Homeಮುಖಪುಟಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

- Advertisement -
- Advertisement -

ಕೆನಡಾದ ಬ್ರಾಮ್ಟನ್‌ಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ಖಾಲಿಸ್ತಾನಿ ಧ್ವಜ ಹಿಡಿದಿರುವ ಗುಂಪು ಮತ್ತೊಂದು ಕೆಲ ಜನರ ಮೇಲೆ ದಾಳಿ ನಡೆಸಿ, ಹಲ್ಲೆ ಮಾಡುತ್ತಿರುವುದು ಇದೆ.

ಕೆನಡಾದ ಸಂಸದ, ಕರ್ನಾಟಕ ಮೂಲದ ಚಂದ್ರ ಆರ್ಯ ಅವರು ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಘಟನೆಯನ್ನು ಖಂಡಿಸಿದ್ದಾರೆ. “ಬ್ರಾಮ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರ ಕೃತ್ಯವನ್ನು ಒಪ್ಪಲಾಗದು. ಕೆನಡಾದ ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಮುಕ್ತಾವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕು ಇದೆ” ಎಂದಿದ್ದಾರೆ. ಹಿಂದೂ ಸಮುದಾಯದ ರಕ್ಷಣೆ ಹಾಗೂ ಪ್ರಕರಣದ ತನಿಖೆಯ ನಿಟ್ಟಿನಲ್ಲಿ ತ್ವರಿತವಾಗಿ ಪ್ರತಿಕ್ರಿಯಿಸಿದ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬಳಿಕ ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಹದೆಗೆಟ್ಟಿದೆ. ಈ ನಡುವೆ ಹಿಂದೂಗಳ ಮೇಲೆ ದಾಳಿ ನಡೆದಿರುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...