Homeಮುಖಪುಟಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

ಕೇಶವಾನಂದ ಭಾರತಿ ತೀರ್ಪು 10 ಭಾಷೆಗಳಲ್ಲಿ ಲಭ್ಯ: ಸಿಜೆಐ ಡಿವೈ ಚಂದ್ರಚೂಡ್

- Advertisement -
- Advertisement -

ಭಾರತೀಯ ಸಂವಿಧಾನದ ಮೂಲ ರಚನೆಯ ಸಿದ್ದಾಂತವನ್ನು ರೂಪಿಸಿದ ಐತಿಹಾಸಿಕ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ 10 ಭಾಷೆಗಳಲ್ಲಿ ಲಭ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರು ತಿಳಿಸಿದ್ದಾರೆ. ಈ ಪ್ರಕರಣದ ತೀರ್ಪಿಗೆ 50 ವರ್ಷ ತುಂಬಿರುವ ಹಿನ್ನೆಲೆ ವಿವಿಧ ಭಾಷೆಗಳಲ್ಲಿ ಪ್ರಕಟಿಸಲಾಗಿದೆ ಸಿಜೆಐ ಹೇಳಿದ್ದಾರೆ.

ಕೇಶವಾನಂದ ಭಾರತಿ ಪ್ರಕರಣದ ಪ್ರಕರಣದ ಹಿನ್ನೆಲೆ, ಒಳಗೊಂಡಿರುವ ಪ್ರಮುಖ ಕಾನೂನು ಸಮಸ್ಯೆಗಳು, ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು, ಪ್ರಕರಣದಲ್ಲಿ ಹಾಜರಾದ ವಕೀಲರು, ಮಾಡಿದ ವಾದಗಳು ಮತ್ತು ತೀರ್ಮಾನಗಳ ವಿವರಗಳನ್ನು ಹತ್ತು ಭಾ‍ಷೆಗಳಲ್ಲಿ ನೀಡಲಾಗಿದೆ.

ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಒಡಿಯಾ, ಮಲಯಾಳಂ, ಗುಜರಾತಿ, ಕನ್ನಡ, ಬೆಂಗಾಲಿ, ಅಸ್ಸಾಮಿ ಮತ್ತು ಮರಾಠಿಯಲ್ಲಿ ತೀರ್ಪನ್ನು ಅನುವಾದಿಸಲಾಗಿದೆ. ಈ ಉಪಕ್ರಮವು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ನಡೆಯುತ್ತಿರುವ ಪ್ರಯತ್ನದ ಭಾಗ ಎಂದು ಸಿಜೆಐ ಹೇಳಿದ್ದಾರೆ. 20,000 ತೀರ್ಪುಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ವರದಿಗಳ (eSCR) ಎಲೆಕ್ಟ್ರಾನಿಕ್ ಆವೃತ್ತಿಯಲ್ಲಿ ಅಪ್‌ಲೋಡ್ ಮಾಡಲಾಗಿದೆ.

“ಜನರಿಗೆ ಕೇಶವಾನಂದ ಭಾರತಿ ತೀರ್ಪಿನ ಬಗ್ಗೆ ತಿಳಿದಿದೆ. ಆದರೆ, ಅದರ ಹಿಂದಿನ ಮಹತ್ವದ ಬಗ್ಗೆ ಗೊತ್ತಿಲ್ಲ. ವಿವಿಧ ಭಾಷೆಗಳಲ್ಲಿ ತೀರ್ಪನ್ನು ಅನುವಾದ ಮಾಡಿರುವುದು ಜನರಲ್ಲಿ ಜಾಗೃತಿ ಮೂಡಿಸಲು ನೆರವಾಗಲಿದೆ ಎಂದು” ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ ಹೇಳಿದ್ದಾರೆ.

ಏನಿದು ಕೇಶವಾನಂದ ಭಾರತಿ ಪ್ರಕರಣದ ತೀರ್ಪು?

ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ ನೀಡಿದ ಒಂದು ಐತಿಹಾಸಿಕ ತೀರ್ಪು ಆಗಿದೆ. ಇದು ಭಾರತೀಯ ಸಂವಿಧಾನದ ಮೂಲ ಸ್ವರೂಪವನ್ನು ನಿರ್ಧರಿಸಿದ ತೀರ್ಪು. ಈ ಪ್ರಕರಣವನ್ನು ದೇಶದ ಅತ್ಯಂತ ಪ್ರಸಿದ್ಧ ಸಾಂವಿಧಾನಿಕ ಪ್ರಕರಣಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಎಂ.ಸಿಕ್ರಿ ನ್ಯಾಯಧೀಶರಾದ ಎ.ಎನ್‌ ರೇ, ಎಸ್.ಎಂ. ಶೆಲತ್, ಕೆ.ಎಸ್. ಹೆಗಡೆ, ಎ.ಕೆ. ಮುಖರ್ಜಿ, ಜೆ.ಎಂ.ಶೆಲತ್, ಎ.ಎನ್. ಗ್ರೋವರ್, ಪಿ.ಜಗನ್ಮೋಹನ್ ರೆಡ್ಡಿ, ಹೆಚ್.ಆರ್.ಖನ್ನಾ, ಎಸ್.ಎನ್. ದ್ವಿವೇದಿ, ಎಂ.ಹೆಚ್. ಬೇಗ್, ವೈ.ವಿ. ಚಂದ್ರಚೂಡ್, ಮತ್ತು ಪಿ.ಎನ್. ಭಗವತಿ ಸೇರಿದಂತೆ 13 ನ್ಯಾಯಾಧೀಶರ ಅತಿದೊಡ್ಡ ಪೀಠವು ಈ ಪ್ರಕರಣ ವಿಚಾರಣೆ ನಡೆಸಿತ್ತು. 1972 ರ ಅಕ್ಟೋಬರ್ 31 ರಿಂದ 16 ಮಾರ್ಚ್ 1973 ರವರೆಗೆ 66 ದಿನಗಳ ಕಾಲ ಪ್ರಕರಣದ ವಿಚಾರನಣೆ ನಡೆದಿತ್ತು. ಅಂತಿಮ ತೀರ್ಪು 23 ಮಾರ್ಚ್ 1973 ರಂದು ಪ್ರಕಟಿಸಲಾಗಿತ್ತು.

