Homeಮುಖಪುಟತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

- Advertisement -
- Advertisement -

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಮತ್ತು ಪ್ರತಿಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ  ಸರಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ರಾಜ್ಯಪಾಲರನ್ನು ಬಳಕೆ ಮಾಡುತ್ತಿರುವ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳದ ಎಡ ಪ್ರಜಾಸತ್ತಾತ್ಮಕ ರಂಗದ ನಾಯಕರು ಮತ್ತು ಶಾಸಕರು ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಡಿಎಂಕೆ ಮುಖಂಡರಾದ ತಿರುಚ್ಚಿ ಶಿವ ಮತ್ತು ಪಳನಿವೇಲ್ ತ್ಯಾಗರಾಜನ್ ಸೇರಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಪಿಣರಾಯ್‌ ವಿಜಯನ್, ಪ್ರತಿಭಟನೆಗಳು ಉತ್ತರ-ದಕ್ಷಿಣ ಎಂಬ ವಿಭಜನೆಯನ್ನು ಉತ್ತೇಜಿಸುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ರಾಜ್ಯದ ಜನರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಇಲ್ಲಿದ್ದೇವೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೆರಿಗೆಯ ಪಾಲನ್ನು ನೀಡುತ್ತಿಲ್ಲ ಮತ್ತು ಸರ್ಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬಳಸಲಾಗುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಆರೋಪಿಸಿದ್ದಾರೆ.

ಭಾರತದ ಒಕ್ಕೂಟ ರಚನೆಯನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗೂಡಿದ್ದೇವೆ. ಕೇಂದ್ರವು ಹಲವಾರು ಕ್ಷೇತ್ರಗಳಲ್ಲಿ ರಾಜ್ಯಗಳ ಅಧಿಕಾರ ಮತ್ತು ಕರ್ತವ್ಯಗಳನ್ನು ಅತಿಕ್ರಮಿಸುವ ಕಾನೂನುಗಳನ್ನು ರೂಪಿಸುತ್ತಿದೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಇಚ್ಛೆಯಂತೆ ವರ್ತಿಸುತ್ತಿದ್ದಾರೆ ಮತ್ತು ರಾಜ್ಯ ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ರಾಜ್ಯ ಸರಕಾರದ ಬಗೆಗೆ ಕೇಂದ್ರದ ಮನಸ್ಥಿತಿಯು ಪ್ರತಿಪಕ್ಷಗಳ ಆಡಳಿತದ ರಾಜ್ಯಗಳಾದ್ಯಂತ ರಾಜ್ಯಪಾಲರು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ. ಸಾಂವಿಧಾನಿಕವಾಗಿ, ರಾಜ್ಯಪಾಲರು ರಾಜ್ಯ ಸಚಿವ ಸಂಪುಟಗಳ ಸಲಹೆಯ ಮೇರೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಆದರೆ ಪ್ರತಿಪಕ್ಷಗಳ ಆಡಳಿತದ ರಾಜ್ಯದಲ್ಲಿ ರಾಜ್ಯಪಾಲರು ತಮ್ಮನ್ನು ನೇಮಿಸಿದ ಕೇಂದ್ರ ಸರ್ಕಾರದ ಆದೇಶದಂತೆ ವರ್ತಿಸುವ ಈ ವಿದ್ಯಮಾನವನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು ಹೀಗೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪವನ್ನು ನೋಡಿದ್ದೇವೆ. ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಶಾಸಕಾಂಗದ ಕಾರ್ಯದಲ್ಲಿ ಮಧ್ಯಪ್ರವೇಶಿಸುವ ಮೂಲಕ ಸಾಂವಿಧಾನಿಕ ಆದೇಶವನ್ನು ಮೀರಲು ಪ್ರಯತ್ನಿಸುತ್ತಿರುವುದನ್ನು ನಾವು ನೋಡಿದ್ದೇವೆ. ಇದು ರಾಜ್ಯಗಳ ವಿರುದ್ಧದ ತಾರತಮ್ಯದ ವಿರುದ್ಧ ಪ್ರಜಾಸತ್ತಾತ್ಮಕ ಪ್ರತಿಭಟನೆಯಾಗಿದೆ. ನಮ್ಮ ಜನರ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಂಡು ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಪಿಣರಾಯ್ ವಿಜಯನ್‌ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕೇಂದ್ರದ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡಬೇಕೆಂದು ಈ ಮೊದಲೇ ನಾವು ನಿರ್ಧರಿಸಿದ್ದೆವು. ಅನುದಾನ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದೇವೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ ತಿಳಿಸಿದ್ದಾರೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...