Homeಅಂತರಾಷ್ಟ್ರೀಯಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

- Advertisement -
- Advertisement -

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮ್ಯಾನ್‌ಹ್ಯಾಟನ್‌ ಫೆಡರಲ್ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಗಳು ಹೇಳಿವೆ.

ಪನ್ನುನ್ ಹತ್ಯೆಗಾಗಿ 1,00,000 ಡಾಲರ್ ಹಣ ನೀಡುವುದಾಗಿ ಒಪ್ಪಿಕೊಂಡಿದ್ದ ಮತ್ತು ಅದರಲ್ಲಿ 15,000 ಡಾಲರ್ ಅನ್ನು ಮುಂಗಡವಾಗಿ ಪಾವತಿಸಿದ್ದ ಆರೋಪ ಈತನ ಮೇಲಿದೆ.

ಗುಪ್ತಾ ಹಂತಕನೆಂದು ಭಾವಿಸಿ ಸಂಪರ್ಕಿಸಿದ್ದು ಅಸಲಿಗೆ ಅಮೆರಿಕದ ರಹಸ್ಯ ಪೊಲೀಸ್ ಅಧಿಕಾರಿಯಾಗಿದ್ದರಿಂದ ಈ ಸಂಚು ವಿಫಲವಾಯಿತು ಎನ್ನಲಾಗಿದೆ. ಈ ತಪ್ಪೊಪ್ಪಿಗೆಯ ಹಿನ್ನೆಲೆಯಲ್ಲಿ ಆತನಿಗೆ ಗರಿಷ್ಠ 40 ವರ್ಷಗಳವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.

ಈ ಸಂಚಿನಲ್ಲಿ ಭಾರತದ ಮಾಜಿ ಗುಪ್ತಚರ ಅಧಿಕಾರಿ ವಿಕಾಸ್ ಯಾದವ್ ನಿರ್ದೇಶನ ನೀಡಿದ್ದರು ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ಆರೋಪಿಸಿದೆ.

ಅಮೆರಿಕ ಮತ್ತು ಕೆನಡಾ ಪೌರತ್ವ ಹೊಂದಿರುವ, ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ (ಎಸ್‌ಎಫ್‌ಜೆ) ಸಂಘಟನೆಯ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ನ್ಯೂಯಾರ್ಕ್‌ನಲ್ಲಿ ಸಂಚು ರೂಪಿಸಲಾಗಿತ್ತು ಎಂದು ಅಮೆರಿಕ ಆರೋಪ ಮಾಡಿದೆ. ಈ ಪ್ರಕರಣದಲ್ಲಿ ಹತ್ಯೆಗೆ ಸುಪಾರಿ, ಸಂಚು ಮತ್ತು ಹಣದ ಒಪ್ಪಂದ ಮಾಡಿಕೊಂಡ ಆರೋಪ ನಿಖಿಲ್ ಗುಪ್ತಾ ಮೇಲಿದೆ.

ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಅಧಿಕಾರಿ ಎನ್ನಲಾದ ವಿಕಾಸ್ ಯಾದವ್ ಪರವಾಗಿ ಈ ಹತ್ಯೆಯನ್ನು ಕಾರ್ಯಗತಗೊಳಿಸಲು ಮಧ್ಯವರ್ತಿಯಾಗಿ ಕೆಲಸ ಮಾಡಿದ ಆರೋಪ ನಿಖಿಲ್ ಗುಪ್ತಾ ವಿರುದ್ದ ಮಾಡಲಾಗಿದೆ. ಗುಪ್ತಾಗೆ ಪನ್ನುನ್ ಹತ್ಯೆಯ ನಿರ್ದೇಶನ ನೀಡಿದ್ದು ಇವರೇ ಎಂಬುವುದು ಅಮೆರಿಕದ ವಾದ.

ನಿಖಿಲ್ ಗುಪ್ತಾ ಹಂತಕನೆಂದು ಭಾವಿಸಿ ಒಬ್ಬ ವ್ಯಕ್ತಿಯನ್ನು ಸಂಪರ್ಕಿಸಿದ್ದ. ಆದರೆ ಆ ವ್ಯಕ್ತಿ ಅಮೆರಿಕದ ಮಾದಕದ್ರವ್ಯ ಜಾರಿ ಸಂಸ್ಥೆಯ (ಡಿಇಎ) ರಹಸ್ಯ ಏಜೆಂಟ್ ಆಗಿದ್ದರು. ಈ ಕಾರಣದಿಂದ ಇಡೀ ಸಂಚು ಅಮೆರಿಕದ ಅಧಿಕಾರಿಗಳಿಗೆ ಮೊದಲೇ ತಿಳಿಯಿತು ಎನ್ನಲಾಗಿದೆ.

ಭಾರತ ಸರ್ಕಾರವು ಈ ಸಂಚಿನಲ್ಲಿ ತನ್ನ ಪಾತ್ರವನ್ನು ನಿರಾಕರಿಸಿದೆ. ಆದರೆ, ಅಮೆರಿಕ ನೀಡಿದ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಲು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿದೆ

ಪ್ರಸ್ತುತ ನಿಖಿಲ್ ಗುಪ್ತಾ ತಪ್ಪೊಪ್ಪಿಕೊಂಡಿರುವುದರಿಂದ ಆತನಿಗೆ ಸುಮಾರು 40 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಅಮೆರಿಕದ ಎಫ್‌ಬಿಐ ವಿಕಾಸ್ ಯಾದವ್ ವಿರುದ್ಧ ‘ವಾಂಟೆಡ್’ ನೋಟಿಸ್ ಜಾರಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...