಿಂದೆ ಅವರು ಶಾಸ್ತ್ರೀಯ ನೃತ್ಯ ಪ್ರಕಾರಗಳ ಕಲಾವಿದೆಯಾಗಿದ್ದಕ್ಕೆ ಮುಸ್ಲಿಮರಿಂದಲೂ ಟೀಕೆಗಳನ್ನು ಎದುರಿಸಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸಿಯಾ, “ಹಿಂದೂ ಅಲ್ಲದ ಕಾರಣಕ್ಕೆ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಎಲ್ಲಾ ವೇದಿಕೆಗಳೂ ಧರ್ಮ ಆಧಾರಲ್ಲಿ ನೀಡಲಾಗುತ್ತಿದ್ದು, ಉತ್ತಮ ನೃತ್ಯಗಾರ್ತಿಯೆ ಎಂಬುವುದು ನೋಡುತ್ತಿಲ್ಲ. ದೇವಸ್ಥಾನದ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಮದುವೆಯಾದ ನಂತರ ಹಿಂದೂ ಮತಕ್ಕೆ ಮತಾಂತರವಾಗಿದ್ದೀರಾ ಎಂಬ ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ ಯಾವುದೆ ಮತದಲ್ಲಿ ಇಲ್ಲದ ನಾನು ಯಾವ ಮತಕ್ಕೆ ಮತಾಂತರವಾಗಿಲಿ” ಎಂದು ಹೇಳಿದ್ದಾರೆ.

“ಮತಗಳ ಆಧಾರದ ಮೇಲೆ ಬಹಿಷ್ಕಾರದ ಅನುಭವ ಆಗುತ್ತಿರುವುದು ಇದುವೆ ಮೊದಲೇನಲ್ಲ. ಕೆಲವು ವರ್ಷಗಳ ಹಿಂದೆ ಗುರುವಾಯೂರು ದೇವಸ್ಥಾನದಲ್ಲಿ ನನ್ನ ಪ್ರದರ್ಶನವನ್ನು ಇದೇ ಕಾರಣಕ್ಕೆ ರದ್ದುಗೊಳಿಸಲಾಗಿತ್ತು. ಕಲೆ ಮತ್ತು ಕಲಾವಿದರು ಮತ ಮತ್ತು ಜಾತಿಯ ಕಟ್ಟುಪಾಡುಗಳಿಂದ ನಿರಂತರವಾಗಿ ಹೊಡೆತ ತಿನ್ನುತ್ತಲೆ ಇದ್ದಾರೆ. ಒಂದು ಮತ ಅದನ್ನು ನಿಷೇಧ ಮಾಡಿದಾಗ, ಇನ್ನೊಂದು ,ಮತ ಅದನ್ನು ಏಕಸ್ವಾಮ್ಯವಾಗಿಸುತ್ತದೆ. ನಮ್ಮ ‘ಜಾತ್ಯತೀತ’ ಕೇರಳದಲ್ಲಿ ಏನೂ ಬದಲಾಗಿಲ್ಲ ಎಂಬುದನ್ನು ನೆನಪಿಸುತ್ತಿದ್ದೇನೆ” ಎಂದು ಮಾನ್ಸಿಯಾ ಹೇಳಿದ್ದಾರೆ.

ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಇದೇ ವೇಳೆ, ಕೂಡಲಮಾಣಿಕ್ಯಂ ದೇವಸ್ವಂ ಮಂಡಳಿ ಅಧ್ಯಕ್ಷ ಪ್ರದೀಪ್ ಮೆನನ್ ಮಾತನಾಡಿ, ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ಆವರಣದೊಳಗೆ ಹಿಂದೂಗಳು ಮಾತ್ರ ಕಾರ್ಯಕ್ರಮ ಮಾಡಬಹುದು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“10 ದಿನಗಳ ಕಾಲ ದೇವಾಲಯದ ಆವರಣದಲ್ಲಿ ಉತ್ಸವ ನಡೆಯುತ್ತದೆ. ಸುಮಾರು 800 ಕಲಾವಿದರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಾರೆ. ಕಲಾವಿದರು ಹಿಂದೂ ಸಮುದಾಯಕ್ಕೆ ಸೇರಿದ್ದಾರೋ ಇಲ್ಲವೋ ಎಂದು ಕೇಳಲಾಗುತ್ತದೆ. ಆದರೆ ತನಗೆ ಯಾವುದೇ ಧರ್ಮವಿಲ್ಲ ಎಂದು ಮಾನ್ಸಿಯಾ ಲಿಖಿತವಾಗಿ ನೀಡಿದ್ದರು. ಈ ಕಾರಣಕ್ಕಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳದಿಂದ ವರದಿಯಾಗುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಇದೇ ಮಾದರಿಯಲ್ಲಿ ಉತ್ತರ ಮಲಬಾರ್‌ನ ದೇವಸ್ಥಾನದ ಆಡಳಿತವು ತನ್ನ ಮಗ ಮುಸ್ಲಿಂ ಮಹಿಳೆಯನ್ನು ಮದುವೆಯಾದ ಆರೋಪದ ಮೇಲೆ ಪೂರಕ್ಕಳಿ ಕಲಾವಿದನಿಗೆ ದೇವಸ್ಥಾನಗಳಲ್ಲಿ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿತ್ತು. ಎರಡೂ ಸಂದರ್ಭಗಳಲ್ಲಿ ಅಧಿಕಾರಿಗಳು ದೇವಾಲಯದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿ ಕೊಂಡಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವೈದ್ಯರು,ಇತರೆ ವ್ಯಕ್ತಿಗಳು ಹಿಂದೂ ಅಲ್ಲದಿದ್ದರೂ ಅವರಲ್ಲಿ ವ್ಯವಹರಿಸುವುದು ಇಲ್ಲವೇ. ದೇವರಿಗೆ ದೊಡ್ಡ ಕಾಣಿಕೆ ನೀಡುವುದನ್ನು ಬೇಡ ಅನ್ನುವರೆ.

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...