“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್ ದೇವಗನ್ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್, “ಸಹೋದರ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದು ಟ್ವೀಟ್ ಮಾಡಿದ ಬಳಿಕ ನಟ ಕಿಚ್ಚ ಸುದೀಪ್ ಖಡನ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಸುದೀಪ್ ಕೇಳಿದ್ದರು.
And sir @ajaydevgn ,,
I did understand the txt you sent in hindi. Tats only coz we all have respected,loved and learnt hindi.
No offense sir,,,but was wondering what'd the situation be if my response was typed in kannada.!!
Don't we too belong to India sir.
🥂— Kichcha Sudeepa (@KicchaSudeep) April 27, 2022
ಈಗ ಒಬ್ಬೊಬ್ಬರಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಅಜಯ್ ದೇವಗನ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ನಟರಾದ ಸತೀಶ್ ನೀನಾಸಂ, ಶ್ರೀನಗರ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
#StopHindiImposition (#ಹಿಂದಿಹೇರಿಕೆನಿಲ್ಲಿಸಿ) ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, “ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಅಜಯ್ ದೇವಗನ್ , ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಆರ್‌ನಂತಹ ಚಲನಚಿತ್ರಗಳು ಹಿಂದಿ ಭಾಗದಲ್ಲಿ ಉತ್ತಮವಾಗಿ ಯಶಸ್ವಿಯಾಗಿವೆ. ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ” ಎಂದು ತಿಳಿಸಿದ್ದಾರೆ.
No- Hindi is not our national language. @ajaydevgn Your ignorance is baffling. And it’s great that films like KGF Pushpa and RRR have done so well in the Hindi belt- art has no language barrier.
Please enjoy our films as much as we enjoy yours- #stopHindiImposition https://t.co/60F6AyFeW3— Divya Spandana/Ramya (@divyaspandana) April 27, 2022
ನಟ ಸತೀಶ್ ನೀನಾಸಂ ಪ್ರತಿಕ್ರಿಯಿಸಿ, “ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್ ಸರ್” ಎಂದು ಟ್ವೀಟ್ ಮಾಡಿದ್ದಾರೆ.
ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ,ನಮ್ಮಂತೆ ನೀವು ನಮ್ಮನ್ನು, ನಮ್ಮ ಬಾಷೆಯನ್ನು ಗೌರವಿಸಿ.ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ತ್ರ ಭಾಷೆಯಲ್ಲ.ನಿಮ್ಮ ಧ್ವನಿಗೆ ನಮ್ಮ ಧ್ವನಿ @KicchaSudeep ಸರ್ https://t.co/Hvje7dfvJK
— Sathish Ninasam (@SathishNinasam) April 27, 2022
#AjayDevgan #Hindi #Kannada ಹ್ಯಾಷ್ ಟ್ಯಾಗ್‌ನಲ್ಲಿ ಫೇಸ್‌ಬುಕ್ ಪೋಸ್ಟ್ ಮಾಡಿರುವ ನಟ, ಹೋರಾಟಗಾರ ಚೇತನ್ ಅಹಿಂಸಾ, “ಮಿಸ್ಟರ್ ಪಾನ್ ಮಸಾಲ ಅಜಯ್ ದೇವಗನ್- ಬಾಯಿ ಬಿಟ್ಟು ಏನೇನೋ ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು-ಎಂಬ ಮಾತು ತಮಗೆ ಚೆನ್ನಾಗಿ ಒಪ್ಪುತ್ತದೆ. ಎಂತಾ ಅಜ್ಞಾನ ಮತ್ತು ಅಹಂಕಾರ. ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ ಆಗುವುದೂ ಇಲ್ಲ ಎಂಬುದನ್ನ ಮತ್ತು ಸ್ಟಾರ್‌ಗಳು ಖಾಲಿ ಕೊಡಗಳು ಎಂಬುದನ್ನ ನೆನಪಿಸಿದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್ ಹೇಳಿಕೆಗೆ ಅಜಯ್ ದೇವಗನ್ ಆಕ್ಷೇಪ- ಜನರ ತರಾಟೆ
ಶ್ರೀನಗರ ಕಿಟ್ಟಿ ಟ್ವೀಟ್ ಮಾಡಿದ್ದು, “ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ. ಅದುವೇ ಟ್ವೀಟ್” ಎಂದು ಸುದೀಪ್ ಅವರ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.
Hindi will never be our national language. That's the tweet..!!👍🏻#KicchaSudeep 🔥 https://t.co/Z1LCI0qp8p
— ಶ್ರೀನಗರ ಕಿಟ್ಟಿ (@srinagarakitty) April 27, 2022


