ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 272 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 216 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 21 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಉತ್ತರಪ್ರದೇಶದ ಒಟ್ಟು 80 ಕ್ಷೇತ್ರಗಳಲ್ಲಿ 37 ಕ್ಷೇತ್ರಗಳಲ್ಲಿ ಎನ್‌ಡಿಎ, 39 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆಯನ್ನು ಸಾಧಿಸಿದೆ. ಇತರರು 2 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಇಂಡಿಯಾ ಮೈತ್ರಿಕೂಟ ಪ್ರಬಲ ಪ್ರತಿಸ್ಪರ್ಧೆಯನ್ನು ನೀಡುತ್ತಿದೆ. ಎನ್‌ಡಿಎ 16 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ 16 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಇತರರು 1 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಕರ್ನಾಟಕದಲ್ಲಿ ಎನ್‌ಡಿಎ 15 ಮತ್ತು ಇಂಡಿಯಾ ಮೈತ್ರಿಕೂಟ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪ.ಬಂಗಾಳದಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ, ಟಿಎಂಸಿ 18 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಇಂಡಿಯಾ ಮೈತ್ರಿಕೂಟ 3 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದೆ. ಕೇರಳದಲ್ಲಿ ಯುಡಿಎಫ್ 17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ತೆಲಂಗಾಣ ಬಿಜೆಪಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.
ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟ 31 ಕ್ಷೇತ್ರಗಳಲ್ಲಿ ಮತ್ತು ಎನ್‌ಡಿಎ ಮೈತ್ರಿಕೂಟ ಕೇವಲ 1 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.


