Homeಮುಖಪುಟಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

- Advertisement -
- Advertisement -

ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ 40 ವರ್ಷದ ಮಹಿಳೆಯನ್ನು ಜನರ ಗುಂಪೊಂದು ಸಾರ್ವಜನಿಕವಾಗಿ ನಿಂದಿಸಿದ್ದು, ಇದರಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಧರ್ಮಡಂ ನಿವಾಸಿ ರಸೀನಾ ಎಂಬ ಮಹಿಳೆ ಮಂಗಳವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಪತಿ ಮತ್ತು ಮೂವರು ಅಪ್ರಾಪ್ತ ಮಕ್ಕಳನ್ನು ಅಗಲಿದ್ದಾರೆ.

ಪ್ರಕರಣದ ಸಂಬಂಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಧರ್ಮಡಂ ಗ್ರಾಮದ ವಿ.ಸಿ. ಮುಬಶ್ಶಿರ್ (28), ಕೆ.ಎ ಫೈಸಲ್ (34) ಮತ್ತು ವಿ.ಕೆ. ರಫ್ನಾಸ್ (24) ಎಂದು ಗುರುತಿಸಿರುವುದಾಗಿ indianexpress.com ವರದಿ ಮಾಡಿದೆ.

ಪಿಣರಾಯಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬವಿಶ್ ವಿ.ಎಸ್ ಅವರ ಪ್ರಕಾರ, ಮೃತ ರಸೀನಾ ಸಾರ್ವಜನಿಕವಾಗಿ ಪುರುಷ ಸ್ನೇಹಿತನೊಂದಿಗೆ ಮಾತನಾಡುತ್ತಿರುವುದನ್ನು ನೋಡಿದ ಆರೋಪಿಗಳು ಆಕೆಯನ್ನು ಪ್ರಶ್ನಿಸಿದ್ದಾರೆ.

ಬಂಧಿತರಲ್ಲಿ ಒಬ್ಬ ರಸೀನಾ ಅವರ ಸಂಬಂಧಿ. ಆರೋಪಿಗಳು ರಸೀನಾ ಮತ್ತು ಆಕೆಯ ಸ್ನೇಹಿತೆಯನ್ನು ವಿಚಾರಣೆ ನಡೆಸಿ, ರಸೀನಾ ಅವರ ಕುಟುಂಬಸ್ಥರನ್ನು ಕರೆಸಿ ಅವರ ಮುಂದೆ ಆಕೆಯನ್ನು ಅವಮಾನಿಸಿದ್ದಾರೆ ಎಂದು ಪೊಲೀಸ್ ಇನ್ಸ್‌ಸ್ಪೆಕ್ಟರ್ ತಿಳಿಸಿದ್ದಾರೆ.

ಆರೋಪಿಗಳು ರಸೀನಾ ಅವರ ಸ್ನೇಹಿತನನ್ನು ತಮ್ಮ ಕಚೇರಿಗೆ ಕರೆದೊಯ್ದು ‘ಗುಂಪು ವಿಚಾರಣೆ’ಗೆ ಒಳಪಡಿಸಿದ್ದಾರೆ. ಆತನ ಡಿಜಿಟಲ್ ಗ್ಯಾಜೆಟ್‌ಗಳನ್ನು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

“ಮೃತ ಮಹಿಳೆಯಿಂದ ನಮಗೆ ಒಂದು ಆತ್ಮಹತ್ಯೆ ಪತ್ರ ಸಿಕ್ಕಿದೆ. ಆಕೆ ತನಗೆ ಆದ ಅವಮಾನದಿಂದ ತೀವ್ರವಾಗಿ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಈ ಘಟನೆಯಲ್ಲಿ ಇನ್ನೂ ಹೆಚ್ಚಿನ ಜನರು ಭಾಗಿಯಾಗಿರುವ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಬವಿಶ್ ಹೇಳಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....