Homeಚಳವಳಿರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

"ಈ ಹೋರಾಟವನ್ನು ದಿಕ್ಕುತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ಮತ್ತು RSS‌ ಹಾಗೂ ಬಲಪಂಥೀಯ ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದು ರೈತರು ಆರೋಪಿಸಿದ್ದಾರೆ"

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ದಿಕ್ಕು ತಪ್ಪಿಸುವ ಸಲುವಾಗಿ ಖಲೀಸ್ತಾನಿ ಕರಪತ್ರ ಮತ್ತು ಸ್ಟಿಕ್ಕರ್‌ಗಳನ್ನು ಹಂಚುತ್ತಿದ್ದ RSS‌ ಕಾರ್ಯಕರ್ತನನ್ನು ರೈತ ಹೋರಾಟಗಾರರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಶಬ್ನಂ ಹಶ್ಮಿ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ರೈತ ಆಂದೋಲನವನ್ನು ದಿಕ್ಕುತಪ್ಪಿಸಲು RSS‌ ಕಾರ್ಯಕರ್ತನೊಬ್ಬ ಖಲೀಸ್ತಾನಿ ಕರಪತ್ರ ಮತ್ತು ಸ್ಟಿಕ್ಕರ್‌ಗಳನ್ನು ವಿತರಿಸುತ್ತಿದ್ದ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ದಯವಿಟ್ಟು ವೀಕ್ಷಿಸಿ ಮತ್ತು ರೀಟ್ವೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಸಂಸದರು: ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

 

ಇದನ್ನೂ ಓದಿ: ಯುವಜನೋತ್ಸವ: ಕನ್ನಡ ಬೇಡ -ಇಂಗ್ಲಿಷ್, ಹಿಂದಿಗೆ ಅವಕಾಶ ಎಂದ ಸರ್ಕಾರ!

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೇಶದಾದ್ಯಂತ ರೈತರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಹೋರಾಟವನ್ನು ದಿಕ್ಕುತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ಮತ್ತು RSS‌ ಹಾಗೂ ಬಲಪಂಥೀಯ ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.

ಹೋರಾಟ ಮಾಡುತ್ತಿರುವ ರೈತರನ್ನು ಭಯೋತ್ಪಾದಕರು, ಖಲೀಸ್ತಾನಿಗಳು, ನಕ್ಸಲೈಟ್‌ಗಳು ಎಂದು ಬಿಂಬಿಸುವಲ್ಲಿ ಬಿಜೆಪಿ ಐಟಿ ಸೆಲ್‌ನ ಪಾತ್ರ ಬಹಳಷ್ಟಿದೆ ಎಂದೂ ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಕನ್ನಡ’ದ ಸಿನೆಮಾ ಅಂದ್ರೆ ಯಾವುದು? : ಕೆ.ಫಣಿರಾಜ್

ಇದರ ನಡುವೆಯೂ, ಈ ಕಾನೂನುಗಳನ್ನು ಹಿಂಪಡೆಯುವಂತೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...