Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದು ಟ್ವೀಟ್ ಮಾಡಿದ ಬಳಿಕ ನಟ ಕಿಚ್ಚ ಸುದೀಪ್‌ ಖಡನ್‌ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಸುದೀಪ್‌ ಕೇಳಿದ್ದರು.

ಈಗ ಒಬ್ಬೊಬ್ಬರಾಗಿ ಕನ್ನಡ ಚಿತ್ರರಂಗದ ನಟ, ನಟಿಯರು ಅಜಯ್‌ ದೇವಗನ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ನಟರಾದ ಸತೀಶ್ ನೀನಾಸಂ, ಶ್ರೀನಗರ ಕಿಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

#StopHindiImposition (#ಹಿಂದಿಹೇರಿಕೆನಿಲ್ಲಿಸಿ) ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, “ಇಲ್ಲ- ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಅಜಯ್‌ ದೇವಗನ್‌ , ನಿಮ್ಮ ಅಜ್ಞಾನವು ವಿಸ್ಮಯಕಾರಿಯಾಗಿದೆ. ಕೆಜಿಎಫ್, ಪುಷ್ಪ ಮತ್ತು ಆರ್‌ಆರ್‌ಆರ್‌ನಂತಹ ಚಲನಚಿತ್ರಗಳು ಹಿಂದಿ ಭಾಗದಲ್ಲಿ ಉತ್ತಮವಾಗಿ ಯಶಸ್ವಿಯಾಗಿವೆ. ಕಲೆಗೆ ಯಾವುದೇ ಭಾಷೆಯ ತಡೆ ಇಲ್ಲ. ನಿಮ್ಮ ಚಲನಚಿತ್ರಗಳನ್ನು ನಾವು ಆನಂದಿಸಿದಂತೆ ದಯವಿಟ್ಟು ನಮ್ಮ ಚಲನಚಿತ್ರಗಳನ್ನು ಆನಂದಿಸಿ” ಎಂದು ತಿಳಿಸಿದ್ದಾರೆ.

ನಟ ಸತೀಶ್ ನೀನಾಸಂ ಪ್ರತಿಕ್ರಿಯಿಸಿ, “ಹತ್ತಾರು ವರ್ಷಗಳಿಂದ ನಿಮ್ಮ ಹಿಂದಿ ಸಿನಿಮಾಗಳು ಕನ್ನಡ ನೆಲದಲ್ಲಿ ಹಣ ಮಾಡಿವೆ,ಈಗಷ್ಟೆ ನಮ್ಮ ಕನ್ನಡ ಸಿನಿಮಾಗಳು ಅಲ್ಲಿಗೆ ಕಾಲಿಟ್ಟಿವೆ, ನಮ್ಮಂತೆ ನೀವು ನಮ್ಮನ್ನು, ನಮ್ಮ ಭಾಷೆಯನ್ನು ಗೌರವಿಸಿ. ಹಿಂದಿ ಅಂದಿಗೂ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಲ್ಲ. ನಿಮ್ಮ ಧ್ವನಿಗೆ ನಮ್ಮ ಧ್ವನಿ ಸುದೀಪ್‌ ಸರ್‌” ಎಂದು ಟ್ವೀಟ್‌ ಮಾಡಿದ್ದಾರೆ.

#AjayDevgan #Hindi #Kannada  ಹ್ಯಾಷ್‌ ಟ್ಯಾಗ್‌ನಲ್ಲಿ ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಮಿಸ್ಟರ್ ಪಾನ್ ಮಸಾಲ ಅಜಯ್ ದೇವಗನ್- ಬಾಯಿ ಬಿಟ್ಟು ಏನೇನೋ ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು-ಎಂಬ ಮಾತು ತಮಗೆ ಚೆನ್ನಾಗಿ ಒಪ್ಪುತ್ತದೆ. ಎಂತಾ ಅಜ್ಞಾನ ಮತ್ತು ಅಹಂಕಾರ. ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ ಆಗುವುದೂ ಇಲ್ಲ ಎಂಬುದನ್ನ ಮತ್ತು ಸ್ಟಾರ್‌ಗಳು ಖಾಲಿ ಕೊಡಗಳು ಎಂಬುದನ್ನ ನೆನಪಿಸಿದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಶ್ರೀನಗರ ಕಿಟ್ಟಿ ಟ್ವೀಟ್‌ ಮಾಡಿದ್ದು, “ಹಿಂದಿ ಎಂದಿಗೂ ನಮ್ಮ ರಾಷ್ಟ್ರ ಭಾಷೆಯಾಗುವುದಿಲ್ಲ. ಅದುವೇ ಟ್ವೀಟ್” ಎಂದು ಸುದೀಪ್‌ ಅವರ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...