Homeಮುಖಪುಟಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ - ಕೇಂದ್ರ ಸರ್ಕಾರ

ಖಲಿಸ್ತಾನ್ ಪ್ರತ್ಯೇಕತಾವಾದಿ ಪನ್ನುನ್‌ನಿಂದ ಸಂಸತ್‌ಗೆ ಬಾಂಬ್ ಬೆದರಿಕೆ – ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಜುಲೈನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಲ್ಯಾಂಡ್‌ಲೈನ್‌ ಫೋನ್‌ಗೆ ಖಲಿಸ್ತಾನ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಧ್ವನಿಯಲ್ಲಿ ಮೊದಲೆ ರೆಕಾರ್ಡ್ ಮಾಡಲಾದ ಸಂದೇಶವನ್ನು ಕಳುಹಿಸಲಾಗಿದ್ದು, ಅದರಲ್ಲಿ ಭಾರತೀಯ ಸಂಸತ್ತು ಮತ್ತು ಕೆಂಪು ಕೋಟೆ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ನ್ಯಾಯಮಂಡಳಿಗೆ ತಿಳಿಸಿದೆ ಎಂದು ಗುರುವಾರ ದಿ ಹಿಂದೂ ವರದಿ ಮಾಡಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ಅಷ್ಟೆ ಅಲ್ಲದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದರಾದ ಎ.ಎ. ರಹೀಮ್ ಮತ್ತು ವಿ. ಶಿವದಾಸನ್ ಅವರ ಮೊಬೈಲ್ ಫೋನ್‌ಗಳಿಗೆ ಕೂಡಾ ಅದೇ ಸಂದೇಶವನ್ನು ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಪತ್ರಿಕೆಯ ವರದಿ ಹೇಳಿದೆ. ಖಲಿಸ್ತಾನ್ ಪ್ರತ್ಯೇಕತಾವಾದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 27 ರಂದು ನ್ಯಾಯಮಂಡಳಿ ನೀಡಿದ ಆದೇಶವು, ಪನ್ನುನ್ ಅವರ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಮೇಲಿನ ಕೇಂದ್ರ ಸರ್ಕಾರದ ನಿಷೇಧವನ್ನು ಇನ್ನೂ ಐದು ವರ್ಷಗಳ ಕಾಲ ಎತ್ತಿಹಿಡಿದಿದೆ. ಐದು ವರ್ಷಗಳ ಹಿಂದೆ 2019 ರಲ್ಲಿ ಈ ಸಂಘಟನೆಯನ್ನು ಮೊದಲ ಬಾರಿ ನಿಷೇಧಿಸಲಾಗಿತ್ತು ಮತ್ತು ಜುಲೈ 10 ರಂದು ಈ ಆದೇಶವನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಿಸಲಾಯಿತು.

ಅಮೆರಿಕನ್ ಮತ್ತು ಕೆನಡಾದ ಪ್ರಜೆಯಾದ ಪನ್ನುನ್, ಸಿಖ್ಖರಿಗೆ ಸ್ವತಂತ್ರ ದೇಶವಾದ ಖಲಿಸ್ತಾನವನ್ನು ನೀಡಬೇಕು ಎಂದು ಪ್ರತಿಪಾದಿಸುವ ಪ್ರತ್ಯೇಕವಾದಿಯಾಗಿದ್ದಾರೆ. 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅವರನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಘೋಷಿಸಲಾಯಿತು.

2021 ರಿಂದ, ಸಿಖ್ಸ್ ಫಾರ್ ಜಸ್ಟೀಸ್ ಭಾರತದಿಂದ ಪ್ರತ್ಯೇಕ ಸಿಖ್ ದೇಶವನ್ನು ರಚಿಸಬೇಕು ಎಂಬ ಬಗ್ಗೆ ಕೆನಡಾ ಸೇರಿದಂತೆ ವಿದೇಶಗಳಲ್ಲಿ ಹಲವಾರು ಅನಧಿಕೃತ “ಜನಮತಸಂಗ್ರಹ” ಗಳನ್ನು ಆಯೋಜಿಸಿದೆ. 2018 ರಿಂದ ಹಲವಾರು ರಾಜ್ಯ ಪೊಲೀಸ್ ಪಡೆಗಳು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಸಿಖ್ ಫಾರ್ ಜಸ್ಟೀಸ್ ವಿರುದ್ಧ ಕನಿಷ್ಠ 122 ಪ್ರಕರಣಗಳನ್ನು ದಾಖಲಿಸಿವೆ. ಈವರೆಗೆ ಪ್ರಕರಣಗಳಲ್ಲಿ ಒಟ್ಟು 105 ಜನರನ್ನು ಬಂಧಿಸಲಾಗಿದೆ ಎಂದು ದಿ ಹಿಂದೂ ಮಾಡಿದೆ.

