Homeಕರ್ನಾಟಕಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ | ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ | ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ನಡೆದ ಭೂಕಬಳಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಆರು ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪವನ್ನು ಅವರ ವಿರುದ್ಧ ಹೊರಿಸಲಾಗಿದ್ದು, ಮಾರ್ಚ್ 18 ರಂದು ರಾಮನಗರ ತಹಶೀಲ್ದಾರ್ ಈ ಬಗ್ಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ

ಆದಾಗ್ಯೂ, ಈ ಆರೋಪವನ್ನು ಕುಮಾರಸ್ವಾಮಿ ನಿರಾಕರಿಸಿದ್ದು, 1985 ಮತ್ತು 1987 ರ ನಡುವೆ ನೋಂದಾಯಿತ ಮಾರಾಟ ಪತ್ರಗಳ ಮೂಲಕ ಗ್ರಾಮದಲ್ಲಿ ಕಾನೂನುಬದ್ಧವಾಗಿ ವಿವಿಧ ನಿವೇಶನಗಳನ್ನು ಖರೀದಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ತಾನು ಸುಮಾರು 40 ವರ್ಷಗಳಿಂದ ಭೂಮಿಯನ್ನು ಕಾನೂನುಬದ್ಧವಾಗಿ ಹೊಂದಿರುವುದಾಗಿ ಅವರು ಹೇಳಿದ್ದಾರೆ.

ನೋಟಿಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಕುಮಾರಸ್ವಾಮಿ ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ತಾನು ಮತ್ತು ಮಾರಾಟಗಾರರು ಇಬ್ಬರೂ ಮಾನ್ಯ ಮಾಲೀಕತ್ವದ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಎಲ್ಲಾ ದಾಖಲೆಗಳು ದೃಢಪಡಿಸಿವೆ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಹಾಯಕ ಆಯುಕ್ತರಿಗೆ ಮಾತ್ರ ಅಂತಹ ಅಧಿಕಾರವಿರುವುದರಿಂದ ತಹಸೀಲ್ದಾರ್‌ಗೆ ನೋಟಿಸ್ ನೀಡುವ ಅಧಿಕಾರವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಮಂಗಳವಾರ, ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಅವರ ಏಕ ಪೀಠವು ತಹಸೀಲ್ದಾರ್ ಅವರ ನೋಟಿಸ್ ಶೋಕಾಸ್ ನೋಟಿಸ್ ಆಗಿರುವುದರಿಂದ, ಮೊದಲು ಪ್ರತಿಕ್ರಿಯೆಯನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ನೋಟಿಸ್‌ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವನ್ನು ನೀಡಲಾಗಿದೆ” ಎಂದು ನ್ಯಾಯಾಲಯವು ಹೇಳಿದ್ದು, ಏಪ್ರಿಲ್ 22 ರಂದು ಪ್ರಕರಣವನ್ನು ಮುಂದಿನ ವಿಚಾರಣೆಗೆ ನಿಗದಿಪಡಿಸಿದೆ.

ಪ್ರತ್ಯೇಕ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಈ ಪ್ರಕರಣದ ವಿಚಾರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಫೆಬ್ರವರಿಯಲ್ಲಿ ನಿರಾಕರಿಸಿತು. ಬನಶಂಕರಿ ಪ್ರದೇಶದ ಹಲಗಿ ವಡೇರಹಳ್ಳಿ ಗ್ರಾಮದಲ್ಲಿ 1997 ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡ ಎರಡು ಎಕರೆ 24 ಗುಂಟೆ ಭೂಮಿಯನ್ನು ಡಿ-ನೋಟಿಫೈ ಮಾಡಿದ ಪ್ರಕರಣ ಇದಾಗಿದೆ.

2007 ರಲ್ಲಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಕ್ಷೇಪಣೆಗಳ ಹೊರತಾಗಿಯೂ ಭೂಮಿಯನ್ನು ಡಿ-ನೋಟಿಫೈ ಮಾಡಲು ಆದೇಶಿಸಿದ್ದರು. ನಂತರ 2010 ರಲ್ಲಿ ಈ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ 4.14 ಕೋಟಿ ರೂ.ಗೆ ಮಾರಾಟ ಮಾಡಲಾಯಿತು ಎಂದು ವರದಿಯಾಗಿದೆ. ಕೇತಗಾನಹಳ್ಳಿ ಭೂಕಬಳಿಕೆ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....