ಕೇಶವಾನಂದ ಭಾರತಿ ಕೇಸ್ ದಾಖಲಿಸಿದವರು ಯಾರು?

ಧಾರ್ಮಿಕ ಸ್ವಾಮ್ಯದ ಆಸ್ತಿಯನ್ನು ಸರ್ಕಾರದ ಹಸ್ತಕ್ಷೇಪವಿಲ್ಲದೆ ನಿರ್ವಹಿಸುವ ಹಕ್ಕನ್ನು ನಾಗರಿಕರಿಗೆ ನೀಡುವ ಸಂವಿಧಾನದ ವಿಧಿ 26ರ ಅಡಿಯಲ್ಲಿ ಮಠದ ಭೂಮಿಯನ್ನು ಕೇರಳ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನವನ್ನು ಪ್ರಶ್ನಿಸಿ ಹಿಂದೂ ಮಠದ ಮುಖ್ಯಸ್ಥ ಕೇಶವಾನಂದ ಭಾರತಿ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ವ್ಯಾಪ್ತಿ ದೊಡ್ಡದಾಗಿದ್ದ ಕಾರಣ ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವನ್ನು ಈ ಪ್ರಕರಣ ಪ್ರಶ್ನಿಸಿದ್ದರಿಂದ ಇದು ಸಾಂವಿಧಾನಿಕ ವಿಷಯವಾಗಿ ಬದಲಾಗಿತ್ತು.

ಕೇಶವಾನಂದ ಭಾರತಿ ಹಿನ್ನೆಲೆ

ಕೇಶವಾನಂದ ಭಾರತಿ ಕೇರಳದ ಕಾಸರಗೋಡು ಜಿಲ್ಲೆಯ ಹಿಂದೂ ಮಠದ ಮುಖ್ಯಸ್ಥರಾಗಿದ್ದರು. ಮಠದಲ್ಲಿ ಜಮೀನು ಹೊಂದಿದ್ದರು. 1969 ರಲ್ಲಿ ಕೇರಳ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು. ಈ ಕಾಯ್ದೆಯಡಿ ಮಠಕ್ಕೆ ಸೇರಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕನ್ನು ಸರ್ಕಾರ ಹೊಂದಿದೆ ಎಂದು ಹೇಳಿತ್ತು.

ಮಾರ್ಚ್ 1970 ರಲ್ಲಿ ಭಾರತಿ ಸ್ವಾಮಿಜಿ ಸಂವಿಧಾನದ ವಿಧಿ 14 ರ ಅಡಿಯಲ್ಲಿ ಹೊಂದಿರುವ ಮೂಲಭೂತ ಹಕ್ಕುಗಳು, ವಿಧಿ 19 (1) (ಎಫ್) ರ ಸಮಾನತೆಯ ಹಕ್ಕು, ವಿಧಿ 25ರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಸ್ವಾತಂತ್ರ್ಯ, ವಿಧಿ 26ರ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ವಿಧಿ 31 ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕುಗಳಡಿ ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪು ಏನು?

24ನೇ ಏಪ್ರಿಲ್ 1973 ರಂದು ಸುಪ್ರೀಂ ಕೋರ್ಟ್ ಪ್ರಕರಣದ ಅಂತಿಮ ತೀರ್ಪನ್ನು 7:6 ರ ಬಹುಮತದಿಂದ ಪ್ರಕಟಿಸಿತು. ತೀರ್ಪಿನಲ್ಲಿ ಸಂವಿಧಾನದ “ಮೂಲ ರಚನೆ” ಅಥವಾ ಚೌಕಟ್ಟಿಗೆ ಧಕ್ಕೆಯಾಗದಂತೆ ಯಾವುದೇ ತಿದ್ದಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ, ಸಂವಿಧಾನದ ಶ್ರೇಷ್ಠತೆ, ಕಾನೂನು-ರಚನಾ ಸಂಸ್ಥೆಗಳು, ಅಧಿಕಾರಗಳ ಪ್ರತ್ಯೇಕತೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯ ಸೇರಿದಂತೆ ಸಂವಿಧಾನದ ಕೆಲವು ಮೂಲಭೂತ ಅಂಶಗಳು ಸಂವಿಧಾನದ ಮೂಲ ಸ್ವರೂಪದ ಭಾಗವಾಗಿದ್ದು, ಅದನ್ನು ಸಂಸತ್ತಿನಿಂದ ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಪ್ರಕಾರ, ಸಂವಿಧಾನದಲ್ಲಿ ತಿದ್ದುಪಡಿಗಳನ್ನು ಮಾಡಲು ಸಂಸತ್ತು ಅನಿಯಮಿತ ಅಧಿಕಾರವನ್ನು ಹೊಂದಿದೆ. ಆದರೆ, ಅಂತಹ ತಿದ್ದುಪಡಿಗಳು ಸಂವಿಧಾನದ ಮೂಲಭೂತ ರಚನೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಸಂಸತ್ತು ಸಂವಿಧಾನದ ಪ್ರತಿಯೊಂದು ತಿದ್ದುಪಡಿಯು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು.

ಇದನ್ನೂ ಓದಿ : ವಿವೋ-ಇಂಡಿಯಾ ಸೇರಿ ಇತರ ಕಂಪೆನಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...