Homeಮುಖಪುಟಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ 'ಪದ್ಮ ಪ್ರಶಸ್ತಿ'

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಪ್ರಮುಖ ವ್ಯಕ್ತಿ ಸಾಧ್ವಿ ರಿತಂಭರ, ಮಂದಿರದ ಮುಖ್ಯ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ಮತ್ತು ಮಂದಿರ ಪವಿತ್ರೀಕರಣದ ಮಹೂರ್ತ ನಿರ್ಧರಿಸುವ ಜವಾಬ್ದಾರಿ ವಹಿಸಿಕೊಂಡಿದ್ದ ವೇದ ವಿದ್ವಾಂಸ ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಈ ವರ್ಷದ ಪದ್ಮ ಪ್ರಶಸ್ತಿ ಪುರಸ್ಕೃತ ಪಟ್ಟಿಯಲ್ಲಿದ್ದಾರೆ. ಇವರನ್ನು ಕ್ರಮವಾಗಿ ಸಾಮಾಜಿಕ ಕಾರ್ಯ, ವಾಸ್ತುಶಿಲ್ಪ ಮತ್ತು ಸಾಹಿತ್ಯ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶ್ವ ಹಿಂದೂ ಪರಿಷತ್‌ನ (ವಿಹೆಚ್‌ಪಿ) ಮಹಿಳಾ ವಿಭಾಗ ‘ದುರ್ಗಾ ವಾಹಿನಿಯ’ ಸಂಸ್ಥಾಪಕಿ ಸಾಧ್ವಿ ರಿತಂಭರ 1989-90ರ ಅವಧಿಯಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಅಭಿಯಾನದ ಭಾಗವಾಗಿ ದೇಶದಾದ್ಯಂತ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಚಂದ್ರಕಾಂತ್ ಸೋಂಪುರ ಗುಜರಾತ್‌ನ ದೇವಾಲಯ ನಿರ್ಮಾಣಕಾರರ ಕುಟುಂಬದಿಂದ ಬಂದವರು. ದೇಶದಾದ್ಯಂತ 200ಕ್ಕೂ ಹೆಚ್ಚು ದೇವಾಲಯಗಳ ನಿರ್ಮಾಣದಲ್ಲಿ ಸೋಂಪುರ ಕುಟುಂಬವು ಪ್ರಮುಖ ಪಾತ್ರ ವಹಿಸಿದೆ. ಗುಜರಾತ್‌ನ ಸೋಮನಾಥ ದೇವಾಲಯದ ಪುನರ್ನಿರ್ಮಾಣದಲ್ಲೂ ಈ ಕುಟುಂಬ ಭಾಗಿಯಾಗಿದೆ.

ವೇದ ವಿದ್ವಾಂಸ ಎನ್ನಲಾದ ಗಣೇಶ್ವರ್ ಶಾಸ್ತ್ರಿ ದ್ರಾವಿಡ್, ರಾಮ ಮಂದಿರದ ಭೂಮಿ ಪೂಜೆಯ ಮಹೂರ್ತ ಮತ್ತು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಯಲ್ಲಿಯೂ ಭಾಗಿಯಾಗಿದ್ದರು. ಕಳೆದ ವರ್ಷ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದಾಗ ಅವರ ಪಕ್ಕದಲ್ಲಿದ್ದ ಏಕೈಕ ವ್ಯಕ್ತಿ ಇವರಾಗಿದ್ದಾರೆ.

ಸಾಧ್ವಿ ರಿತಂಭರ ಅವರಿಗೆ ಪದ್ಮಭೂಷಣ, ಚಂದ್ರಕಾಂತ್ ಸೋಂಪುರ ಮತ್ತು ಗಣೇಶ್ವರ್ ಶಾಸ್ತ್ರಿ ದ್ರಾವಿಡ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಈ ಬಾರಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶದ ವಿವಿಧ ಕ್ಷೇತ್ರಗಳ 139 ಸಾಧಕರಿ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ 7 ಮಂದಿಯನ್ನು ಪದ್ಮ ವಿಭೂಷಣ, 19 ಜನರನ್ನು ಪದ್ಮ ಭೂಷಣ ಮತ್ತು 113 ಮಂದಿಯನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಮಂದಿಗೆ ವಿವಿಧ ಪದ್ಮ ಪ್ರಶಸ್ತಿಗಳು ಘೋಷಣೆಯಾಗಿವೆ.

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...