ರಕ್ಷಣಾ ಸಚಿವರಿಗೆ ಕಳುಹಿಸಲಾಗಿದೆ ಎಂಬ ಬೆದರಿಕೆ ಧ್ವನಿಯಲ್ಲಿ, ಸಿಖ್ಖರು ಭಾರತ ಸರ್ಕಾರದ ಅಡಿಯಲ್ಲಿ “ಅಸ್ತಿತ್ವದ ಬೆದರಿಕೆಗಳನ್ನು” ಎದುರಿಸುತ್ತಿದ್ದಾರೆ ಮತ್ತು ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಮಾಡಲು ಬಯಸದಿದ್ದರೆ ಸಂಸದರು ಮನೆಯಲ್ಲೇ ಇರಬೇಕೆಂದು ಪನ್ನುನ್ ಎಚ್ಚರಿಸಿದ್ದಾರೆ ಎಂದು ನ್ಯಾಯಮಂಡಳಿಗೆ ಕೇಂದ್ರ ಸರ್ಕಾರ ನೀಡಿದ ಅಫಿಡವಿಟ್ ಸಲ್ಲಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

“ಈ ಕರೆ ಅಂತರರಾಷ್ಟ್ರೀಯ ಸಂಖ್ಯೆಯಿಂದ ಬಂದಿದ್ದು, ಇಂಟರ್‌ಪೋಲ್ ಸಹಾಯದಿಂದ ಬಳಕೆದಾರರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಗೃಹ ಸಚಿವಾಲಯವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. 2023 ರಲ್ಲಿ ಪಂಜಾಬ್‌ನಲ್ಲಿ ನಡೆದ ರೈಲ್ವೆ ಧ್ವಂಸ ಪ್ರಕರಣಗಳಲ್ಲಿ ಸಿಖ್ಸ್ ಫಾರ್ ಜಸ್ಟೀಸ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಅಲ್ಲದೆ, ಮಾರ್ಚ್ 14, 2023 ರಂದು, ಭಟಿಂಡಾದ ಲೆಹ್ರಾ ಮಾವುತ್ ಗ್ರಾಮದಲ್ಲಿ ಹಳಿಯ ಕ್ಲಿಪ್‌ಗಳನ್ನು ಸಿಖ್ಸ್ ಫಾರ್ ಜಸ್ಟೀಸ್ ಸದಸ್ಯರು ತೆಗೆದುಹಾಕಿದ್ದಾರೆ ಎಂದು ಅಫಿಡವಿಟ್ ಆರೋಪಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನಾಲ್ಕು ದಿನಗಳ ನಂತರ, ಪನ್ನುನ್ ಅವರ ನಿರ್ದೇಶನದ ಮೇರೆಗೆ ಅವರು ಪತ್ರಾಲಾ ರೈಲು ನಿಲ್ದಾಣದ ಬಳಿಯ ರೈಲ್ವೆ ಹಳಿಯಿಂದ ಸುಮಾರು 50 ಕ್ಲಾಂಪ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಸರ್ಕಾರ ಅರೋಪಿಸಿದೆ.

ಇದನ್ನೂಓದಿ:  ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ಇದು ಹಿಂದುತ್ವದ ಸರ್ಕಾರ; 10, 12 ನೇ ತರಗತಿಯ ಪರೀಕ್ಷೆಯಲ್ಲಿ ಬುರ್ಖಾ ನಿಷೇಧಿಸಿ – ಮಹಾರಾಷ್ಟ್ರ ಬಿಜೆಪಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...